ಬೆಂಗಳೂರು : ಕೋವಿಡ್ ಹೆಚ್ಚುತ್ತಿರುವ ಸಂದರ್ಭದಲ್ಲಿ ಜ್ವರ ಇದ್ದರೂ ಸಿಎಂ ಬಿ ಎಸ್ ಯಡಿಯೂರಪ್ಪ ಬೆಳಗಾವಿಯಲ್ಲಿ ಚುನಾವಣಾ ಪ್ರಚಾರ ನಡೆಸಿರುವುದು ಅವರ ಬೇಜವಾಬ್ದಾರಿತನಕ್ಕೆ ಸಾಕ್ಷಿ ಎಂದು ಕಾಂಗ್ರೆಸ್ ಕಿಡಿಕಾರಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್, ಕೊರೊನಾ ಸೋಂಕು ಹೆಚ್ಚುತ್ತಿರುವ ಈ ಕಠಿಣ ಪರಿಸ್ಥಿತಿಯಲ್ಲಿ ಜ್ವರವಿದ್ದರೂ ಚುನಾವಣಾ ಪ್ರಚಾರ ಮಾಡಿರುವುದು ಮುಖ್ಯಮಂತ್ರಿ ಬಿಎಸ್ವೈ ಅವರ ಬೇಜವಾಬ್ದಾರಿತನಕ್ಕೆ ಸಾಕ್ಷಿ ಎಂದು ವಾಗ್ದಾಳಿ ನಡೆಸಿದೆ.
ಈ ಹಿಂದೆ ಕೊರೊನಾ ಸೋಂಕಿತರಾಗಿದ್ದ ರಮೇಶ್ ಜಾರಕಿಹೊಳಿ ಅವರನ್ನು ಚುನಾವಣಾ ಪ್ರಚಾರಕ್ಕೆ ಆಹ್ವಾನಿಸಿದ್ದರು. ಈತರದ ಸರ್ಕಾರದಿಂದ ಸೋಂಕು ನಿಯಂತ್ರಣ ಸಾಧ್ಯವೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.