ETV Bharat / state

ಕರ್ನಾಟಕಕ್ಕೆ 50 ವರ್ಷ ಪೂರ್ಣ: 'ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ' ಎಂಬ ಹೆಸರಿನಲ್ಲಿ ಇಡೀ ವರ್ಷ ಕಾರ್ಯಕ್ರಮ - Karnataka Budget

ಸಿಎಂ ಸಿದ್ದರಾಮಯ್ಯ ಶುಕ್ರವಾರ 14ನೇ ಬಾರಿ ಬಜೆಟ್ ಮಂಡಿಸಿದರು. ಕರ್ನಾಟಕಕ್ಕೆ 50 ವರ್ಷ ಪೂರ್ಣಗೊಳ್ಳುವ ಹಿನ್ನೆಲೆ 'ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ' ಎಂಬ ಹೆಸರಿನಲ್ಲಿ ಇಡೀ ವರ್ಷ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಘೋಷಣೆ ಮಾಡಿದರು.

CM Siddaramaiah
ಕರ್ನಾಟಕಕ್ಕೆ 50 ವರ್ಷ ಪೂರ್ಣ: 'ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ' ಎಂಬ ಹೆಸರಿನಲ್ಲಿ ಇಡೀ ವರ್ಷ ಕಾರ್ಯಕ್ರಮ
author img

By

Published : Jul 7, 2023, 10:49 PM IST

ಬೆಂಗಳೂರು: ಮೈಸೂರು ರಾಜ್ಯವು ಕರ್ನಾಟಕ ಎಂದು ಮರುನಾಮಕರಣವಾಗಿ 2023ರ ನವೆಂಬರ್ 1ಕ್ಕೆ 50 ವರ್ಷ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ 'ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ' ಎಂಬ ಹೆಸರಿನಲ್ಲಿ ಇಡೀ ವರ್ಷ ಕಾರ್ಯಕ್ರಮ ನಡೆಸಲು ಬಜೆಟ್​ನಲ್ಲಿ ಘೋಷಿಸಲಾಗಿದೆ.

ಕರ್ನಾಟಕದ ಇತಿಹಾಸ, ಕಲೆ, ಸಾಹಿತ್ಯ, ಸಂಸ್ಕೃತಿ, ಹಾಗೂ ನಾಡು-ನುಡಿಗೆ ಸಂಬಂಧಿಸಿದಂತೆ ಮತ್ತು ಯುವಜನತೆಯಲ್ಲಿ ಕನ್ನಡ- ಕನ್ನಡಿಗ- ಕರ್ನಾಟಕದ ಅರಿವು ಮೂಡಿಸುವ ಯೋಜನೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕನ್ನಡ ಸಾಹಿತ್ಯ ಲೋಕಕ್ಕೆ ಸಲ್ಲಿಸಿದ ಅನುಪಮ ಸೇವೆಯನ್ನು ಸ್ಮರಿಸಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಡಾ. ಎಂ. ಎಂ. ಕಲಬುರಗಿ ಅವರ ಹೆಸರಿನಲ್ಲಿ ಒಂದು ಟ್ರಸ್ಟ್ ಸ್ಥಾಪಿಸಲಾಗುವುದು. ಖ್ಯಾತ ಸಾಹಿತಿ ಕೆ. ಪಿ. ಪೂರ್ಣಚಂದ್ರ ತೇಜಸ್ವಿ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಪ್ರತಿಷ್ಠಾನದ ಮೂಲಕ ಅವರ ಸಾಹಿತ್ಯ ಹಾಗೂ ಪರಿಸರ ಸಂರಕ್ಷಣೆಯ ಚಿಂತನೆಗಳನ್ನು ಯುವ ಜನಾಂಗಕ್ಕೆ ಪರಿಚಯಿಸುವ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು 2 ಕೋಟಿ ರೂ. ಗಳನ್ನು ಒದಗಿಸಲಾಗುವುದು.
ನಮ್ಮ ರಾಜ್ಯದ ಜಾನಪದ ಕಲೆಗಳನ್ನು ಉಳಿಸಿ ಬೆಳೆಸಲು ಮತ್ತು ಯುವ ಪೀಳಿಗೆಗೆ ಪರಿಚಯಿಸಲು ಪ್ರಮುಖ ಪಾತ್ರವಹಿಸುತ್ತಿರುವ ರಾಮನಗರ ಜಿಲ್ಲೆಯ ಜಾನಪದ ಲೋಕಕ್ಕೆ ಎರಡು ಕೋಟಿ ರೂ. ಅನುದಾನ ನೀಡಲಾಗುವುದು. ಇದೇ ಮಾದರಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಕೊಪ್ಪಳ ಜಿಲ್ಲೆಯಲ್ಲಿ ಜಾನಪದ ಲೋಕ ಸ್ಥಾಪನೆ ಮಾಡಲಾಗುವುದು ಎಂದು ಬಜೆಟ್​ನಲ್ಲಿ ಪ್ರಸ್ತಾಪಿಸಲಾಗಿದೆ.

ಬಂಜಾರ ಸಮುದಾಯದ ಸಾಂಸ್ಕೃತಿಕ ಮತ್ತು ಜಾನಪದ ನೃತ್ಯ ಕಲೆಗಳು ನಶಿಸಿ ಹೋಗುತ್ತಿರುವ ಕಾರಣ ಅವರ ಸಂಸ್ಕೃತಿಯನ್ನು ಬೆಳೆಸುವ ಹಾಗೂ ಉಳಿಸುವ ನಿಟ್ಟಿನಲ್ಲಿ ವಿನೂತನ ಕಾರ್ಯಕ್ರಮವನ್ನು ಆಯೋಜಿಸಲಾಗುವುದು. ಕರ್ನಾಟಕದ ಬುಡಕಟ್ಟು ಸಮುದಾಯದ ಜನರ ಕಲಾಪ್ರತಿಭೆಯನ್ನು ಪರಿಚಯಿಸುವ ಹಿತದೃಷ್ಟಿಯಿಂದ ಮತ್ತು ಅವರ ಸಂಸ್ಕೃತಿ, ಜಾನಪದ ವೈದ್ಯ ಪದ್ಧತಿ, ಜಾನಪದ ಕಲೆಗಳ ಪ್ರದರ್ಶನ, ಕರಕುಶಲ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವುದಕ್ಕೆ ಉತ್ತೇಜನ ನೀಡಲು ಬುಡಕಟ್ಟು ಜನಾಂಗದ ಕಲಾವಿದರ ಸಮಾವೇಶವನ್ನು ಆಯೋಜಿಸಲಾಗುವುದು ಎಂದು ಬಜೆಟ್​ನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬಜೆಟ್ ಭಾಷಣದಲ್ಲಿ ಸಾಹಿತಿಗಳ ಸಾಲುಗಳನ್ನು ಉಲ್ಲೇಖಿಸಿದ ಸಿಎಂ: 'ಒಂದೇ ಒಂದೇ ಕರ್ನಾಟಕವೊಂದೇ, ಹಿಂದೆ ಮುಂದೆ ಎಂದೆ ಕರ್ನಾಟಕ ಒಂದೇ, ಜಗದೇಳಿಗೆಯಾಗುವುದಿದೆ ಕರ್ನಾಟಕದಿಂದೆ'. ಹೀಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಡಿಸಿದ ಬಜೆಟ್ ಭಾಷಣದಲ್ಲಿ ಪ್ರಸಿದ್ಧ ಕವಿಗಳು ಹಾಗೂ ಸಾಹಿತಿಗಳ ಸಾಲುಗಳನ್ನು ಉಲ್ಲೇಖಿಸಿದರು.

ರಾಷ್ಟ್ರಕವಿ ಕುವೆಂಪು, ಸಿದ್ದಯ್ಯ ಪುರಾಣಿಕ್, ಡಾ. ದ.ರಾ. ಬೇಂದ್ರೆ, ಕೆ.ಎಸ್. ನಿಸಾರ್ ಅಹ್ಮದ್, ಸರ್ವಜ್ಞ, ಬಸವಣ್ಣ, ಡಿ. ವಿ. ಜಿ, ಚನ್ನವೀರ ಕಣವಿ, ನಾರಾಯಣಗುರು, ಭಾರತರತ್ನ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ, ಇಂದಿರಾ ಗಾಂಧಿ, ಪಿ. ಲಂಕೇಶ್ ಸೇರಿದಂತೆ ಈ ಮಹಾನ್ ವ್ಯಕ್ತಿಗಳು ಹೇಳಿರುವ ಸಾಲುಗಳನ್ನು ಸ್ಮರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ವಿನೂತನವಾಗಿ ಬಜೆಟ್ ಮಂಡಿಸಿದ್ದಾರೆ. 'ಯಾವ ಕಾಲದ ಶಾಸ್ತ್ರವೇನು ಹೇಳಿದರೇನು, ಎದೆಯ ದನಿಗೂ ಮಿಗಿಲು ಶಾಸ್ತ್ರವಿಹುದೇನು?' ಎಂದು ರಾಷ್ಟ್ರಕವಿ ಕುವೆಂಪು ಹೇಳಿರುವ ಸಾಲುಗಳನ್ನು ನೆನಪಿಸಿಕೊಳ್ಳುತ್ತಾ,
ನನ್ನ ಹಿಂದಿನ ಎಲ್ಲ ಆಯವ್ಯಯಗಳಲ್ಲಿ 'ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು' ಎಂಬಂತೆ ಕರ್ನಾಟಕಕ್ಕೆ ಮಾದರಿ ಆಡಳಿತವನ್ನು ನೀಡುವ ಪ್ರಯತ್ನ ಮಾಡುತ್ತಾ ಬಂದಿದ್ದೆ. ಪ್ರಸುತ್ತ ಮಂಡಿಸುತ್ತಿರುವ ಆಯವ್ಯಯ ಪತ್ರದಲ್ಲಿ ಈ ಮಾದರಿಯನ್ನು ಇನ್ನಷ್ಟು ಆಳವಾಗಿಸುವ, ವಿಸ್ತಾರವಾಗಿಸುವ ಪ್ರಯತ್ನವಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ಓದಲು ಆರಂಭಿಸಿದರು.

ಇದೇ ಸಂದರ್ಭದಲ್ಲಿ ಗಿರೀಶ್ ಕಾರ್ನಾಡರ ಯಯಾತಿ ನಾಟಕದ ಸಾಲುಗಳನ್ನು ಸಹ ನೆನಪು ಮಾಡಿಕೊಂಡರು. 'ಬೆಳಕಿಲ್ಲದ ಹಾದಿಯಲ್ಲಿ ನಡೆಯಬಹುದು ಪುರು, ಆದರೆ, ಕನಸುಗಳಿಲ್ಲದ ಹಾದಿಯಲ್ಲಿ ನಡೆಯಲಿ ಹೇಗೆ?' ಉತ್ತಮ ಆಡಳಿತ ಇಲ್ಲವಾದರೆ ನ್ಯಾಯವಿರದು; ದೂರದೃಷ್ಟಿಯಿರದು, ಗುರಿಯಿರದು, ಕರ್ನಾಟಕದ ಜನತೆಗಾಗಿ ಕನಸುಗಳೇ ಇರಲಾರವು ಎಂದು ಉಲ್ಲೇಖಿಸಿದರು.

'ನಡೆಯದ ಹಾದಿಯಲ್ಲಿ ಎಡವಿದೆನೆಂದರೆ ಒಪ್ಪುವುದೆ ಅಯ್ಯಾ? ಕಾಣದ ಮುಖದ ಕುಂದನೆಣಿಸಿದರೆ ಒಪ್ಪುವುದೆ ಅಯ್ಯಾ? ಉಣ್ಣದ ಅಡಿಗೆಯ ರುಚಿಯ ಟೀಕಿಸಿದರೆ ಒಪ್ಪುವುದೆ ಅಯ್ಯಾ? ನೋಡದುದನ್ನು ನೋಡಿದಂತೆ ವರ್ಣಿಸಿದರೆ ಒಪ್ಪುವುದೆ ಅಯ್ಯಾ?' ಎಂಬ ಸಿದ್ದಯ್ಯ ಪುರಾಣಿಕರ ಸಾಲುಗಳನ್ನು ನೆನಪು ಮಾಡಿಕೊಂಡರು.

ಎತ್ತೆಮ್ಮೆ ಹೂಡುವುದು| ಉತ್ತೊಮ್ಮೆ ಹರಗುವುದು| ಬಿತ್ತೊಮ್ಮೆ ಹರಗಿ, ಕಳೆತೆಗೆದರಾ ಬೆಳೆಯು| ಎತ್ತುಗೈಯುದ್ದ ಎಂಬ ಸರ್ವಜ್ಞನ ಸಾಲುಗಳನ್ನು ನೆನೆದು ಸಿಎಂ ಕೃಷಿ ಕ್ಷೇತ್ರದ ಬಗ್ಗೆ ಮಾತನಾಡಿದರು.

ಇದನ್ನೂ ಓದಿ: ಸಮ ಸಮಾಜದ ಮಾರ್ಗದಲ್ಲಿ ಎದುರಾಗುವ ಅಡ್ಡಿಗಳನ್ನು ನಿವಾರಿಸಿಕೊಳ್ಳುವ ಛಾತಿ ತೋರಿಸಿದ ಸಿಎಂ ಸಿದ್ದರಾಮಯ್ಯ!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.