ಬೆಂಗಳೂರು : ಶಾಲಾ ಮಕ್ಕಳೊಂದಿಗೆ ಪ್ರತಿ ವರ್ಷ ಗಣತಂತ್ರವನ್ನ ಆಚರಿಸಲಾಗುತ್ತಿತ್ತು. ಆದರೆ, ಈ ಬಾರಿ ಕೋವಿಡ್ ಮೂರನೇ ಅಲೆ ತೀವ್ರತೆ ಹಿನ್ನೆಲೆ ಸರಳವಾಗಿ ಗಣರಾಜ್ಯೋತ್ಸವವನ್ನ ಕಡ್ಡಾಯವಾಗಿ ಆಚರಿಸಲು ಆದೇಶಿಸಲಾಗಿದೆ.
ಪ್ರತಿ ವರ್ಷ ಜನವರಿ 26ರಂದು ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ ರಾಷ್ಟ್ರೀಯ ಹಬ್ಬವಾಗಿ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಇದು ಅತ್ಯಂತ ಪ್ರಮುಖ ದಿನವಾಗಿದೆ.
ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿ ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಮತ್ತು ಆಯಾ ಶಾಲೆಗಳ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರುಗಳು ಸೇರಿ ಸರಳವಾಗಿ ಆಚರಿಸಲು ಶಿಕ್ಷಣ ಇಲಾಖೆ ಆಯುಕ್ತರು ಆದೇಶಿಸಿದ್ದಾರೆ.
ಸಮಾರಂಭದಲ್ಲಿ ಸ್ಥಳೀಯ ಸಾರ್ವಜನಿಕರು ಸ್ವಯಂಪ್ರೇರಿತರಾಗಿ ಪಾಲ್ಗೊಳ್ಳಲು ಇಚ್ಚಿಸಿದಲ್ಲಿ ಕೋವಿಡ್-19ರ ಎಸ್ಒಪಿ ಜಾರಿ ಮಾಡಿ ಗಣರಾಜ್ಯೋತ್ಸವ ದಿನಾಚರಣೆಯನ್ನು ಅತ್ಯಂತ ಸರಳವಾಗಿ ಕಡ್ಡಾಯವಾಗಿ ಆಚರಿಸಲು ಸೂಚಿಸಲಾಗಿದೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ