ETV Bharat / state

ಕೇಂದ್ರ ಬಜೆಟ್ ವಿರುದ್ಧ ರಾಜ್ಯ ಕಾಂಗ್ರೆಸ್ ನಾಯಕರಿಂದ ಅಸಮಾಧಾನ

author img

By

Published : Feb 2, 2020, 4:15 AM IST

ನಿರ್ಮಲಾ ಸೀತಾರಾಮನ್ ಮಂಡಿಸಿರುವ ಪ್ರಸಕ್ತ ಸಾಲಿನ ಆಯವ್ಯಯವನ್ನು ನಿರೀಕ್ಷೆಯಂತೆ ರಾಜ್ಯ ಕಾಂಗ್ರೆಸ್ ನಾಯಕರು ತೀವ್ರವಾಗಿ ಖಂಡಿಸಿದ್ದಾರೆ.

congress leaders comments on union budge
ರಾಜ್ಯ ಕಾಂಗ್ರೆಸ್ ನಾಯಕರಿಂದ ಅಸಮಾಧಾನ

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಪ್ರಸಕ್ತ ಸಾಲಿನ ಆಯವ್ಯಯವನ್ನು ನಿರೀಕ್ಷೆಯಂತೆ ರಾಜ್ಯ ಕಾಂಗ್ರೆಸ್ ನಾಯಕರು ತೀವ್ರವಾಗಿ ಖಂಡಿಸಿದ್ದಾರೆ.

ಕಾಂಗ್ರೆಸ್ ಹಿರಿಯ ನಾಯಕರಾದ ಮಾಜಿ ಸಂಸದ ಮಲ್ಲಿಕಾರ್ಜುನ ಖರ್ಗೆ, ವಿ.ಎಸ್.ಉಗ್ರಪ್ಪ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಕೇಂದ್ರ ಬಜೆಟ್ ಆಶಾದಾಯಕವಾಗಿಲ್ಲ ಎಂದು ಹೇಳುವ ಮೂಲಕ ಖಂಡನೆ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಬಜೆಟ್ ವಿರುದ್ಧ ರಾಜ್ಯ ಕಾಂಗ್ರೆಸ್ ನಾಯಕರಿಂದ ಅಸಮಾಧಾನ

ಉಳಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ್ದರಲ್ಲದೇ ಸರಣಿ ಟ್ವೀಟ್ ಮೂಲಕ ಅಭಿಪ್ರಾಯ ಹೊರಹಾಕಿದ್ದಾರೆ. ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಟ್ವೀಟ್ ಮೂಲಕ ಬೇಸರ ವ್ಯಕ್ತಪಡಿಸಿದ್ದಾರೆ.

ಒಟ್ಟಾರೆ ರಾಜ್ಯ ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರದ ಬಜೆಟ್ ವಿರುದ್ಧ ತೀವ್ರ ಆಕ್ರೋಶ ಹೊರ ಹಾಕಿದ್ದು, ಇದು ಜನರಿಗೆ ಅನುಕೂಲವಾಗಬಲ್ಲ ಅಥವಾ ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಬಲ್ಲ ಬಜೆಟ್ ಆಗಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.