ETV Bharat / state

ಎಫ್​ಡಿಎ, ಎಸ್​ಡಿಎ ಸೇರಿ 757 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ KEA - ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹಲವು ಸ್ತರದ ಹುದ್ದೆ

ರಾಜ್ಯ ಸರ್ಕಾರಿ ಉದ್ಯೋಗಕ್ಕಾಗಿ ತಯಾರಿ ನಡೆಸುತ್ತಿದ್ದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

Karnataka Examination Authority Notification for FDA SDA and Other job Recruitment

author img

By

Published : Mar 31, 2023, 1:24 PM IST

ಕರ್ನಾಟಕ ಸರ್ಕಾರದ ಹುದ್ದೆಗಳಿಗೆ ತಯಾರಿ ನಡೆಸುತ್ತಾ ಎದುರು ನೋಡುತ್ತಿದ್ದ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಶುಭ ಸುದ್ದಿ ನೀಡಿದೆ. ಕರ್ನಾಟಕ ರಾಜ್ಯದ ಸರ್ಕಾರಿ ಸಂಸ್ಥೆಗಳ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹಲವು ಸ್ತರದ ಹುದ್ದೆಗಳ ಭರ್ತಿಗೆ ಪ್ರಾಧಿಕಾರ ಅಧಿಸೂಚನೆ ಹೊರಡಿಸಿದೆ. ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಯಮ ನಿಯಮಿತ, ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ ಮತ್ತು ರಾಜೀವ್​ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವಾಲಯ ಹಾಗೂ ಮೈಸೂರು ಸೇಲ್ಸ್​ ಇಂಟರ್​ ನ್ಯಾಷನಲ್​ ಲಿಮಿಟೆಡ್​​ನಲ್ಲಿ ಖಾಲಿ ಇರುವ ಒಟ್ಟು 757 ಹುದ್ದೆಗಳ ಭರ್ತಿ ನಡೆಯಲಿದೆ ಎಂದು ಅಧಿಸೂಚನೆಯಲ್ಲಿ ಪ್ರಕಟಿಸಲಾಗಿದೆ.

ಹುದ್ದೆ ಅಧಿಸೂಚನೆ
ಹುದ್ದೆ ಅಧಿಸೂಚನೆ

ಹುದ್ದೆಗಳ ವಿವರ: ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸಹಾಯಕ ವ್ಯವಸ್ಥಾಪಕರು, ಆಪ್ತ ಸಹಾಯಕರು, ದ್ವಿತೀಯ ದರ್ಜೆ ಸಹಾಯಕರು, ಕಿರಿಯ ಸಹಾಯಕರು, ಹಿರಿಯ ಸಹಾಯಕರು, ಕ್ಷೇತ್ರ ನಿರೀಕ್ಷಿಕ್ಷಕರು, ಜೂನಿಯರ್​ ಪ್ರೋಗ್ರಾಂ, ಸಹಾಯಕ ವ್ಯವಸ್ಥಾಪಕರು, ಮೇಲ್ವಿಚಾರಕರು, ಪದವೀಧರ ಗುಮಾಸ್ತರು, ಗುಮಾಸ್ತರು ಸೇರಿದಂತೆ 757 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ.

ಶೈಕ್ಷಣಿಕ ಅರ್ಹತೆ, ವೇತನ: ವಿವಿಧ ಶ್ರೇಣಿಗಳ ಹುದ್ದೆಗಳಿಗೆ ಅನುಸಾರವಾಗಿ 11,600 ರೂ.ಯಿಂದ 97,100 ರೂವರೆಗೆ ವೇತನ ನಿಗದಿಸಲಾಗಿದೆ. ಹುದ್ದೆಗೆ ಅನುಸಾರವಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಅಭ್ಯರ್ಥಿಗಳು ಪದವಿ ಹೊಂದಿರಬೇಕು.

ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ. ಏಪ್ರಿಲ್​ 17ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಶುರುವಾಗಲಿದ್ದು, ಮೇ 17 ಅರ್ಜಿ ಸಲ್ಲಿಕೆಗೆ ಕಡೆಯ ದಿನ. ಶುಲ್ಕ ಪಾವತಿಗೆ ಮೇ 20 ಕಡೆಯ ದಿನ ಆಗಿರಲಿದೆ.

ಹುದ್ದೆ ಅಧಿಸೂಚನೆ
ಹುದ್ದೆ ಅಧಿಸೂಚನೆ

ವಿಶೇಷ ಸೂಚನೆ: ಹುದ್ದೆಗಳ ವರ್ಗೀಕರಣ, ಅರ್ಜಿ ಸಲ್ಲಿಕೆ ವಿಧಾನ, ವಯೋಮಿತಿ, ಶೈಕ್ಷಣಿಕ ಅರ್ಹತೆ ಸೇರಿದಂತೆ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಪ್ರಾಧಿಕಾರದ ವೆಬ್​ಸೈಟ್​ನಲ್ಲಿ ಮೇ 15ರಂದು ಪ್ರಕಟಿಸಲಾಗುತ್ತದೆ. ಈ ಪ್ರಕಟಣೆ ಬಳಿಕ ಹುದ್ದೆಗಳ ಕುರಿತ ಸಂಪೂರ್ಣ ಮಾಹಿತಿಗಳನ್ನು ಅರ್ಥೈಸಿಕೊಂಡು ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಸದ್ಯ ಕೆಇಎ ಹೊರಡಿಸಿರುವ ಅಧಿಕೃತ ಕಿರು ಅಧಿಸೂಚನೆ ವೀಕ್ಷಣೆಗೆ kea.kar.nic.in ಈ ಲಿಂಕ್​ಗೆ ಅಭ್ಯರ್ಥಿಗಳು ಭೇಟಿ ನೀಡಬಹುದು.

ಇದನ್ನೂ ಓದಿ: ಚಿಕ್ಕಮಗಳೂರು ಮೆಡಿಕಲ್​ ಕಾಲೇಜ್​ನಲ್ಲಿ ನೇಮಕಾತಿ: ₹20 ಸಾವಿರ ವೇತನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.