ETV Bharat / state

ಪಿಎಫ್​ಐ ಬ್ಯಾನ್​ ಸ್ವಾಗತಿಸಿದ ಕಾಂಗ್ರೆಸ್​ ನಾಯಕರು: ಆರ್​ಎಸ್​ಎಸ್ ವಿರುದ್ಧವೂ ಕ್ರಮಕ್ಕೆ ಒತ್ತಾಯ - ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ

ಪಿಎಫ್ಐ ಜೊತೆಗೆ ಒಂದೇ ನಾಣ್ಯದ ಇನ್ನೊಂದು ಮುಖ ಆಗಿರುವ ಆರ್​ಎಸ್ಎಸ್​ ವಿರುದ್ಧ ಬಿಜೆಪಿ ಯಾವಾಗ ಕ್ರಮ ಕೈಗೊಳ್ಳುತ್ತೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಪ್ರಶ್ನಿಸಿದ್ದಾರೆ.

karnataka-congress-leaders-reaction-on-pfi-ban
ಪಿಎಫ್​ಐ ಬ್ಯಾನ್​ ಸ್ವಾಗತಿಸಿದ ಕಾಂಗ್ರೆಸ್​ ನಾಯಕರು: ಆರ್​ಎಸ್​ಎಸ್ ವಿರುದ್ಧವೂ ಕ್ರಮಕ್ಕೆ ಒತ್ತಾಯ
author img

By

Published : Sep 28, 2022, 5:04 PM IST

ಬೆಂಗಳೂರು: ಕೇಂದ್ರ ಗೃಹ ಇಲಾಖೆ ಇಂದು ಪಿಎಫ್ಐ ಸಂಘಟನೆ ನಿಷೇಧ ಆಗಿರುವುದನ್ನು ಕಾಂಗ್ರೆಸ್ ನಾಯಕರು ಸ್ವಾಗತಿಸಿದ್ದಾರೆ. ಯಾರು ಕಾನೂನು ವಿರುದ್ಧವಾಗಿ ಇರ್ತಾರೆ, ಸಮಾಜದಲ್ಲಿ ಅಶಾಂತಿ ಉಂಟು ಮಾಡುವವರ ವಿರುದ್ಧ ಕ್ರಮ ಕೈಗೊಂಡರೆ ನಮ್ಮ ವಿರೋಧ ಇಲ್ಲ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಪಿಎಫ್​ಐ ಬ್ಯಾನ್​ ಸ್ವಾಗತಿಸಿದ ಕಾಂಗ್ರೆಸ್​ ನಾಯಕರು: ಆರ್​ಎಸ್​ಎಸ್ ವಿರುದ್ಧವೂ ಕ್ರಮಕ್ಕೆ ಒತ್ತಾಯ

ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಆರ್​ಎಸ್​ಎಸ್​ನವರೂ ಸಮಾಜದಲ್ಲಿ ಶಾಂತಿ ಹಾಳು ಮಾಡುತ್ತಿದ್ದಾರೆ. ಅವರ ಮೇಲೂ ಕ್ರಮ ತೆಗೆದುಕೊಳ್ಳಬೇಕು. ಯಾವುದೇ ಸಂಘಟನೆ ಆದರೂ ಬ್ಯಾನ್ ಮಾಡಬೇಕು ಎಂದರು. ಇದೇ ವೇಳೆ, ನಾವು ನುಡಿದಂತೆ ನಡೆದಿದ್ದೇವೆ ಎಂಬ ಬಿಜೆಪಿ ಟ್ವೀಟ್​ಗೆ ಸಿದ್ದರಾಮಯ್ಯ ತಿರುಗೇಟು ನೀಡಿ, ಇಷ್ಟು ದಿನ ಯಾಕೆ ಮಾಡಿರಲಿಲ್ಲ?. ಇಷ್ಟು ದಿನ ಏನ್ ಮಾಡುತ್ತಿದ್ದರು. ನಾವು ಹೇಳಿದ ಮೇಲೆ ಅವರು ಮಾಡಿದ್ದಾರೆ ಎಂದು ಹೇಳಿದರು.

ಒಂದೇ ನಾಣ್ಯದ ಇನ್ನೊಂದು ಮುಖ: ಈ ಬಗ್ಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಟ್ವೀಟ್ ಮಾಡಿ, ಸುದೀರ್ಘವಾದ ಚಂಚಲತೆಯ ನಂತರ ಒಂದು ಸರಿಯಾದ ದಿಕ್ಕಿನಲ್ಲಿ ಹೆಜ್ಜೆ ಇಡಲಾಗಿದೆ. ಪಿಎಫ್ಐ ಜೊತೆಗೆ ಒಂದೇ ನಾಣ್ಯದ ಇನ್ನೊಂದು ಮುಖ ಆಗಿರುವ ಆರ್​ಎಸ್ಎಸ್​ ವಿರುದ್ಧ ಯಾವಾಗ ಕ್ರಮ ಕೈಗೊಳ್ಳುತ್ತೆ ಬಿಜೆಪಿ?. ಎಲ್ಲ ರೀತಿಯ ಕೋಮುವಾದ ಮತ್ತು ದ್ವೇಷ ಸಮಾಜದ ರಚನೆಗೆ ಹಾನಿಕಾರಕ. ಅದನ್ನು ನಿಗ್ರಹಿಸುವ ಕೆಲಸ ಆಗಬೇಕೆಂದು ಒತ್ತಾಯಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕೂಡ ಹೇಳಿಕೆ ನೀಡಿದ್ದು, ಯಾವುದೇ ಸಂಸ್ಥೆ ದೇಶದ ಶಾಂತಿಗೆ ದಕ್ಕೆ ತಂದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಆಗಬೇಕು. ಕಾನೂನು ಎಲ್ಲರಿಗೂ ಒಂದೇ ಆಗಬೇಕು. ರಾಜ್ಯ, ದೇಶ ಭದ್ರತೆಗೆ ದಕ್ಕೆ ತರುವವರು, ಯಾರು ಸಮಾಜದಲ್ಲಿ ಪ್ರಚೋದನೆ, ಅಶಾಂತಿ ಮೂಡಿಸುತ್ತರೋ, ಅವರೆಲ್ಲ ಬ್ಯಾನ್ ಆಗಬೇಕು ಎಂದು ಹೇಳಿದ್ದಾರೆ.

ಆರ್​ಎಸ್​ಎಸ್ ಬ್ಯಾನ್ ಮಾಡಬೇಕು ಎಂಬ ವಿಷಯವಾಗಿ ಪ್ರತಿಕ್ರಿಯಿಸಿದ ಡಿಕೆಶಿ, ಭಾವನೆಗಳನ್ನ ಕೆರಳಿಸುವವರು ಪ್ರಚೋದನಕಾರಿ ಹೇಳಿಕೆ ಕೊಡುವ ಎಲ್ಲ ಸಂಘಟನೆಗಳನ್ನು ಬ್ಯಾನ್ ಮಾಡಲಿ. ಸರ್ಕಾರದವರಿಗೆ ಎಲ್ಲ ಗೊತ್ತಿದೆ. ನಾವು ಹೇಳೋದು ಏನಿದೆ ಎಂದರು.

  • The belated action of #PFIBan is a step in right direction after prolonged vacillation.

    When will the BJP Govt now act against “the other side of same coin” organizations close to BJP-RSS?

    Communalism & hate in all forms is harmful to societal fabric & must be curbed. https://t.co/9aAU0s7KgU

    — Randeep Singh Surjewala (@rssurjewala) September 28, 2022 " class="align-text-top noRightClick twitterSection" data=" ">

ಮಾಜಿ ಸಚಿವ ಪ್ರಿಯಾಂಕ್​ ಖರ್ಗೆ ಟ್ವೀಟ್ ಮಾಡಿ, ಭಾರತೀಯ ಸಂವಿಧಾನಕ್ಕೆ ವಿರುದ್ಧವಾಗಿರುವ ನಮ್ಮ ಪ್ರಜಾಪ್ರಭುತ್ವ ಮತ್ತು ಸಾಮಾಜಿಕ ರಚನೆಗೆ ಅಪಾಯವನ್ನುಂಟು ಮಾಡುವ ಯಾವುದೇ ಸಂಘಟನೆಯನ್ನು ಸಂಪೂರ್ಣವಾಗಿ ಬೇರು ಸಹಿತ ಕಿತ್ತುಹಾಕಬೇಕು. ಅದರ ಬಗ್ಗೆ ಎರಡನೇ ಆಲೋಚನೆ ಇಲ್ಲ. ಮುಂಬರುವ ದಿನಗಳಲ್ಲಿ ಸಮಾಜದಲ್ಲಿ ಶಾಂತಿ ಕದಡುವ ಎಲ್ಲ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿದ್ದಾರೆ.

  • ಸಂವಿಧಾನದ ಆಶಯಕ್ಕೆ ಹಾಗೂ ಭಾರತದ ಜಾತ್ಯತೀತ ತತ್ವಗಳಿಗೆ ವಿರುದ್ಧವಾಗಿರುವ ಯಾವುದೇ ಸಂಘಟನೆ ಅಥವಾ ರಾಜಕೀಯ ಪಕ್ಷಗಳನ್ನು ಕಾಂಗ್ರೆಸ್ ಪಕ್ಷ ವಿರೋಧಿಸಿಕೊಂಡೇ ಬಂದಿದೆ.

    PFI ಸೇರಿದಂತೆ ಸಮಾಜದಲ್ಲಿ ದ್ವೇಷ ಬಿತ್ತುವ, ಶಾಂತಿ, ಸಾಮರಸ್ಯ ಕದಡುವ ಯಾವುದೇ ಸಂಘಟನೆಗಳನ್ನು ನಿಷೇಧಿಸುವುದನ್ನು ಕಾಂಗ್ರೆಸ್ ಪಕ್ಷ ಸ್ವಾಗತಿಸುತ್ತದೆ.

    — Karnataka Congress (@INCKarnataka) September 28, 2022 " class="align-text-top noRightClick twitterSection" data=" ">

ಕಾಂಗ್ರೆಸ್ ಅಧಿಕೃತ ಖಾತೆಯಲ್ಲೂ ಟ್ವೀಟ್​: ರಾಜ್ಯ ಕಾಂಗ್ರೆಸ್​ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಪಿಎಫ್ಐ ಸಂಘಟನೆ ನಿಷೇಧವನ್ನು ಸ್ವಾಗತಿಸಿದ್ದು, ಸಂವಿಧಾನಕ್ಕೆ ಆಶಯಕ್ಕೆ ಹಾಗೂ ಭಾರತದ ಜಾತ್ಯತೀತ ತತ್ತ್ವಗಳಿಗೆ ವಿರುದ್ಧವಾಗಿರುವ ಯಾವುದೇ ಸಂಘಟನೆ ಅಥವಾ ರಾಜಕೀಯ ಪಕ್ಷಗಳನ್ನು ಕಾಂಗ್ರೆಸ್ ಪಕ್ಷ ವಿರೋಧಿಸಿಕೊಂಡೇ ಬಂದಿದೆ. ಪಿಎಫ್ಐ ಸೇರಿದಂತೆ ಸಮಾಜದಲ್ಲಿ ದ್ವೇಷ ಬಿತ್ತುವ, ಶಾಂತಿ, ಸಾಮರಸ್ಯ ಕದಡುವ ಯಾವುದೇ ಸಂಘಟನೆಗಳನ್ನು ನಿಷೇದಿಸುವುದನ್ನು ಕಾಂಗ್ರೆಸ್ ಪಕ್ಷ ಸ್ವಾಗತಿಸುತ್ತದೆ ಎಂದು ಟ್ವೀಟ್​ ಮಾಡಿದೆ.

ಇದನ್ನೂ ಓದಿ: ಸಿದ್ದರಾಮಯ್ಯ ಏನೇ ಘಟನೆ ಆದರೂ ಆರ್​ಎಸ್​ಎಸ್​ಗೆ ಲಿಂಕ್ ಮಾಡುತ್ತಾರೆ: ಸಿಎಂ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.