ETV Bharat / state

ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ 100 ದಿನ: ವಿವಾದಗಳ ನಡುವೆ ಸಿದ್ದರಾಮಯ್ಯ 'ಗ್ಯಾರಂಟಿ' ಕಸರತ್ತು!

ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿದು ಇಂದಿಗೆ 100 ದಿನ!. ಈ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ಕೇಳಿಬಂದ ಆರೋಪಗಳು, ವಿವಾದಗಳ ಕುರಿತ ವರದಿ ಇಲ್ಲಿದೆ.

ಕಾಂಗ್ರೆಸ್ ಸರ್ಕಾರಕ್ಕೆ ಶತದಿನದ ಸಂಭ್ರಮ
ಕಾಂಗ್ರೆಸ್ ಸರ್ಕಾರಕ್ಕೆ ಶತದಿನದ ಸಂಭ್ರಮ
author img

By ETV Bharat Karnataka Team

Published : Aug 27, 2023, 10:15 AM IST

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ 135 ಸ್ಥಾನಗಳನ್ನು ಗಳಿಸಿ, ಭರ್ಜರಿ ಬಹುಮತದಿಂದ ಅಸ್ತಿತ್ವಕ್ಕೆ ಬಂದ ಕಾಂಗ್ರೆಸ್‌ ಸರ್ಕಾರ ನೂರು ದಿನಗಳನ್ನು ಪೂರೈಸುತ್ತಿದೆ. ಸರ್ಕಾರ ರಚನೆ, ಮುಖ್ಯಮಂತ್ರಿ ಆಯ್ಕೆ ಕಸರತ್ತು, ಸಚಿವ ಸ್ಥಾನಗಳಿಗೆ ಲಾಬಿ ಸೇರಿದಂತೆ ಮತ್ತಿತರ ಗೊಂದಲದಲ್ಲೇ ಕಾಂಗ್ರೆಸ್ ನಾಯಕರು ಕೆಲದಿನಗಳನ್ನು ದೂಡಿದ್ದರು. ಹೈಕಮಾಂಡ್ ಮಧ್ಯಪ್ರವೇಶ ಮಾಡಿದ್ದರಿಂದ ಸರ್ಕಾರ ರಚನೆಯಾಯಿತು. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದರು. ಇದಾದ ನಂತರ ಸ್ವಪಕ್ಷೀಯ ಶಾಸಕರ ಅಸಮಾಧಾನದ ಬೇಗುದಿಯಲ್ಲೇ ಸಂಪುಟವೂ ರಚನೆಯಾಯಿತು.

ಸರ್ಕಾರ ಇದೀಗ ತನ್ನ ಜನಪ್ರಿಯ ಗ್ಯಾರಂಟಿ ಯೋಜನೆಗಳ ಜಾರಿಯ ಸವಾಲು ಎದುರಿಸುತ್ತಿದೆ. ಈ ಯೋಜನೆಗಳು ಇನ್ನೂ ಪೂರ್ಣಗೊಂಡಿಲ್ಲ. ಹೀಗಾಗಿ ಅಭಿವೃದ್ದಿ ಕಾಮಗಾರಿಗಳ ಕಡೆ ಸರ್ಕಾರದ ಗಮನ ಹರಿಸಿಲ್ಲ. ತಮ್ಮ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ವಿಚಾರದಲ್ಲೂ ವಿಳಂಬ ಆಗುತ್ತಿರುವ ಬಗ್ಗೆ ಇತ್ತೀಚೆಗೆ ಆಡಳಿತ ಪಕ್ಷದ ಶಾಸಕರೇ ತಗಾದೆ ತೆಗೆದಿದ್ದು, ಸಿಎಂ ಸಿದ್ದರಾಮಯ್ಯ ತಣ್ಣಗಾಗಿಸಿದ್ದಾರೆ.

ಕಾಂಗ್ರೆಸ್ ಸರ್ಕಾರಕ್ಕೆ ಶತದಿನದ ಸಂಭ್ರಮ
ಕಾಂಗ್ರೆಸ್ ಸರ್ಕಾರಕ್ಕೆ ಶತದಿನದ ಸಂಭ್ರಮ

ಗುತ್ತಿಗೆದಾರರಿಂದ ಕಮಿಷನ್ ಆರೋಪ: ಶಾಸಕರ ಅಸಮಾಧಾನ ಮುಗಿದು ನಿಟ್ಟುಸಿರು ಬಿಡುತ್ತಿರುವ ವೇಳೆಗೆ ಸರ್ಕಾರದ ವಿರುದ್ಧ ಗುತ್ತಿಗೆದಾರರು ಸಮರ ಆರಂಭಿಸಿದ್ದು, ಈ ಹಿಂದೆ ಬೆಂಗಳೂರು ನಗರವೂ ಸೇರಿದಂತೆ ವಿವಿಧ ಕಡೆಗಳಲ್ಲಿ ನಡೆಸಿದ ಕಾಮಗಾರಿಗಳ ಬಿಲ್ ಹಣ ಬಿಡುಗಡೆ ಮಾಡಲು ಕಮಿಷನ್ ನೀಡುವಂತೆ ಒತ್ತಾಯ ಮಾಡಲಾಗುತ್ತಿದೆ ಎಂಬ ಆರೋಪದೊಂದಿಗೆ ಸರ್ಕಾರ ಇಕ್ಕಟ್ಟಿಗೆ ಸಿಲುಕಿದೆ.

ಸಚಿವ ಚಲುವರಾಯಸ್ವಾಮಿ ವಿರುದ್ಧ ಭ್ರಷ್ಟಾಚಾರ ಆರೋಪ': ಗುತ್ತಿಗೆದಾರರ ಪೈಕಿ ಕೆಲವರು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ನೇರ ಆರೋಪ ಮಾಡಿದ್ದು, ಇದೇ ಅವಕಾಶವನ್ನು ಬಳಸಿಕೊಂಡ ಬಿಜೆಪಿ ಹಾಗೂ ಜೆಡಿಎಸ್ ಹೋರಾಟಕ್ಕೆ ಮುಂದಾಗಿದೆ. ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧವೂ ಭ್ರಷ್ಟಾಚಾರದ ಆರೋಪಗಳು ಕೇಳಿ ಬಂದಿದ್ದು, ಸಿಐಡಿ ತನಿಖೆ ನಡೆಯುತ್ತಿದೆ.

ಮತ್ತೊಂದೆಡೆ, ವಿಧಾನ ಪರಿಷತ್ತಿನ 3 ಸ್ಥಾನಗಳಿಗೆ ಸದಸ್ಯರ ನಾಮಕರಣ ವಿಚಾರವೂ ಕಾಂಗ್ರೆಸ್​ನಲ್ಲಿ ಮತ್ತೆ ಅತೃಪ್ತಿ ಹುಟ್ಟುಹಾಕಿತ್ತು. ಯಾವುದೇ ಹೊಸ ಸರ್ಕಾರ ಅಧಿಕಾರಕ್ಕೆ ಬಂದ ವೇಳೆ ತನ್ನದೇ ಕಾರ್ಯಕ್ರಮಗಳನ್ನು ಒಳಗೊಂಡ ಮುಂಗಡ ಪತ್ರವನ್ನು ವಿಧಾನಮಂಡಲದ ಸದನಗಳಲ್ಲಿ ಮಂಡಿಸಿ ಅನುಮೋದನೆ ಪಡೆಯುವುದು ಸಾಂವಿಧಾನಿಕ ಕರ್ತವ್ಯ. ಅದಕ್ಕೂ ಮುನ್ನ ಅಧಿಕಾರದಲ್ಲಿದ್ದ ಇನ್ನೊಂದು ರಾಜಕೀಯ ಪಕ್ಷ ತನ್ನ ಅಧಿಕಾರವಧಿಯಲ್ಲಿ ಬಜೆಟ್ ಮಂಡಿಸಿ ಒಪ್ಪಿಗೆ ಪಡೆದಿದ್ದರೂ ನಂತರ ಚುನಾವಣೆಯಲ್ಲಿ ಗೆದ್ದು ಬಂದು ಅಧಿಕಾರಕ್ಕೇರುವ ಪಕ್ಷ ತನ್ನದೇ ಆದ ಕಾರ್ಯಕ್ರಮಗಳನ್ನೊಳಗೊಂಡ ಬಜೆಟ್ ಮಂಡಿಸಿ ಜಾರಿಗೆ ತರುವುದು, ಹಿಂದಿನ ಸರ್ಕಾರ ಕೈಗೊಂಡಿದ್ದ ಕೆಲವೊಂದು ಯೋಜನೆಗಳು, ಕಾರ್ಯಕ್ರಮಗಳನ್ನು ಕೈಬಿಡುವುದು ಸಹಜ ರಾಜಕೀಯ ಪ್ರಕ್ರಿಯೆಯಾಗಿದೆ.

ಅಕ್ರಮಗಳ ವಿರುದ್ಧ ತನಿಖೆ: ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದ ಅವಧಿಯಲ್ಲಿ ಗುತ್ತಿಗೆದಾರರ ಸಂಘ ಸರ್ಕಾರದ ವಿರುದ್ಧ ಶೇ.40 ರ ಕಮಿಷನ್ ಆರೋಪ ಮಾಡಿತ್ತು. ಇದೇ ವಿಚಾರವನ್ನು ಮುಂದಿಟ್ಟುಕೊಂಡು ಆಗ ಪ್ರತಿಪಕ್ಷವಾಗಿದ್ದ ಕಾಂಗ್ರೆಸ್ ಬಿಜೆಪಿ ವಿರುದ್ಧ ಹೋರಾಟ ನಡೆಸಿದ್ದಲ್ಲದೆ, ಚುನಾವಣೆಯಲ್ಲೂ ಇದೇ ವಿಚಾರವನ್ನು ಮುಂದಿಟ್ಟುಕೊಂಡು ಸ್ಪರ್ಧೆ ಮಾಡಿತ್ತು. ಈಗ ಕಾಂಗ್ರೆಸ್ ಸರ್ಕಾರ ಬಂದು ಮೂರು ತಿಂಗಳು ಕಳೆದಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ನಡೆದಿರುವ ಕಾಮಗಾರಿಗಳ ಅಕ್ರಮಗಳ ಬಗ್ಗೆ ಸಮಗ್ರ ತನಿಖೆ ನಡೆಸಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಹಿಂದಿನ ಸರ್ಕಾರದ ಅವಧಿಯಲ್ಲಿ ನಡೆದಿರುವ ಕಾಮಗಾರಿಗಳಲ್ಲಿ ಅಕ್ರಮ ನಡೆದಿದೆ ಎಂದು ಶಂಕಿಸಿ ತನಿಖೆಗೆ ಮುಂದಾಗಿರುವುದಷ್ಟೇ ಅಲ್ಲ, ಸಂಶಯಾಸ್ಪದ ಎಂದು ಕಂಡುಬಂದ ಕಾಮಗಾರಿಗಳ ಬಿಲ್ ಪಾವತಿ ತಡೆಹಿಡಿಯುವಂತೆ ಸೂಚಿಸಿದ್ದಾರೆ. ಇದು ರಾಜಕೀಯ ವಿವಾದವಾಗಿ ಮಾರ್ಪಟ್ಟಿದೆ.

ಕಾಂಗ್ರೆಸ್ ಸರ್ಕಾರಕ್ಕೆ ಶತದಿನದ ಸಂಭ್ರಮ
ಕಾಂಗ್ರೆಸ್ ಸರ್ಕಾರಕ್ಕೆ ಶತದಿನದ ಸಂಭ್ರಮ

ಕಾಮಗಾರಿಗಳಿಗೆ ಬಿಡುಗಡೆಯಾಗಬೇಕಿದೆ ಹಣ: ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಘೋಷಿಸಿರುವ ಹೊಸ ಯೋಜನೆಗಳ ಕಾರ್ಯಾರಂಭವೇ ಇನ್ನೂ ಆಗಿಲ್ಲ. ಒಂದು ಯೋಜನೆ ಘೋಷಣೆಯಾಗಿ ಕಾರ್ಯಾರಂಭ ಆಗುವವರೆಗೆ ಸರ್ಕಾರದ ಮಟ್ಟದಲ್ಲಿ ಹಲವು ಆಡಳಿತಾತ್ಮಕ ಪ್ರಕ್ರಿಯೆಗಳು ನಡೆಯುತ್ತವೆ. ಸಂಪನ್ಮೂಲದ ಲಭ್ಯತೆ ಆಧರಿಸಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ನಿರ್ಧರಿಸಿರುವುದರಿಂದ ಹೊಸ ಕಾಮಗಾರಿಗಳಿಗೆ ಹಣ ಬಿಡುಗಡೆ ಆಗಿಲ್ಲ.

ಹಳೇ ಕಾಮಗಾರಿಗಳ ಬಿಲ್ ಹಣ ಬಿಡುಗಡೆ ಮಾಡಲು ಕೆಲವು ಕಾನೂನಾತ್ಮಕ ಸಮಸ್ಯೆಗಳಿವೆ. ಕಳಪೆ ಕಾಮಗಾರಿ ದೂರುಗಳು ಸೇರಿದಂತೆ ಇನ್ನಿತರ ಅಕ್ರಮಗಳ ಬಗ್ಗೆ ತನಿಖೆ ನಡೆಯುತ್ತಿರುವ ಸಂದರ್ಭದಲ್ಲಿ ಹಣ ಬಿಡುಗಡೆ ಮಾಡಿದರೆ ಸರ್ಕಾರ ದ್ವಂದ್ವ ನೀತಿ ಅನುಸರಿಸಿದಂತಾಗುತ್ತದೆ. ಆದರೂ ಸಮರ್ಪಕವಾಗಿ ನಡೆದಿರುವ ಕಾಮಗಾರಿಗಳ ಬಿಲ್ ಹಣವನ್ನು ಮಂಜೂರು ಮಾಡುವಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಉಪ ಮುಖ್ಯಮಂತ್ರಿ ಶಿವಕುಮಾರ್ ಹೇಳಿದ್ದಾರೆ. ಆದರೆ ಇದನ್ನು ಕೇಳಲು ಗುತ್ತಿಗೆದಾರರು ತಯಾರಾಗಿಲ್ಲ. ಗುತ್ತಿಗೆದಾರರ ಬೆಂಬಲಕ್ಕೆ ಬಿಜೆಪಿ ನಿಂತಿದೆ. ಪರೋಕ್ಷವಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕೂಡಾ ಬೆಂಬಲಿಸಿದ್ದಾರೆ. ರಾಜ್ಯಪಾಲರ ಕಚೇರಿಯನ್ನೂ ಈ ವಿವಾದಕ್ಕೆ ಎಳೆದು ತರಲಾಗಿದೆ.

ಇನ್ನೊಂದೆಡೆ, ವಿಧಾನ ಪರಿಷತ್ತಿಗೆ ನೂತನ ಸದಸ್ಯರ ನಾಮಕರಣ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಕ್ಕಟ್ಟಿಗೆ ಸಿಲುಕಿದ್ದರು. ಸಚಿವ ಸಂಪುಟದಲ್ಲೂ ಈ ವಿಚಾರ ಪ್ರತಿಧ್ವನಿಸಿತ್ತು. ಬಹು ಮುಖ್ಯವಾಗಿ ಸುಧಾಮ್ ದಾಸ್ ನಾಮಕರಣಕ್ಕೆ ಕಾಂಗ್ರೆಸ್​ನಲ್ಲೇ ಅಪಸ್ವರ ಕೇಳಿ ಬಂದಿತ್ತು.

ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ಪಕ್ಷದಲ್ಲಿ ಮತ್ತು ಸರ್ಕಾರದಲ್ಲಿ ಪ್ರಶ್ನಾತೀತರಾಗಿದ್ದರು. ಈಗ ಸನ್ನಿವೇಶ ಬದಲಾಗಿದೆ. ಹಾಗೆಯೇ ಅವರ ಆಡಳಿತ ಶೈಲಿಯೂ ಬದಲಾಗಿದೆ. ಇದಕ್ಕೆ ಮುಖ್ಯಮಂತ್ರಿಗಳ ಕಚೇರಿಯಿಂದ ಹೊರಬೀಳುತ್ತಿರುವ ಅಧಿಕಾರಿಗಳ ವರ್ಗಾವಣೆ ಪಟ್ಟಿಯಲ್ಲಿನ ಗೊಂದಲಗಳೇ ಸಾಕ್ಷಿ.

ವರ್ಗಾವಣೆ ದಂಧೆ ಆರೋಪ: ಸರ್ಕಾರದಲ್ಲಿ ವರ್ಗಾವಣೆಯೂ ದೊಡ್ಡ ಸುದ್ದಿಯಾಗಿದೆ. ಸರ್ಕಾರದಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ ಎಂದು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಆರೋಪಿಸುತ್ತಿರುವುದು ಸರ್ಕಾರಕ್ಕೆ ನುಂಗಲಾರದ ತುತ್ತಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರೇ ತಿಂಗಳಿಗೆ ಹಲವು ಪ್ರಹಸನ ನಡೆದಿರುವುದು ಈಗ ಚರ್ಚೆಯ ವಿಷಯವಾಗಿದೆ.

ಇದನ್ನೂ ಓದಿ: ನಿಷ್ಠೆ ಉಳಿದಿಲ್ಲ, ತಕ್ಷಣಕ್ಕೆ ಸಿಗುವ ಅಧಿಕಾರಕ್ಕೆ ಮರುಳಾಗ್ತಾರೆ: ಹೆಚ್​.ಡಿ.ಕುಮಾರಸ್ವಾಮಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.