ಬೆಂಗಳೂರು: ರಾಜ್ಯದಲ್ಲಿ ಇಂದು 10,913 ಜನರಲಲ್ಲಿ ಕೋವಿಡ್-19 ಸೋಂಕು ಇರುವುದು ದೃಢಪಟ್ಟಿದ್ದು, 114 ಮಂದಿ ಮೃತಪಟ್ಟಿದ್ದಾರೆ.
ಶುಕ್ರವಾರದ (ಅ.8) ವೇಳೆಗೆ ಸೋಂಕಿತರ ಸಂಖ್ಯೆ 6,90,269ಕ್ಕೆ ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,18,851 ಆಗಿದೆ. ಇದೇ ವೇಳೆ 9,091 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಇದುವರೆಗೆ 5,61,610 ಮಂದಿ ಸೋಂಕು ಮುಕ್ತರಾಗಿದ್ದಾರೆ.
ಇದುವರೆಗೆ 9,789 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಪ್ರಸ್ತುತ 873 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರಿನಲ್ಲಿ ಇಂದು 5,009 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 3,045 ಮಂದಿ ಗುಣಮುಖರಾಗಿದ್ದಾರೆ. ಇಂದು 57 ಮಂದಿ ಮೃತಪಟ್ಟಿದ್ದಾರೆ.