ETV Bharat / state

ನೌಕರರ ಸಾರ್ವತ್ರಿಕ ವರ್ಗಾವಣೆ ಅವಧಿ ಜುಲೈ 3ರವರೆಗೆ ವಿಸ್ತರಿಸಿ ಸರ್ಕಾರ ಆದೇಶ - Karnataka government

ಸರ್ಕಾರ ನೌಕರರ ಸಾರ್ವತ್ರಿಕ ವರ್ಗಾವಣೆ ಅವಧಿಯನ್ನು ಸರ್ಕಾರ ಮತ್ತೆ ವಿಸ್ತರಣೆ ಮಾಡಿ ಆದೇಶ ಮಾಡಿದೆ.

universal transfer period  again extended the universal transfer period  government has again extended  ಸಾರ್ವತ್ರಿಕ ವರ್ಗಾವಣೆ ಅವಧಿ ಮತ್ತೆ ವಿಸ್ತರಣೆ  ಜುಲೈ 3ರವರೆಗೆ ವಿಸ್ತರಿಸಿ ಆದೇಶ  ಸಾರ್ವತ್ರಿಕ ವರ್ಗಾವಣೆ ಅವಧಿ  ವರ್ಗಾವಣೆ ಅವಧಿಯನ್ನು ಸರ್ಕಾರ ಮತ್ತೆ ವಿಸ್ತರಣೆ  ವರ್ಗಾವಣೆ ಅವಧಿಯನ್ನು ಮತ್ತೆ ವಿಸ್ತರಿಸಿ ಸರ್ಕಾರ ಆದೇಶ  ಸರ್ಕಾರ ಈಗ ಮೂರನೇ ಬಾರಿಗೆ ವಿಸ್ತರಣೆಯ ಆದೇಶ
ಸಾರ್ವತ್ರಿಕ ವರ್ಗಾವಣೆ ಅವಧಿ ಮತ್ತೆ ವಿಸ್ತರಣೆ: ಜುಲೈ 3ರವರೆಗೆ ವಿಸ್ತರಿಸಿ ಆದೇಶ
author img

By

Published : Jun 30, 2023, 1:40 PM IST

Updated : Jun 30, 2023, 3:14 PM IST

ಬೆಂಗಳೂರು: ಸಾರ್ವತ್ರಿಕ ವರ್ಗಾವಣೆ ಅವಧಿಯನ್ನು ಮತ್ತೆ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ. ಜುಲೈ 3ರ ವರೆಗೆ ವರ್ಗಾವಣೆ ಅವಧಿಯನ್ನು ಸರ್ಕಾರ ವಿಸ್ತರಿಸಿದೆ. 2023-24ನೇ ಸಾಲಿನ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಅವಧಿಯನ್ನು ಮೂರನೇ ಬಾರಿಗೆ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ.

ಈ ಮೊದಲು 2023-24ನೇ ಸಾಲಿನ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗಳನ್ನು ಜೂನ್​ 15ರವರೆಗೆ ಕೈಗೊಳ್ಳಲು ಆದೇಶಿಸಲಾಗಿತ್ತು. ಬಳಿಕ ಜೂನ್ 30ರವರೆಗೆ ಸಾರ್ವತ್ರಿಕ ವರ್ಗಾವಣೆ ವಿಸ್ತರಿಸಿ ಆದೇಶ ಹೊರಡಿಸಲಾಗಿತ್ತು. ಇದೀಗ ಸಾರ್ವತ್ರಿಕ ವರ್ಗಾವಣೆ ಅವಧಿಯನ್ನು ಮತ್ತೆ ವಿಸ್ತರಿಸುವುದು ಅವಶ್ಯವೆಂದು ಪರಿಗಣಿಸಿ ಸರ್ಕಾರ ಈಗ ಮೂರನೇ ಬಾರಿಗೆ ವಿಸ್ತರಣೆಯ ಆದೇಶ ಹೊರಡಿಸಿದೆ.

2023-24ನೇ ಸಾಲಿಗೆ ಗ್ರೂಪ್ ಎ, ಗ್ರೂಪ್-ಬಿ, ಗ್ರೂಪ್-ಸಿ ಮತ್ತು ಗ್ರೂಪ್-ಡಿ ವರ್ಗದ ಅಧಿಕಾರಿ, ನೌಕರರಿಗೆ ಅನ್ವಯವಾಗುವಂತೆ ವರ್ಗಾವಣೆ ಮಾರ್ಗಸೂಚಿ ಹೊರಡಿಸಲಾಗಿತ್ತು‌. ಸರ್ಕಾರಿ ನೌಕರರ ವರ್ಗಾವಣೆ ಕುರಿತಂತೆ ವಿಸ್ಕೃತವಾದ ಮಾರ್ಗಸೂಚಿಗಳನ್ನು ನೀಡಲಾಗಿದೆ. ಈ ಮಾರ್ಗಸೂಚಿಗಳ ಪ್ರಕಾರ ಸರ್ಕಾರಿ ನೌಕರರ ವರ್ಗಾವಣೆಗಳನ್ನು ಪ್ರತಿ ವರ್ಷ ಮೇ ಮತ್ತು ಜೂನ್ ತಿಂಗಳುಗಳಲ್ಲಿ ಮಾತ್ರ ಮಾರ್ಗಸೂಚಿಗಳಲ್ಲಿರುವ ಷರತ್ತುಗಳಿಗೊಳಪಟ್ಟು ಮಾಡಬಹುದಾಗಿದೆ. ಒಂದು ಜೇಷ್ಠತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇ.6ರನ್ನು ಮೀರದಂತೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ನೀಡಲಾಗಿದೆ ಎಂದು ಆದೇಶ ಪ್ರತಿಯಲ್ಲಿ ಸೂಚಿಸಲಾಗಿದೆ.

ಈಗಾಗಲೇ ಮಾಜಿ ಸಿಎಂ ಕುಮಾರಸ್ವಾಮಿ ಸಾರ್ವತ್ರಿಕ ವರ್ಗಾವಣೆಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಮಿಷನ್ ಆರೋಪ ಮಾಡಿದ್ದಾರೆ. ವರ್ಗಾವಣೆಗಾಗಿ ಲಂಚದ ದಂಧೆ ಆರಂಭವಾಗಿದೆ ಎಂದು ಗಂಭೀರ ಆರೋಪ ಮಾಡಿದ್ದರು.‌ ಇತ್ತ ಬಿಜೆಪಿಯೂ ಕಾಂಗ್ರೆಸ್ ಸರ್ಕಾರದ ವಿರುದ್ಧ ವರ್ಗಾವಣೆ ದಂಧೆ ಆರೋಪ ಮಾಡಿತ್ತು. ಈ ಮಧ್ಯೆ ಕಾಂಗ್ರೆಸ್ ಸರ್ಕಾರ ಮತ್ತೆ ಸಾರ್ವತ್ರಿಕ ವರ್ಗಾವಣೆ ಅವಧಿಯನ್ನು ವಿಸ್ತರಿಸಿರುವುದು ಹುಬ್ಬೇರಿಸುವಂತೆ ಮಾಡಿದೆ.

ಜೂನ್​ 16ರಂದು ವರ್ಗಾವಣೆ ಅವಥಿ ವಿಸ್ತರಿಸಿ ಮತ್ತೆ ಆದೇಶ: ಈ ಹಿಂದೆ ಜೂನ್​ 16ರಂದು 2023-24ರ ಸಾಲಿನ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿತ್ತು. ಇಂದಿನವರೆಗೆ ಸಾರ್ವತ್ರಿಕ ವರ್ಗಾವಣೆ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿತ್ತು. ಈ ಮುಂಚೆ 2023- 24ನೇ ಸಾಲಿನ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗಳನ್ನು ಜೂ. 15 ರವರೆಗೆ ಕೈಗೊಳ್ಳಲು ಆದೇಶಿಸಲಾಗಿತ್ತು. ಇದೀಗ ಸಾರ್ವತ್ರಿಕ ವರ್ಗಾವಣೆ ಅವಧಿಯನ್ನು ಮತ್ತೆ ವಿಸ್ತರಿಸುವುದು ಅವಶ್ಯವೆಂದು ಪರಿಗಣಿಸಿ ಸರ್ಕಾರ ಈ ಆದೇಶ ನೀಡಿತ್ತು. ಈಗ ಈ ಅವಧಿಯೂ ಸಹ ಮುಕ್ತಾಯಗೊಂಡಿದ್ದು, ಸರ್ಕಾರ ಮತ್ತೆ ಸಾರ್ವತ್ರಿಕ ವರ್ಗಾವಣೆ ಅವಧಿ ವಿಸ್ತರಿಸಿ ಆದೇಶ ಹೊರಡಿಸಿದೆ.

ಓದಿ: ಆತ್ಮಸಾಕ್ಷಿಗೆ ಅನುಗುಣವಾಗಿ ಸಿದ್ದರಾಮಯ್ಯ ನಡೆದುಕೊಳ್ಳಲಿ: ಪ್ರತಾಪ್ ಸಿಂಹ

Last Updated : Jun 30, 2023, 3:14 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.