ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಕೋವಿಡ್ ವಾರಿಯರ್ಸ್ಗೆ ಇದೀಗ ಆರೋಗ್ಯ ಸಚಿವ ಸುಧಾಕರ್ ಭರ್ಜರಿ ಕೊಡುಗೆ ಘೋಷಣೆ ಮಾಡಿದ್ದಾರೆ.
-
ಕೊರೊನಾ ಯೋಧರಿಗೆ ನೀಡುತ್ತಿರುವ ಪ್ರೋತ್ಸಾಹ ಧನವನ್ನು 01.04.2021ರಿಂದ ಅನ್ವಯವಾಗಿವಂತೆ 6 ತಿಂಗಳವರೆಗೆ ವಿಸ್ತರಿಸಲಾಗಿದ್ದು, ಆರೋಗ್ಯ ಇಲಾಖೆ ಹಾಗೂ ಎನ್ಎಚ್ಎಂ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರು, ತಜ್ಞರು, ಶುಶ್ರೂಷಕರು, ಪ್ರಯೋಗಶಾಲಾ ತಂತ್ರಜ್ಞರು, ಫಾರ್ಮಾಸಿಸ್ಟ್ ಗಳು ಹಾಗೂ ಡಿ-ಗ್ರೂಪ್ ನೌಕರರಿಗೆ ವಿಶೇಷ ಭತ್ಯೆ ನೀಡಲಾಗುವುದು. pic.twitter.com/MGrtYYEclN
— Dr Sudhakar K (@mla_sudhakar) May 27, 2021 " class="align-text-top noRightClick twitterSection" data="
">ಕೊರೊನಾ ಯೋಧರಿಗೆ ನೀಡುತ್ತಿರುವ ಪ್ರೋತ್ಸಾಹ ಧನವನ್ನು 01.04.2021ರಿಂದ ಅನ್ವಯವಾಗಿವಂತೆ 6 ತಿಂಗಳವರೆಗೆ ವಿಸ್ತರಿಸಲಾಗಿದ್ದು, ಆರೋಗ್ಯ ಇಲಾಖೆ ಹಾಗೂ ಎನ್ಎಚ್ಎಂ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರು, ತಜ್ಞರು, ಶುಶ್ರೂಷಕರು, ಪ್ರಯೋಗಶಾಲಾ ತಂತ್ರಜ್ಞರು, ಫಾರ್ಮಾಸಿಸ್ಟ್ ಗಳು ಹಾಗೂ ಡಿ-ಗ್ರೂಪ್ ನೌಕರರಿಗೆ ವಿಶೇಷ ಭತ್ಯೆ ನೀಡಲಾಗುವುದು. pic.twitter.com/MGrtYYEclN
— Dr Sudhakar K (@mla_sudhakar) May 27, 2021ಕೊರೊನಾ ಯೋಧರಿಗೆ ನೀಡುತ್ತಿರುವ ಪ್ರೋತ್ಸಾಹ ಧನವನ್ನು 01.04.2021ರಿಂದ ಅನ್ವಯವಾಗಿವಂತೆ 6 ತಿಂಗಳವರೆಗೆ ವಿಸ್ತರಿಸಲಾಗಿದ್ದು, ಆರೋಗ್ಯ ಇಲಾಖೆ ಹಾಗೂ ಎನ್ಎಚ್ಎಂ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರು, ತಜ್ಞರು, ಶುಶ್ರೂಷಕರು, ಪ್ರಯೋಗಶಾಲಾ ತಂತ್ರಜ್ಞರು, ಫಾರ್ಮಾಸಿಸ್ಟ್ ಗಳು ಹಾಗೂ ಡಿ-ಗ್ರೂಪ್ ನೌಕರರಿಗೆ ವಿಶೇಷ ಭತ್ಯೆ ನೀಡಲಾಗುವುದು. pic.twitter.com/MGrtYYEclN
— Dr Sudhakar K (@mla_sudhakar) May 27, 2021
ಕೊರೊನಾ ವಿರುದ್ಧದ ಹೋರಾಟದಲ್ಲಿ ಮುಂಚೂಣಿ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗಳಿಗೆ ಆರು ತಿಂಗಳ ಅವಧಿಯ ಪ್ರೋತ್ಸಾಹ ಧನವನ್ನು ವಿಸ್ತರಣೆ ಮಾಡುವುದಾಗಿ ಹೇಳಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ತಮ್ಮ ಟ್ಟಿಟರ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಆರೋಗ್ಯ ಸಚಿವರು, ವೈದ್ಯರು, ತಜ್ಞರು, ಶುಶ್ರೂಷಕರು, ಪ್ರಯೋಗಶಾಲಾ ತಂತ್ರಜ್ಞರು, ಫಾರ್ಮಾಸಿಸ್ಟ್ ಗಳು ಹಾಗೂ ಡಿ-ಗ್ರೂಪ್ ನೌಕರರಿಗೆ ಈ ವಿಶೇಷ ಭತ್ಯೆ ಘೋಷಿಸಿದ್ದಾರೆ.
ಹೊರಗುತ್ತಿಗೆ ನೌಕರರ ವೇತನ, ರಿಸ್ಕ್ ಭತ್ಯೆಗೆ ಸಂಬಂಧಿಸಿದಂತೆ ಸೆಪ್ಟೆಂಬರ್ ವರೆಗಿನ ಅವಧಿಗೆ ಈಗಾಗಲೇ 82.33 ಕೋಟಿ ಅನುದಾನ ಒದಗಿಸಿದ್ದು, ಹೊಸದಾಗಿ ನೇಮಕ ಆದವರ ಅನುದಾನಕ್ಕೆ ಹೆಚ್ಚುವರಿ ಪ್ರಸ್ತಾವನೆ ಸಲ್ಲಿಕೆಗೆ ಸೂಚಿಸಲಾಗಿದೆ ಎಂದಿದ್ದಾರೆ.
ಇದನ್ನೂ ಓದಿ: CCTV VIDEO: ಕುಸ್ತಿಪಟು ಸಾಗರ್ ರಾಣಾ ಮೇಲೆ ಸುಶೀಲ್ ಕುಮಾರ್ ಹಲ್ಲೆ ವಿಡಿಯೋ ವೈರಲ್
ಇವರ ಕಾರ್ಯಕ್ಕೆ ಇದೀಗ ಶ್ಲಾಘನೆ ವ್ಯಕ್ತವಾಗಿದ್ದು, ಏಪ್ರಿಲ್ನಿಂದ ಅನ್ವಯವಾಗುವಂತೆ ಆರು ತಿಂಗಳ ಅವಧಿಗೆ ಪ್ರೋತ್ಸಾಹ ಧನ ನೀಡುವುದಾಗಿ ತಿಳಿಸಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿರುವ ವೈದ್ಯರಿಗೆ 10 ಸಾವಿರ ರೂ. ನರ್ಸ್ಗಳಿಗೆ ತಿಂಗಳಿಗೆ 5 ಸಾವಿರ, ಪ್ರಯೋಗಶಾಲಾ ತಂತ್ರಜ್ಞರಿಗೆ 5 ಸಾವಿರ ಮತ್ತು ಪಿಪಿಇ ಕಿಟ್ ಧರಿಸದೇ ಕೋವಿಡ್ ಆಸ್ಪತ್ರೆಗಳ ಹೊರಗಡೆ ಕಾರ್ಯನಿರ್ವಹಿಸುತ್ತಿರುವ ಗ್ರೂಪ್ ಡಿ ನೌಕರರಿಗೆ 3 ಸಾವಿರ ರೂನಂತೆ ಆರು ತಿಂಗಳ ಅವಧಿ ನೀಡಲು ತೀರ್ಮಾನಿಸಲಾಗಿದೆ.