ಬೆಂಗಳೂರು: ರಾಜ್ಯದಲ್ಲಿಂದು 213 ಹೊಸ ಕೊರೊನಾ ಪಾಸಿಟಿವ್ ಕೇಸ್ಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 7,213ಕ್ಕೆ ಏರಿಕೆ ಆಗಿದೆ. ಇದೇ ಮೊದಲ ಬಾರಿಗೆ ಒಂದೇ ದಿನ 56 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಲಬುರಗಿಯ 18, ಬೆಂಗಳೂರಿನ 17, ಬೀದರ್, ಬಳ್ಳಾರಿಯ ತಲಾ 5, ಧಾರವಾಡ 3, ದಕ್ಷಿಣ ಕನ್ನಡ ಹಾಗೂ ವಿಜಯಪುರದ ತಲಾ ಇಬ್ಬರು, ದಾವಣಗೆರೆ, ಮಂಡ್ಯ, ಶಿವಮೊಗ್ಗ ಹಾಗೂ ಉಡುಪಿ ಜಿಲ್ಲೆಯ ತಲಾ ಒಬ್ಬೊಬ್ಬರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದು ಇನ್ನಷ್ಟು ಆತಂಕ ಮೂಡಿಸಿದೆ.
ಇಂದು ಕೂಡ ಇಬ್ಬರು ಕೊರೊನಾದಿಂದ ಮೃತಪಟ್ಟಿದ್ದಾರೆ. ಈವರೆಗೆ ಒಟ್ಟು 88 ಜನ ಸೋಂಕಿಗೆ ಬಲಿಯಾಗಿದ್ದಾರೆ.
ಇಂದು ಪತ್ತೆಯಾಗಿರುವ ಪ್ರಕರಣಗಳಲ್ಲಿ 103 ಅಂತಾರಾಜ್ಯ ಪ್ರಯಾಣಿಕರಿದ್ದಾರೆ. ಉಳಿದಂತೆ 23 ಅಂತಾರಾಷ್ಟ್ರೀಯ ಪ್ರಯಾಣಿಕರಲ್ಲಿ ಸೋಂಕು ಪತ್ತೆಯಾಗಿದೆ.
ಇಂದು 180 ಮಂದಿ ಡಿಸ್ಜಾರ್ಜ್ ಆಗಿದ್ದು, ಈವರೆಗೆ ಒಟ್ಟಾರೆ 4,135 ಆಸ್ಪತ್ರೆಯಿಂದ ಡಿಸ್ಜಾರ್ಜ್ ಆಗಿದ್ದಾರೆ. ಸದ್ಯ 2,987 ಸಕ್ರಿಯ ಪ್ರಕರಣಗಳು ರಾಜ್ಯದಲ್ಲಿವೆ. ಬೆಂಗಳೂರಿನಲ್ಲಿ ಮತ್ತೆ ಸಾವಿನ ಸರಣಿ ಮುಂದುವರೆದಿದ್ದು, ಇಂದು ಮತ್ತೊಬ್ಬರು ಬಲಿಯಾಗಿದ್ದಾರೆ. 75 ವರ್ಷದ ವೃದ್ಧೆಗೆ ILI ಇದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.