ETV Bharat / state

ಫಾರೆಸ್ಟ್​ ಗಾರ್ಡ್​​ ಹುದ್ದೆಗಳು: ಅರ್ಜಿ ಸಲ್ಲಿಕೆಗೆ 3 ದಿನಗಳಷ್ಟೇ ಬಾಕಿ

ಫಾರೆಸ್ಟ್​ ಗಾರ್ಡ್ ಹುದ್ದೆಗೆ ಅರ್ಜಿ ಸಲ್ಲಿಸಲು ಡಿಸೆಂಬರ್​ 30 ಕಡೆಯ ದಿನಾಂಕ.

Karnataka Forest Department notification for forest guard

author img

By ETV Bharat Karnataka Team

Published : Dec 27, 2023, 5:05 PM IST

ಬೆಂಗಳೂರು: ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಒಟ್ಟು 540 ಗಸ್ತು ಅರಣ್ಯ ಪಾಲಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಇವು ಗ್ರೂಪ್​ ಸಿ ಹುದ್ದೆಗಳಾಗಿವೆ. ಆಸಕ್ತ, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಮೂರು ದಿನ ಮಾತ್ರ ಬಾಕಿ ಇದೆ.

ಅಧಿಸೂಚನೆ
ಅಧಿಸೂಚನೆ

ಹುದ್ದೆಗಳು- ಎಲ್ಲಿ, ಎಷ್ಟು?: ಬೆಂಗಳೂರು 49, ಬೆಳಗಾವಿ 12, ಬಳ್ಳಾರಿ 29, ಚಾಮರಾಜನಗರ 83, ಚಿಕ್ಕಮಗಳೂರು 52, ಧಾರವಾಡ 5, ಹಾಸನ 18, ಕಲಬುರಗಿ 58, ಕೆನಾರ 33, ಕೊಡಗು 26, ಮಂಗಳೂರು 62, ಮೈಸೂರು 47, ಶಿವಮೊಗ್ಗ 66.

ವಿದ್ಯಾರ್ಹತೆ: ಅಧಿಕೃತ ಮಂಡಳಿಗಳಿಂದ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ.

ವಯೋಮಿತಿ: ಕನಿಷ್ಠ 18 ವರ್ಷ ಮತ್ತು ಗರಿಷ್ಠ 27 ವರ್ಷ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇದೆ.

ವೇತನ: ಮಾಸಿಕ 23,500-47,650 ರೂಪಾಯಿ.

ಅರ್ಜಿ ಸಲ್ಲಿಕೆ, ಅರ್ಜಿ ಶುಲ್ಕ: ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಶುಲ್ಕವನ್ನು ಆನ್‌ಲೈನ್​ ಮೂಲಕವೇ ಪಾವತಿಸಬೇಕು.

ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಪುರುಷ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 120 ರೂ. ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 70 ರೂ., ಪ್ರವರ್ಗ 2ಎ, 2ಬಿ, 3ಎ, 3ಬಿ ಪುರುಷ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 220 ರೂ.ಪ್ರವರ್ಗ 2ಎ, 2ಬಿ, 3ಎ, 3ಬಿ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 120 ರೂ ಪಾವತಿಸಬೇಕಿದೆ.

ಆಯ್ಕೆ ಪ್ರಕ್ರಿಯೆ: ಮೆರಿಟ್​ ಪಟ್ಟಿ, ದಾಖಲಾತಿ ಪರೀಕ್ಷೆ, ದೈಹಿಕ ಗುಣಮಟ್ಟ, ದೈಹಿಕ ಸಾಮರ್ಥ್ಯ, ಶ್ರವಣ ಹಾಗು ದೃಷ್ಟಿ ಪರೀಕ್ಷೆಯ ಮೂಲಕ ಆಯ್ಕೆ.

ಡಿಸೆಂಬರ್​ 1ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಡಿಸೆಂಬರ್​ 30. ಶುಲ್ಕ ಪಾವತಿಗೆ ಕಡೆಯ ದಿನಾಂಕ ಜನವರಿ 5. ಸಂಪೂರ್ಣ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ, ಅರ್ಜಿ ಸಲ್ಲಿಕೆಗೆ ಅಭ್ಯರ್ಥಿಗಳು kfdrecruitment.in ಇಲ್ಲಿಗೆ ಭೇಟಿ ನೀಡಿ.

ಇದನ್ನೂ ಓದಿ: ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ: ಪದವೀಧರರಿಗೆ ಅವಕಾಶ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.