ಬೆಂಗಳೂರು: ರಾಜ್ಯದಲ್ಲಿಂದು 1,71,765 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದ್ದು, 5,815 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 28,01,936ಕ್ಕೆ ಏರಿಕೆ ಕಂಡಿದ್ದು, ಪಾಸಿಟಿವಿಟಿ ದರ 3.38% ರಷ್ಟಿದೆ.
11,832 ಸೋಂಕಿತರು ಗುಣಮುಖರಾಗಿದ್ದು, ಈವರೆಗೆ 26,37,279 ಜನರು ಚೇತರಿಸಿಕೊಂಡಿದ್ದಾರೆ. ಸದ್ಯ ಸಕ್ರಿಯ ಪ್ರಕರಣಗಳು 1,30,872 ರಷ್ಟಿದ್ದು, ಚಿಕಿತ್ಸೆ ಮುಂದುವರೆದಿದೆ. ಕೋವಿಡ್ಗೆ 161 ಸೋಂಕಿತರು ಮೃತರಾಗಿದ್ದು, ಸಾವಿನ ಸಂಖ್ಯೆ 33,763ಕ್ಕೆ ಏರಿದೆ. ಸಾವಿನ ಶೇಕಡವಾರು ಪ್ರಮಾಣ 2.76 ರಷ್ಟಿದೆ.
ಯುಕೆಯ ರೂಪಾಂತರಿ ವೈರಸ್ ಅಲ್ಪಾ(Alpha/B.1.1.7) 127 ಜನರಲ್ಲಿ ಕಾಣಿಸಿಕೊಂಡಿದ್ದರೆ, ಇತ್ತ ಸೌತ್ ಆಫ್ರಿಕಾದ ಬೀಟಾ ವೈರಸ್ (BETA/B.1.351) 6 ಜನರಲ್ಲಿ ಪತ್ತೆಯಾಗಿದೆ. ಭಾರತದ ರೂಪಾಂತರಿ ( Delta/B.617.2) ಡೆಲ್ಟಾ 318 ಜನರಿಗೆ ಕಪ್ಪಾ (Kappa/B.1.617) 112 ಮಂದಿಯಲ್ಲಿ ಕಾಣಿಸಿಕೊಂಡಿದೆ.
ಇದನ್ನೂ ಓದಿ: ಮೈಸೂರು ಹೊರತುಪಡಿಸಿ 16 ಜಿಲ್ಲೆಗಳಲ್ಲಿ Unlock: ಬಸ್ ಸಂಚಾರ ಸೇರಿ ಯಾವೆಲ್ಲಾ ಸೇವೆ ಲಭ್ಯ?