ETV Bharat / state

ಮುರುಘಾ ಶರಣರಿಗೆ ಜಾಮೀನು ನೀಡದಂತೆ ಹೈಕೋರ್ಟ್‌ನಲ್ಲಿ ಸರ್ಕಾರದ ವಾದ - ಈಟಿವಿ ಭಾರತ ಕರ್ನಾಟಕ

ಶಿವಮೂರ್ತಿ ಶರಣರ ವಿರುದ್ಧ ಮಕ್ಕಳನ್ನು ಲೈಂಗಿಕವಾಗಿ ಶೋಷಿಸಿದ ಆರೋಪವಿದೆ. ಇದು ಗಂಭೀರ ಪ್ರಕರಣ. ಆದ್ದರಿಂದ ಜಾಮೀನು ನೀಡಬಾರದು ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ವಾದಿಸಿತು.

government-argumented-not-to-grant-bail-to-shivamurthy-sharanaru
ಮುರುಘಾ ಶರಣರಿಗೆ ಜಾಮೀನು ನೀಡಬೇಡಿ: ಹೈಕೋರ್ಟ್​ಗೆ ಸರ್ಕಾರ ಮನವಿ
author img

By ETV Bharat Karnataka Team

Published : Oct 30, 2023, 7:59 PM IST

ಬೆಂಗಳೂರು: ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶರಣರು ತಮ್ಮ ಮಠದ ವಸತಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಬಡ ಮಕ್ಕಳನ್ನು ಲೈಂಗಿಕವಾಗಿ ಶೋಷಿಸಿದ ಆರೋಪವಿದೆ. ಅವರೊಬ್ಬ ಪ್ರಭಾವಿ ವ್ಯಕ್ತಿಯೂ ಆಗಿರುವುದರಿಂದ ಜಾಮೀನು ನೀಡಬಾರದು ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮನವಿ ಮಾಡಿದೆ. ಜಾಮೀನು ಕೋರಿ ಶಿವಮೂರ್ತಿ ಶರಣರು ಸಲ್ಲಿಸಿರುವ ಕ್ರಿಮಿನಲ್‌ ಅರ್ಜಿ ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿ ಶ್ರೀನಿವಾಸ್‌ ಹರೀಶ್‌ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠಕ್ಕೆ ಸರ್ಕಾರಿ ವಕೀಲರು ಮನವಿ ಮಾಡಿದರು.

ತನಿಖೆಯಲ್ಲಿ ಸ್ವಾಮೀಜಿ ಅಪರಾಧ ಎಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಇದೊಂದು ಗಂಭೀರ ಮತ್ತು ಪ್ರಭಾವಿ ವ್ಯಕ್ತಿಯ ವಿರುದ್ಧದ ಕ್ರಿಮಿನಲ್‌ ಕೇಸು. ಶ್ರೀಗಳ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ–2012ರ ಪೋಕ್ಸೋ) ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಲಾಗಿದೆ ಎಂದರು. ದಿನದ ಕಲಾಪ ಮುಗಿದ ಕಾರಣ ವಿಚಾರಣೆಯನ್ನು ಮಂಗಳವಾರಕ್ಕೆ (ಅ.31) ಮುಂದೂಡಲಾಗಿದೆ.

ಪೋಕ್ಸೋ ಮತ್ತು ಪರಿಶಿಷ್ಟ ಜಾತಿ ಮತ್ತು ಪಂಗಡ ವಿರುದ್ಧದ ದೌರ್ಜನ್ಯ ತಡೆ ಕಾಯಿದೆಯಡಿ ಮುರುಘಾ ಮಠದ ಶರಣರ ವಿರುದ್ಧ 2022ರ ಸೆಪ್ಟೆಂಬರ್ 1ರಂದು ಪೊಲೀಸರು ಬಂಧಿಸಿದ್ದು, ಅಂದಿನಿಂದಲೂ ಅವರು ಚಿತ್ರದುರ್ಗದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಇದನ್ನೂ ಓದಿ: ಚುನಾವಣಾ ಅಕ್ರಮ ಆರೋಪ: ಶಾಸಕ ಹೆಚ್​ ಡಿ ರೇವಣ್ಣಗೆ ಸಮನ್ಸ್ ಮರು ಜಾರಿ ಮಾಡಿದ ಹೈಕೋರ್ಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.