ಬೆಂಗಳೂರು: ಕೋವಿಡ್ - 19 2ನೇ ಅಲೆ ಹಿನ್ನೆಲೆಯಲ್ಲಿ ವಾಹನ ತೆರಿಗೆ ಪಾವತಿಸಲು ಅವಧಿ ವಿಸ್ತರಣೆ ಮಾಡಲಾಗಿದೆ.
ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ 1957ರ ಕಲಂ 4(1) ನಿಯಮಗಳನ್ನು ಸಡಿಲಗೊಳಿಸಿ, ಕರ್ನಾಟಕ ರಾಜ್ಯದ ಎಲ್ಲಾ ನೋಂದಾಯಿತ ಸಾರಿಗೆ ಪ್ರಯಾಣಿಕ ವಾಹನಗಳಿಗೆ (ಹೊಸ ವಾಹನಗಳ ನೋಂದಣಿಯನ್ನು ಹೊರತುಪಡಿಸಿ) ಅನ್ವಯಿಸುವಂತೆ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಏಪ್ರಿಲ್ 15ರೊಳಗಾಗಿ ಪಾವತಿಸಬೇಕಾಗಿರುವ ವಾಹನ ತೆರಿಗೆಯನ್ನು ದಂಡ ರಹಿತವಾಗಿ ಪಾವತಿಸಲು ಏಪ್ರಿಲ್ 30ರವರೆಗೆ ವಿಸ್ತರಿಸಲಾಯಿತು. ಇದೀಗ ಮೇ 15ರೊಳಗಾಗಿ ಪಾವತಿಸಬೇಕಾಗಿರುವ ಮೋಟಾರು ವಾಹನ ತೆರಿಗೆಯನ್ನು ದಂಡ ರಹಿತವಾಗಿ ಪಾವತಿಸಲು ಏಪ್ರಿಲ್ 31ರವರೆಗೆ ಅವಧಿಯನ್ನು ವಿಸ್ತರಿಸಿ ಆದೇಶಿಸಲಾಗಿದೆ.