ಬೆಂಗಳೂರು: ರಾಜ್ಯದಲ್ಲಿಂದು 600 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಇಬ್ಬರು ಸೋಂಕಿತರು ಸಾವಿಗೀಡಾಗಿದ್ದಾರೆ. 28,046 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಈ ಪೈಕಿ 600 ಮಂದಿಗೆ ಸೋಂಕು ದೃಢಪಟ್ಟಿದೆ. 589 ಮಂದಿ ವೈರಸ್‌ನಿಂದ ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿ 5,212 ಸಕ್ರಿಯ ಪ್ರಕರಣಗಳಿವೆ.
ರಾಜ್ಯದಲ್ಲಿ ಕೊರೊನಾ ಸೋಂಕಿತರ ಪ್ರಮಾಣ ಶೇ.2.13, ವಾರದ ಸೋಂಕಿತರ ಪ್ರಮಾಣ ಶೇ.3.91ರಷ್ಟಿದೆ. ಈ ವಾರದ ಸಾವಿನ ಪ್ರಮಾಣ ಶೇ.0.24 ಇದೆ. ಬೆಂಗಳೂರಲ್ಲಿ ಇಂದು 312 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ನಗರದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 18,66,560ಕ್ಕೆ ಏರಿಕೆ ಆಗಿದೆ.
ಇಂದು 371 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬೆಂಗಳೂರಲ್ಲಿ ಈವರೆಗೆ ಕೋವಿಡ್ ಸಾವಿನ ಸಂಖ್ಯೆ 16,982 ಇದೆ. ರಾಜಧಾನಿಯಲ್ಲಿ 3,463 ಸಕ್ರಿಯ ಪ್ರಕರಣಗಳಿವೆ.
(ಓದಿ: ದೇಶದಲ್ಲಿ 6 ಸಾವಿರ ಕೋವಿಡ್ ಪ್ರಕರಣ ಪತ್ತೆ, ಸಕ್ರಿಯ ಸೋಂಕಿತರು ಇಳಿಕೆ)