ETV Bharat / state

APMC Act: ಎಪಿಎಂಸಿ ಕಾಯ್ದೆಯ ಮೂಲ ಸ್ವರೂಪ ಉಳಿಸಿ ತಿದ್ದುಪಡಿಗೆ ನಿರ್ಧಾರ- ಸಚಿವ ಎಚ್.ಕೆ. ಪಾಟೀಲ್ - ಈಟಿವಿ ಭಾರತ್​ ಕನ್ನಡ ನ್ಯೂಸ್​

ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರುವ ವಿಚಾರವಾಗಿ ವಿಧಾನಸೌಧದಲ್ಲಿ ಸಚಿವ ಎಚ್.ಕೆ. ಪಾಟೀಲ್ ಸಭೆ ನಡೆಸಿದರು.

ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರುವ ವಿಚಾರವಾಗಿ ಸಭೆ

author img

By

Published : Jun 14, 2023, 7:31 PM IST

ಬೆಂಗಳೂರು : ಈ ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಹೊಸ ಎಪಿಎಂಸಿ ಕಾಯ್ದೆಯನ್ನು ಜಾರಿಗೆ ತಂದಿತ್ತು. ಆ ಕಾಯ್ದೆ ರದ್ದುಗೊಳಿಸಿ, ಹಳೆ ಕಾಯ್ದೆಯ ಮೂಲ ಸ್ವರೂಪ ಉಳಿಸಿಕೊಂಡು ಸುಧಾರಿತ ರೂಪದಲ್ಲಿ ತಿದ್ದುಪಡಿ ತರಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ತಿಳಿಸಿದರು.

ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರುವ ವಿಚಾರವಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರ ಹಾಗೂ ಕೃಷಿ ಮಾರುಕಟ್ಟೆ ಇಲಾಖೆಯ ಅಧಿಕಾರಿಗಳ ಜೊತೆ ವಿಧಾನಸೌಧದಲ್ಲಿ ಇಂದು ಎಚ್.ಕೆ.ಪಾಟೀಲ್ ಸಭೆ ನಡೆಸಿದರು. ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಎಪಿಎಂಸಿ ತಿದ್ದುಪಡಿ ವಿಧೇಯಕವನ್ನು ಜುಲೈನಲ್ಲಿ ನಡೆಯಲಿರುವ ಅಧಿವೇಶನದಲ್ಲಿ ಮಂಡಿಸಲಾಗುವುದು. ಕಾಯಿದೆಯ ಬಗ್ಗೆ ಈಗಾಗಲೇ ಸಾಕಷ್ಟು ಚರ್ಚೆ ನಡೆಸಲಾಗಿದೆ. ಮುಂದಿನ ವಾರ ಮತ್ತೊಂದು ಸಭೆ ನಡೆಸಿ ತಜ್ಞರ ಅಭಿಪ್ರಾಯ ಪಡೆದು ವಿಧೇಯಕಕ್ಕೆ ಅಂತಿಮ ರೂಪ ನೀಡಲಾಗುವುದು ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ದೇಶನದಂತೆ ನಾನು ಮತ್ತು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಅವರು ಸಭೆ ನಡೆಸಿ ಸುರ್ದೀಘವಾದ ಚರ್ಚೆ ಮಾಡಿದ್ದೇವೆ. ಹಿಂದಿನ ಸರ್ಕಾರದ ಅವಧಿಯಲ್ಲಿ ರೈತರ ಕಲ್ಯಾಣವನ್ನು ಬದಿಗೊತ್ತಿ ಕೃಷಿ ಮಾರುಕಟ್ಟೆ ಸಮಿತಿಗಳ ಸತ್ವ ಹಾಗೂ ಶಕ್ತಿಯನ್ನು ತೆಗೆದು ಹಾಕುವ, ಸಡಿಲಗೊಳಿಸುವ ತಿದ್ದುಪಡಿ ಮಾಡಲಾಗಿತ್ತು. ರೈತರಿಂದ ವಿರೋಧವಾದ ನಂತರ ಕೇಂದ್ರ ಸರ್ಕಾರ ವಿಧೇಯಕಗಳನ್ನು ವಾಪಸ್ ಪಡೆದರೂ, ರಾಜ್ಯದಲ್ಲಿ ಎಪಿಎಂಸಿ ಕಾಯಿದೆ ಪುನರುಜ್ಜೀವನಗೊಳಿಸಿರಲಿಲ್ಲ. ಹೀಗಾಗಿ ನಾವು ಎಪಿಎಂಸಿ ಕಾಯಿದೆಯ ಮೂಲ ಸ್ವರೂಪವನ್ನು ಉಳಿಸಿಕೊಂಡು ರೈತರಿಗೆ ಅನುಕೂಲವಾಗುವ ಅಂಶಗಳನ್ನು ಉಳಿಸಿ ಮತ್ತಷ್ಟು ಸುಧಾರಿತ ರೂಪದಲ್ಲಿ ವಿಧೇಯಕ ತರುತ್ತಿದ್ದೇವೆ ಎಂದು ಪಾಟೀಲ್ ಭರವಸೆ ನೀಡಿದರು.

ವ್ಯಾಜ್ಯ ನಿರ್ವಹಣಾ ಪದ್ಧತಿಯಲ್ಲೇ ಲೋಪ: ರಾಜ್ಯ ಸರ್ಕಾರ 1.85 ಲಕ್ಷ ಪ್ರಕರಣಗಳಲ್ಲಿ ಸೋತಿದೆ. ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಸರ್ಕಾರಕ್ಕೆ ಸೋಲುಂಟಾಗಲು ವ್ಯಾಜ್ಯ ನಿರ್ವಹಣಾ ಪದ್ಧತಿಯಲ್ಲೇ ಲೋಪವಿರುವುದನ್ನು ಗುರುತಿಸಿದ್ದೇವೆ. ವ್ಯಾಜ್ಯ ನಿರ್ವಹಣೆಯಲ್ಲಿ ಸರ್ಕಾರದ ಹಾಗೂ ರಾಜ್ಯದ ಹಿತ ಕಾಪಾಡುವ ಉದ್ದೇಶದಿಂದ ಸಿಪಿಸಿಗೆ ತಿದ್ದುಪಡಿ ತರುತ್ತೇವೆ. ಮುಂದೆ ಈ ರೀತಿ ಆಗಬಾರದು ಎಂಬ ಕಾರಣಕ್ಕಾಗಿ ತಿದ್ದುಪಡಿ ವಿಧೇಯಕವನ್ನು ತರಲು ಉದ್ದೇಶಿಸಲಾಗಿದೆ.

ಅಲ್ಲದೆ, ಸರ್ಕಾರಿ ವ್ಯಾಜ್ಯಗಳ ನಿರ್ವಹಣಾ ಮಸೂದೆಯನ್ನು ಅವೇಶನದಲ್ಲಿ ಮಂಡಿಸಲು ಚಿಂತಿಸಲಾಗಿದೆ. ಬಡವರಿಗೆ ಸಂಬಂಧಿಸಿ ಪ್ರಕರಣಗಳು ನ್ಯಾಯಾಲಯಗಳಲ್ಲಿ ಬೇಗ ಇತ್ಯಾರ್ಥವಾಗದೇ ವಿಳಂಬವಾಗುತ್ತಿರುವುದುನ್ನು ಗಮನಿಸಿದ್ದು, ಆದ್ಯತೆ ಮೇರೆಗೆ ಆರು ತಿಂಗಳಲ್ಲಿ ಇತ್ಯರ್ಥಗೊಳಿಸಬೇಕು ಎಂಬ ಉದ್ದೇಶದಿಂದ ವಿಧೇಯಕ ತರುವ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ವಿವರಿಸಿದರು.

ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಮಾತನಾಡಿ, ಎಪಿಎಂಸಿ ಕಾಯಿದೆಗೆ ತಿದ್ದುಪಡಿ ತಂದ ನಂತರ ರಾಜ್ಯದ ರೈತರು, ವ್ಯಾಪರಿಗಳು ಹಾಗೂ ಶ್ರಮಿಕ ವರ್ಗದವರಿಗೂ ಅನುಕೂಲವಾಗಲಿಲ್ಲ. ರೈತರಿಗೆ ಆದಾಯವೂ ಆಗಲಿಲ್ಲ. ಕೃಷಿ ಉತ್ಪನ್ನಗಳ ಬೆಲೆಯೂ ಹೆಚ್ಚಾಗಲಿಲ್ಲ. ಕಳೆದ ಮೂರು ವರ್ಷಗಳಲ್ಲಿ ಎಪಿಎಂಸಿ ಆದಾಯವೂ ಇಳಿಕೆಯಾಗಿದೆ. ಸುಮಾರು 650 ಕೋಟಿ ರೂ.ನಷ್ಟಿದ್ದ ಆದಾಯ 200 ಕೋಟಿ ರೂ. ಗೆ ಇಳಿಕೆಯಾಗಿದೆ.

ಕರ್ನಾಟಕದ ಎಪಿಎಂಸಿ ಕಾಯಿದೆ ರಾಷ್ಟ್ರಕ್ಕೆ ಮಾದರಿಯಾಗಿತ್ತು. ರೈತರ ಹಿತಕಾಪಾಡುವ ನಿಟ್ಟಿನಲ್ಲಿ ಸುಧಾರಿತ ರೂಪದಲ್ಲಿ ಇನ್ನು ಹೆಚ್ಚಿನ ಮಾದರಿಯಾಗುವಂತೆ ತಿದ್ದುಪಡಿ ತರಲಾಗುವುದು. ತಿದ್ದುಪಡಿ ಕಾಯ್ದೆಯಡಿ ಖಾಸಗಿ ಮಾರುಕಟ್ಟೆ ಯಾರ್ಡ್​ಗಳು, ದಲ್ಲಾಳಿಗಳು ಕೂಡ ನಿಯಂತ್ರಣಕ್ಕೆ ಒಳಪಡುತ್ತಾರೆ. ಎಪಿಎಂಸಿ ಒಳ ಹಾಗೂ ಹೊರಗೆ ಒಂದೇ ಧಾರಣೆ ದೊರೆಯುವಂತೆ ಆಗಬೇಕು ಎಂದರು.

ಇದನ್ನೂ ಓದಿ : ಕೃಷಿ ಕಾಯ್ದೆ, ಎಪಿಎಂಸಿ ಕಾಯ್ದೆ ಕುರಿತು ಸಿಎಂ, ಡಿಸಿಎಂ ಜೊತೆ ಚರ್ಚೆ: ಕೃಷಿ ಸಚಿವ ಚೆಲುವರಾಯಸ್ವಾಮಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.