ಬೆಂಗಳೂರು: ದೆಹಲಿಯಲ್ಲಿರುವ ನೂತನ ಕರ್ನಾಟಕ ಭವನದ ಕಟ್ಟಡದಲ್ಲಿ ಕರ್ನಾಟಕದ ಸಂಸ್ಕೃತಿ, ಅತಿಥಿ ಸತ್ಕಾರ ಮತ್ತು ಹೆಚ್ಚು ಕೊಠಡಿಗಳ ನಿರ್ಮಾಣಕ್ಕೆ ಆದ್ಯತೆ ನೀಡುವಂತೆ ಸಿಎಂ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ.
ಮಂಗಳವಾರ ನವದೆಹಲಿಯ ಕರ್ನಾಟಕ ಭವನದಲ್ಲಿ ನೂತನ ಕಟ್ಟಡ ನಿರ್ಮಾಣ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಹೊಸ ಕಟ್ಟಡದ ನೀಲನಕ್ಷೆ ಬಗ್ಗೆ ಹಿರಿಯ ಅಧಿಕಾರಿಗಳ ಜೊತೆ ವಿಸ್ತೃತವಾಗಿ ಚರ್ಚಿಸಿ, ರಾಜ್ಯದ ಸಂಸ್ಕೃತಿ ಬಿಂಬಿಸುವ ಹಾಗೆ ಕಟ್ಟಡ ನಿರ್ಮಿಸಬೇಕು ಎಂದು ಸೂಚಿಸಿದರು
ಕಚೇರಿ ಕಟ್ಟಡ ಒಂದು ಅಂತಸ್ತಿಗೆ ಮಾತ್ರ ಸೀಮಿತವಾಗಿರಲಿ. ಅತಿಥಿಗಳ ಕೊಠಡಿ ಮತ್ತು ಸಂಸ್ಕೃತಿಯ ಪ್ರತಿಬಿಂಬಿಕ್ಕೆ ಆದ್ಯತೆ ನೀಡುವ ಹೊಸ ನೀಲನಕ್ಷೆಯನ್ನು ನಾಳೆ ಸಂಜೆಯೊಳಗೆ ಸಿದ್ಧಪಡಿಸುವಂತೆ ಹೇಳಿದರು.
ಆಗಸ್ಟ್ 15ರ ಬಳಿಕ ಹಳೆಯ ಕಟ್ಟಡ ತೆರವಿನ ಕೆಲಸಕ್ಕೆ ಚಾಲನೆ ನೀಡಬೇಕು ಎಂದರು.