ಬೆಂಗಳೂರು : ರಾಜ್ಯದಲ್ಲಿಂದು 1,12,780 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಇದರಲ್ಲಿ 357 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 29,82,089ಕ್ಕೆ ಏರಿಕೆ ಆಗಿದೆ.
ಇತ್ತ 438 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೂ 29,34,523 ಮಂದಿ ಗುಣಮುಖರಾಗಿದ್ದಾರೆ. 10 ಸೋಂಕಿತರು ಮೃತರಾಗಿದ್ದಾರೆ. ಸಾವಿನ ಸಂಖ್ಯೆ 37,916ಕ್ಕೆ ಏರಿದೆ. ಸದ್ಯ ಸಕ್ರಿಯ ಪ್ರಕರಣಗಳು 9621 ರಷ್ಟಿವೆ. ಈ ಮೂಲಕ ಸೋಂಕಿತರ ಪ್ರಮಾಣ ಶೇ.0.31ರಷ್ಟಿದ್ದರೆ, ಸಾವಿನ ಪ್ರಮಾಣ ಶೇ.2.80ರಷ್ಟಿದೆ.
ರಾಜಧಾನಿಯಲ್ಲಿ 140 ಮಂದಿಗೆ ಸೋಂಕು ದೃಢಪಟ್ಟಿದೆ. 12,48,744 ಸೋಂಕಿತರ ಸಂಖ್ಯೆ ಏರಿಕೆ ಆಗಿದೆ. 157 ಜನರು ಗುಣಮುಖರಾಗಿದ್ದಾರೆ. 12,25,967 ಡಿಸ್ಜಾರ್ಜ್ ಆಗಿದ್ದಾರೆ. 5 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 16,203ಕ್ಕೆ ಏರಿದೆ. ಸದ್ಯ ಸಕ್ರಿಯ 6573 ಪ್ರಕರಣಗಳಿವೆ.
ರೂಪಾಂತರಿ ಅಪ್ಡೇಟ್
ಅಲ್ಫಾ- 155
ಬೇಟ- 08
ಡೆಲ್ಟಾ- 1653
ಡೆಲ್ಟಾ ಪ್ಲಸ್- 04
ಡೆಲ್ಟಾ ಸಬ್ ಲೈನ್ಏಜ್- 202
ಡೆಲ್ಟಾ ಸಬ್ ಲೈನ್ಏಜ್ AY.12H -14
ಕಪ್ಪಾ- 160
ಈಟಾ- 01