ಬೆಂಗಳೂರು : ರಾಜ್ಯದಲ್ಲಿಂದು 761 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. 7 ಮಂದಿ ಮೃತಪಟ್ಟಿದ್ದಾರೆ. ಇಂದು 812 ಮಂದಿ ಗುಣಮುಖರಾಗಿದ್ದು, ಸದ್ಯ 9,119 ಸಕ್ರಿಯ ಪ್ರಕರಣಗಳಿವೆ.
ಈವರೆಗೆ ಒಟ್ಟು 9,03,629 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 9,24,898 ಕ್ಕೆ ಏರಿಕೆಯಾಗಿದೆ.
ಮೃತಪಟ್ಟವರ ಸಂಖ್ಯೆ 1,2,131 ಕ್ಕೆ ಆಗಿದೆ. ಸದ್ಯ 205 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಓದಿ : ಶಿವಮೊಗ್ಗ, ದಕ್ಷಿಣ ಕನ್ನಡದಲ್ಲಿ 6 ಕಾಗೆಗಳ ಸಾವು: ಹಕ್ಕಿಜ್ವರದ ಶಂಕೆ
ಬೆಂಗಳೂರಿನಲ್ಲಿ ಇಂದು ಹೊಸದಾಗಿ 399 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, 5 ಮಂದಿ ಮೃತಪಟ್ಟಿದ್ದಾರೆ.