ETV Bharat / state

ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸ : ಡಜನ್ ಪ್ರಶ್ನೆ ಮುಂದಿಟ್ಟ ರಾಜ್ಯ ಕಾಂಗ್ರೆಸ್ - ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಮಾಧ್ಯಮಗೋಷ್ಠಿ

ಪಿಎಸ್‌ಐ, ಶಿಕ್ಷಕರು, ಆರೋಗ್ಯ ಇಲಾಖೆ ಸೇರಿದಂತೆ ಎಲ್ಲ ಇಲಾಖೆಗಳ ನೇಮಕಾತಿಯಲ್ಲಿ ಅಕ್ರಮ ತಾಂಡವವಾಡುತ್ತಿದೆ. ಆದರೂ ಸಿಬಿಐ, ಇಡಿ, ಆದಾಯ ತೆರಿಗೆ ಇಲಾಖೆಗಳಿಂದ ತನಿಖೆ ಯಾಕಿಲ್ಲ? ಭ್ರಷ್ಟಾಚಾರ ವಿರುದ್ಧದ ಹೋರಾಟ ಎಂದರೆ, ಕಾಂಗ್ರೆಸ್ ನಾಯಕರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸುವುದು ಮಾತ್ರವೇ? ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದರು..

karnataka-congress-questions-pm-narendra-modi
ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸ : ಡಜನ್ ಪ್ರಶ್ನೆ ಮುಂದಿಟ್ಟ ರಾಜ್ಯ ಕಾಂಗ್ರೆಸ್
author img

By

Published : Jun 18, 2022, 5:41 PM IST

ಬೆಂಗಳೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ರಾಜ್ಯ ಪ್ರವಾಸ ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಡಜನ್ ಪ್ರಶ್ನೆಗಳನ್ನು ಪ್ರಧಾನಿ ಮುಂದಿಟ್ಟಿದೆ. ಕೆಪಿಸಿಸಿ ಕಚೇರಿಯಲ್ಲಿ ಬೆಂಗಳೂರಿನ ಮಾಜಿ ಮೇಯರ್​ಗಳ ಸಮ್ಮುಖದಲ್ಲಿ ಶನಿವಾರ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಮಾಧ್ಯಮಗೋಷ್ಠಿ ನಡೆಸಿ ಪ್ರಧಾನಿ ಮೋದಿಗೆ ಡಜನ್ ಪ್ರಶ್ನೆ ಕೇಳಿದರು.

ಕಳೆದ ವಿಧಾನಸಭೆ ಚುನಾವಣೆ ಸಮಯದಲ್ಲಿ, ಅಂದರೆ 2018ರ ಫೆಬ್ರವರಿಯಲ್ಲಿ ಬೆಂಗಳೂರಿನಲ್ಲಿ ಭಾಷಣ ಮಾಡುತ್ತ ಕಾಂಗ್ರೆಸ್ ಸರ್ಕಾರ 10% ಕಮಿಷನ್ ಸರ್ಕಾರ ಎಂದು ಆಧಾರರಹಿತ ಆರೋಪ ಮಾಡಿದ್ದೀರಿ. ಈಗ ರಾಜ್ಯದ ನಿಮ್ಮ ಸರ್ಕಾರ 40% ಸರ್ಕಾರ ಎಂದು ವಿಶ್ವವಿಖ್ಯಾತಿ ಪಡೆದಿದೆ. ಈ ಅಮೋಘ ಸಾಧನೆ ಬಗ್ಗೆ ನಿಮ್ಮ ಅಭಿಪ್ರಾಯವೇನು? ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಹಾಗೂ ಆತ್ಮಹತ್ಯೆಗೂ ಮುನ್ನ ಬೆಳಗಾವಿ ಗುತ್ತಿಗೆದಾರ ಸಂತೋಷ್ ಪಾಟೀಲ್ 40% ಕಮಿಷನ್ ಕಿರುಕುಳ ಕುರಿತು ನಿಮಗೆ ಪತ್ರ ಬರೆದರೂ ನೀವು ಮೌನಿ ಬಾಬಾ ಆಗಿದ್ದು ಯಾಕೆ? ಎಂದು ಪ್ರಶ್ನಿಸಿದರು.

ಪಿಎಸ್‌ಐ, ಶಿಕ್ಷಕರು, ಆರೋಗ್ಯ ಇಲಾಖೆ ಸೇರಿದಂತೆ ಎಲ್ಲ ಇಲಾಖೆಗಳ ನೇಮಕಾತಿಯಲ್ಲಿ ಅಕ್ರಮ ತಾಂಡವವಾಡುತ್ತಿದೆ. ಆದರೂ ಸಿಬಿಐ, ಇಡಿ, ಆದಾಯ ತೆರಿಗೆ ಇಲಾಖೆಗಳಿಂದ ತನಿಖೆ ಯಾಕಿಲ್ಲ? ಭ್ರಷ್ಟಾಚಾರ ವಿರುದ್ಧದ ಹೋರಾಟ ಎಂದರೆ, ಕಾಂಗ್ರೆಸ್ ನಾಯಕರ ವಿರುದ್ಧ ಸುಳ್ಳು, ಪ್ರಕರಣ ದಾಖಲಿಸುವುದು ಮಾತ್ರವೇ? ಎಂದು ಕಿಡಿಕಾರಿದರು.

ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ : 2022ರ ವೇಳೆಗೆ ರೈತರ ಆದಾಯ ಡಬಲ್ ಮಾಡುತ್ತೇವೆ ಎಂದು ನೀವು ಹೇಳಿದ ಮಾತು ನೆನಪಿದೆಯೇ? ರೈತರ ಆದಾಯದ ಬದಲು ರಸಗೊಬ್ಬರ, ಯಂತ್ರೋಪಕರಣಗಳ ಬಳಕೆ ವೆಚ್ಚ ಡಬಲ್ ಆಗಿರುವುದರ ಬಗ್ಗೆ ಏನು ಹೇಳುತ್ತೀರಿ ಮೋದಿಯವರೇ? ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂದು ನೀವು ಹೇಳಿದ್ದಿರಿ. ಆದರೆ, ರಾಜ್ಯದಲ್ಲಿ ಹಿಜಾಬ್, ಆಜಾನ್, ಆರ್ಥಿಕ ಜಿಹಾದ್ ಹೆಸರಿನಲ್ಲಿ ಅಲ್ಪಸಂಖ್ಯಾತರ ಮೇಲೆ ಕೋಮು ದೌರ್ಜನ್ಯ ನಡೆಯುತ್ತಿದೆ. ಈ ವಿಚಾರದಲ್ಲಿ ನಿಮ್ಮ ನಿಲುವೇನು? ಎಂದು ರಾಮಲಿಂಗಾರೆಡ್ಡಿ ಪ್ರಶ್ನಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿರುವುದು..

ಕೋವಿಡ್​ ಸುಳ್ಳು ವರದಿ : ಡಬಲ್ ಇಂಜಿನ್ ಸರ್ಕಾರ, ಕರ್ನಾಟಕ ರಾಜ್ಯವನ್ನು ಅಭಿವೃದ್ಧಿಯಲ್ಲಿ ತೇಲಿಸಲಿದೆ ಎಂದು ಬೀಗಿದಿರಿ ಅಲ್ಲವೇ? ರಾಜ್ಯದಲ್ಲಿ ನಿಮ್ಮ ಸರ್ಕಾರದ 5 ಸಾಧನೆಯ ಪಟ್ಟಿ ನೀಡುವಿರಾ? ಕೋವಿಡ್ ಸಮಯದಲ್ಲಿ ನೀವು ಹೇಳಿದಂತೆ ಜಾಗಟೆ ಬಾರಿಸಿ, ಚಪ್ಪಾಳೆ ಹೊಡೆದು, ದೀಪ ಹಚ್ಚಿದೆವು. ಆದರೆ, ತುರ್ತು ಸಮಯದಲ್ಲಿ ಆಕ್ಸಿಜನ್ ಪೂರೈಸದೇ ರಾಜ್ಯದ ಚಾಮರಾಜನಗರದಲ್ಲಿ 34 ಮಂದಿ ಪ್ರಾಣ ನುಂಗಿದ್ದು ಯಾಕೆ? ಆಕ್ಸಿಜನ್ ಕೊರತೆಯಿಂದ ಯಾರೂ ಸತ್ತೇ ಇಲ್ಲ ಎಂದು ನಿಮಗೆ ಸುಳ್ಳು ವರದಿ ಕೊಟ್ಟ ನಿಮ್ಮ ಸರ್ಕಾರದ ವಿರುದ್ಧ ಯಾಕೆ ಕ್ರಮ ಇಲ್ಲ? ರಾಜ್ಯದಲ್ಲಿ 4 ಲಕ್ಷಕ್ಕೂ ಹೆಚ್ಚು ಮಂದಿ ಕೋವಿಡ್​​ಗೆ ಬಲಿಯಾಗಿದ್ದರೂ 40 ಸಾವಿರ ಎಂದು ಸುಳ್ಳು ಲೆಕ್ಕ ತೋರಿದ್ದು ಯಾಕೆ? ಎಂದು ಕೇಳಿದರು.

ಮಹನೀಯರಿಗೆ ಅವಮಾನ : ಮತಬ್ಯಾಂಕ್ ಸೆಳೆಯಲು ಬಸವಣ್ಣ, ಅಂಬೇಡ್ಕರ್, ಬುದ್ಧ, ಭಗತ್ ಸಿಂಗ್, ನಾರಾಯಣ ಗುರು, ಕನಕದಾಸರು, ಮಹಾವೀರರು ಸೇರಿದಂತೆ ಮಹನೀಯರ ಜಪ ಮಾಡುತ್ತೀರಿ. ಆದರೆ, ಪಠ್ಯ ಪುಸ್ತಕ ಪರಿಷ್ಕರಣೆ ಹೆಸರಲ್ಲಿ ಈ ಮಹನೀಯರಿಗೆ ಅವಮಾನ ಮಾಡಿದ್ದು, ಈ ಬಗ್ಗೆ ನಿಮ್ಮ ಸಬೂಬು ಏನು? ಮೇಕದಾಟು ಹಾಗೂ ಮಹಾದಾಯಿ ನಮ್ಮ ರಾಜ್ಯಕ್ಕೆ ಅಗತ್ಯವಿರುವ ಎರಡು ಪ್ರಮುಖ ನೀರಾವರಿ ಯೋಜನೆಗಳು. ಈ ಯೋಜನೆಗಳಿಗೆ ಯಾವಾಗ ಅನುಮತಿ ಕೊಡಿಸುವಿರಿ? ಎಂದು ಪ್ರಶ್ನಿಸಿದರು.

ನಿಮ್ಮಿಂದ ಕೋವಿಡ್​ ಹರಡುವುದಿಲ್ಲವೇ?: ಕಾಂಗ್ರೆಸ್‌ ಪ್ರತಿಭಟನೆಯಿಂದ ಕೋವಿಡ್ ಸೋಂಕು ಹರಡುತ್ತದೆ ಎಂದು ನಿಮ್ಮ ಆರೋಗ್ಯ ಸಚಿವ ಡಾ. ಸುಧಾಕರ್ ಹೇಳುತ್ತಿದ್ದಾರೆ. ನೀವು ಬೆಂಗಳೂರಿನಲ್ಲಿ 12 ಕಿ.ಮೀ ಯಾತ್ರೆ ಮಾಡುತ್ತಿದ್ದೀರಿ, 50 ಸಾವಿರ ಜನರನ್ನು ಸೇರಿಸಿ ಸಾರ್ವಜನಿಕ ಸಭೆ ಮಾಡುತ್ತಿದ್ದೀರಿ, 12 ಸಾವಿರಕ್ಕೂ ಹೆಚ್ಚು ಜನರ ಜೊತೆ ಮೈಸೂರಿನಲ್ಲಿ ಯೋಗ ಮಾಡಲಿದ್ದೀರಿ. ನಿಮ್ಮ ಈ ಕಾರ್ಯಕ್ರಮಗಳಿಂದ ಕೊರೊನಾ ಹರಡುವುದಿಲ್ಲವೇ? ಎಂದು ತಿರುಗೇಟು ನೀಡಿದರು.

ರಾಜ್ಯಕ್ಕೆ ಅನ್ಯಾಯ : ಕಳೆದ ಎಂಟು ವರ್ಷದಿಂದ ರಾಜ್ಯದಿಂದ ಕೇಂದ್ರ ಸರ್ಕಾರದ ಬೊಕ್ಕಸಕ್ಕೆ ತೆರಿಗೆ ಮೂಲಕ 19 ಲಕ್ಷ ಕೋಟಿ ಸಂಗ್ರಹವಾಗಿದೆ. ವಿವಿಧ ಯೋಜನೆಗಳ ಮೂಲಕ ರಾಜ್ಯಕ್ಕೆ ಕೊಟ್ಟಿರೋದು ಕೇವಲ 4.5 ಲಕ್ಷ ಕೋಟಿ. ಇನ್ನೂ ರಾಜ್ಯದ ಜಿಎಸ್​ಟಿ ಪಾಲು ನೀಡದೆ ಸಾಲ ನೀಡಿ, ಕನ್ನಡಿಗರನ್ನು ಸಾಲಗಾರರನ್ನಾಗಿ ಮಾಡುತ್ತಿರುವುದೇಕೆ? ರಾಜ್ಯಕ್ಕೆ ಈ ರೀತಿ ಅನ್ಯಾಯ ಮಾಡುತ್ತಿರುವುದೇಕೆ? ಅಂದಹಾಗೆ ಪ್ರಧಾನಿಗಳೇ, ಮತ್ತೊಂದು ಪ್ರಮುಖ ವಿಷಯ, ಬೆಂಗಳೂರಿನ 15 ಬಿಜೆಪಿ ಶಾಸಕರಿಗೆ ನಿಮ್ಮ ಸರ್ಕಾರ 9,890 ಕೋಟಿ ಅನುದಾನ ನೀಡಿದರೆ, ಕಾಂಗ್ರೆಸ್​ನ 12 ಶಾಸಕರಿಗೆ 2,165 ಕೋಟಿ ಮಾತ್ರ ನೀಡಲಾಗಿದೆ. ಬೆಂಗಳೂರಿನ ಅಭಿವೃದ್ಧಿಯಲ್ಲಿ ರಾಜಕೀಯ ತಾರತಮ್ಯ ಎಷ್ಟು ಸರಿ? ಎಂದು ಪ್ರಶ್ನಿಸಿದರು.

ಯಾತ್ರೆ ಮಾಡುವ ದಾರಿ ರಿಪೇರಿ : ಬೆಂಗಳೂರು ರಸ್ತೆಗುಂಡಿ ಮುಚ್ಚುವ ಸಂಬಂಧ ಹೈಕೋರ್ಟ್‌ ಏಷ್ಟೇ ಚಾಟಿ ಬೀಸಿದರೂ, ನಿಮ್ಮ ಸರ್ಕಾರ, ಬಿಬಿಎಂಪಿ ಎಚ್ಚೆತ್ತುಕೊಂಡಿರಲಿಲ್ಲ. ಕೊನೆಗೆ ಕೋರ್ಟ್‌ ನಿರ್ದೇಶನದಂತೆ ಪಾಲಿಕೆ ನಡೆಯಬೇಕಾದ ಸ್ಥಿತಿ ಬಂತು. ಈಗ ನೀವು ಬೆಂಗಳೂರಲ್ಲಿ ಯಾತ್ರೆ ಮಾಡುವ 12 ಕಿ.ಮೀ ರಸ್ತೆ ಹೊಳೆಯುವಂತೆ ಮಾಡಿದ್ದಾರೆ. ಇಡೀ ಬೆಂಗಳೂರು ಒಂದು ರೌಂಡ್ ಬರುವ ಕಾರ್ಯಕ್ರಮ ಹಾಕಿಕೊಳ್ಳಿ. ಆಗ ಎಲ್ಲ ರಸ್ತೆಗಳೂ ದುರಸ್ತಿ ಆಗುತ್ತವೆ. ನಗರದ ಜನ ನಿಮಗೆ ಅಭಾರಿ ಆಗಿರುತ್ತಾರೆ ಎಂದು ಮೋದಿ ಅವರಿಗೆ ಮನವಿ ಮಾಡಿದರು.

ಚುನಾವಣೆ ಸಲುವಾಗಿ ಶಂಕುಸ್ಥಾಪನೆ : ಸಬ್ ಅರ್ಬನ್ ರೈಲು ಯೋಜನೆಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ ಮಾಡುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ರಾಮಲಿಂಗಾರೆಡ್ಡಿ, ಈ ಯೋಜನೆ ನಮ್ಮ ಸರ್ಕಾರಕ್ಕೆ ಹೊರೆ ಆಗಲಿದೆ. ಭೂಸ್ವಾದೀನ ಪ್ರಕ್ರಿಯೆ ನಾವೇ ಮಾಡಬೇಕು. ಅದಕ್ಕೆ ಕೇಂದ್ರ ಅನುದಾನ ಕೊಡಲ್ಲ. ಕಳೆದ ಬಾರಿ ಸಬ್ ಅರ್ಬನ್ ಯೋಜನೆಗೆ ಒಂದು ಕೋಟಿ ಕೊಟ್ಟಿದ್ದರು. ಅನುದಾನದ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ದೊಡ್ಡ ಹೊರೆಯಾಗಲಿದೆ. ಈ ಯೋಜನೆ ಶಂಕುಸ್ಥಾಪನೆ ಕೇವಲ ಚುನಾವಣೆ ಸಲುವಾಗಿ ಮಾಡಲಾಗುತ್ತಿದೆ ಎಂದು ಲೇವಡಿ ಮಾಡಿದರು.

ಕಳೆದ ಬಾರಿ ಚುನಾವಣೆ ಪ್ರಚಾರದಲ್ಲಿ 'ಎಸ್​​ಬಿಎಂ' ಬಗ್ಗೆ ಮಾತನಾಡಿದ್ದರು. ಈಗ ಸಚಿವರಾಗಿರುವ ಎಸ್.ಟಿ. ಸೋಮಶೇಖರ್, ಭೈರತಿ ಬಸವರಾಜು, ಮುನಿರತ್ನ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದರು. ಈಗ ಅವರೇ ಮೋದಿ ಭಾಗವಹಿಸುವ ವೇದಿಕೆಯಲ್ಲಿರುತ್ತಾರೆ. ಈ ಬಗ್ಗೆ ‌ಮೋದಿ ಅವರೇ ಹೇಳಬೇಕು ಎಂದರು. ಕೊರೊನಾ ಹೆಚ್ಚಳ ಬಗ್ಗೆ ಮಾತನಾಡಿರುವ ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ಮೋದಿ ಅವರ ಕಾರ್ಯಕ್ರಮಕ್ಕೆ ಹೋಗಬಾರದು ಎಂದು ರಾಮಲಿಂಗಾರೆಡ್ಡಿ ಆಗ್ರಹಿಸಿದರು. ಈ ಸಂದರ್ಭದಲ್ಲಿ ಮಾಜಿ ಮೇಯರ್‌ಗಳಾದ ಜಿ. ಪದ್ಮಾವತಿ, ವೆಂಕಟೇಶ್‌ಮೂರ್ತಿ, ರಾಮಚಂದ್ರಪ್ಪ, ಜೆ.ಹುಚ್ಚಪ್ಪ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.

ಇದನ್ನೂ ಓದಿ: ಎಚ್ಚೆತ್ತ ಜಿಲ್ಲಾಡಳಿತ : ಯೋಗ ದಿನಾಚರಣೆ ವೇದಿಕೆಗೆ ಮೈಸೂರು ಮಹಾರಾಜರಿಗೆ ಆಹ್ವಾನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.