ETV Bharat / state

ಕರುನಾಡಿಗೆ ಅನ್​ಲಾಕ್ ಪ್ಲಾನ್ ರೂಪಿಸುತ್ತಿರುವ ಸರ್ಕಾರ! - ಅನ್​ಲಾಕ್ ಪ್ಲಾನ್

ಕಳೆದ ಒಂದು ತಿಂಗಳಿಂದ ರಾಜ್ಯಾದ್ಯಂತ ಕಠಿಣ ಲಾಕ್‌ಡೌನ್ ಜಾರಿಯಲ್ಲಿದೆ. ಬಹುತೇಕ ಆರ್ಥಿಕ ಚಟುವಟಿಕೆ ಸ್ತಬ್ಧವಾಗಿದೆ. ಹೀಗಾಗಿ, ಸರ್ಕಾರಕ್ಕೆ ಅನ್‌ಲಾಕ್ ಪ್ರಕ್ರಿಯೆ ಪ್ರಾರಂಭಿಸುವುದು ಅನಿವಾರ್ಯವಾಗಿದೆ..

lockdown
lockdown
author img

By

Published : May 30, 2021, 8:06 PM IST

ಬೆಂಗಳೂರು : ಕೊರೊನಾ ಎರಡನೇ ಅಲೆಯ ಅಬ್ಬರವನ್ನು ನಿಯಂತ್ರಿಸಲು ಸರ್ಕಾರ ಲಾಕ್‌ಡೌನ್ ಹೇರಿಕೆ ಮಾಡಿದೆ. ಕಳೆದ ಒಂದು ತಿಂಗಳುಗಳ ಕಾಲ ರಾಜ್ಯ ಕಠಿಣ ಲಾಕ್‌ಡೌನ್​ಗೆ ಹೋಗಿದ್ದು, ಇದೀಗ ಸರ್ಕಾರ ಅನ್‌ಲಾಕ್ ಪ್ಲಾನ್ ರೂಪಿಸುತ್ತಿದೆ.

ಕೊರೊನಾ ಎರಡನೇ ಅಲೆ ಕರುನಾಡನ್ನು ಸಂಪೂರ್ಣ ನಲುಗಿಸಿದೆ. ದಿನೇದಿನೆ ಉಲ್ಬಣಿಸುತ್ತಿದ್ದ ಕೊರೊನಾ ಅಬ್ಬರ, ಮತ್ತೊಂದೆಡೆ ಹೆಚ್ಚುತ್ತಿರುವ ಸಾವಿನ ಸಂಖ್ಯೆ ರಾಜ್ಯವನ್ನು ಸಂಪೂರ್ಣ ಹಿಂಡಿ ಹಿಪ್ಪೆಯಾಗಿಸಿತ್ತು.

ಈ ಕೊರೊನಾದ ಆರ್ಭಟಕ್ಕೆ ನಿಯಂತ್ರಣ ಹೇರಲು ಅನಿವಾರ್ಯವಾಗಿ ಸರ್ಕಾರ ಲಾಕ್‌ಡೌನ್ ಮೊರೆ ಹೋಗಿದೆ. ಏಪ್ರಿಲ್ 27ರಿಂದ ಚಾಲ್ತಿಯಲ್ಲಿರುವ ಲಾಕ್‌ಡೌನ್‌ನ ದಿನ ಕಳೆದಂತೆ ಮತ್ತಷ್ಟು ಬಿಗಿಗೊಳಿಸಲಾಯಿತು.‌ ಜೂನ್ 7ರವರೆಗೆ ರಾಜ್ಯದಲ್ಲಿ ಬಿಗಿ ಲಾಕ್‌ಡೌನ್ ಮುಂದುವರಿದಿದೆ.

ಒಂದು ತಿಂಗಳು ರಾಜ್ಯ ಬಹುತೇಕ ಸ್ತಬ್ಧವಾಗಿದೆ. ಇದೀಗ ರಾಜ್ಯದಲ್ಲಿ ಕೊರೊನಾ ಅಬ್ಬರ ತಗ್ಗುತ್ತಿದೆ. ಪಾಸಿಟಿವ್ ದರ ಕಡಿಮೆಯಾಗುತ್ತಿದ್ದರೆ, ಕೊರೊನಾದಿಂದ ಗುಣಮುಖರಾಗುತ್ತಿರುವ ಪ್ರಮಾಣವೂ ದಿನೇದಿನೆ ಹೆಚ್ಚಾಗುತ್ತಿದೆ.

ಬೆಂಗಳೂರಿನಲ್ಲಿ ಗಣನೀಯವಾಗಿ ಕೊರೊನಾ ಆರ್ಭಟ ಕಡಿಮೆಯಾಗುತ್ತಿದೆ. ಕೊರೊನಾ ರೌದ್ರಾವತಾರ ಇಳಿಕೆಯಾಗುತ್ತಿರುವ ಹಿನ್ನೆಲೆ ಇದೀಗ ಸರ್ಕಾರ ಅನ್‌ಲಾಕ್ ಪ್ರಕ್ರಿಯೆಗೆ ಸಿದ್ಧತೆ ನಡೆಸುತ್ತಿದೆ.

ಅನ್​​ಲಾಕ್​​ ಅನಿವಾರ್ಯತೆಯಲ್ಲಿ ಸರ್ಕಾರ : ಕಳೆದ ಒಂದು ತಿಂಗಳಿಂದ ರಾಜ್ಯಾದ್ಯಂತ ಕಠಿಣ ಲಾಕ್‌ಡೌನ್ ಜಾರಿಯಲ್ಲಿದೆ. ಬಹುತೇಕ ಆರ್ಥಿಕ ಚಟುವಟಿಕೆ ಸ್ತಬ್ಧವಾಗಿದೆ.

ಇದರಿಂದ ರಾಜ್ಯದ ಆರ್ಥಿಕತೆಗೆ, ಖಜಾನೆಗೆ ಭಾರೀ ಹೊಡೆತ ಬೀಳುತ್ತಿದೆ. ಹೀಗಾಗಿ, ಸರ್ಕಾರಕ್ಕೆ ಅನ್‌ಲಾಕ್ ಪ್ರಕ್ರಿಯೆ ಪ್ರಾರಂಭಿಸುವುದು ಅನಿವಾರ್ಯವಾಗಿದೆ.

ಈಗಾಗಲೇ ಆರ್ಥಿಕ ಇಲಾಖೆ ಅಧಿಕಾರಿಗಳು ಲಾಕ್‌ಡೌನ್ ಮುಂದುವರಿದರೆ ಆಗುವ ಆರ್ಥಿಕ ಸಮಸ್ಯೆ ಬಗ್ಗೆ ಸಿಎಂ ಅವಗಾಹನೆಗೆ ತಂದಿದ್ದಾರೆ. ಹೀಗಾಗಿ, ಹಂತ ಹಂತವಾಗಿ ಲಾಕ್‌ಡೌನ್ ತೆರವು ಸೂಕ್ತ ಎಂದು ಅಧಿಕಾರಿಗಳು ಸಿಎಂಗೆ ಸಲಹೆ ನೀಡಿದ್ದಾರೆ.

ಕಳೆದ ಎರಡು ವಾರದಿಂದ ರಾಜ್ಯದಲ್ಲಿ ಅದರಲ್ಲೂ ಬೆಂಗಳೂರಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಾಣುತ್ತಿವೆ. ಹೀಗಾಗಿ, ಜೂನ್ 7ರ ಬಳಿಕ ಲಾಕ್‌ಡೌನ್‌ನಲ್ಲಿ ಸಡಿಲಿಕೆ ಮಾಡಿ, ಆರ್ಥಿಕ ಚಟುವಟಿಕೆಗಳಿಗೆ ಹಂತ ಹಂತವಾಗಿ ಅವಕಾಶ ಮಾಡಿಕೊಡಬೇಕು ಎಂಬ ಅಭಿಪ್ರಾಯ ಆರ್ಥಿಕ ಇಲಾಖೆ ಅಧಿಕಾರಿಗಳದ್ದಾಗಿದೆ.

ಪಾಸಿಟಿವಿಟಿ ದರ ಇಳಿಕೆಯಾಗುತ್ತಿರುವ ಹಿನ್ನೆಲೆ, ಮುಂದಿನ ಒಂದು ವಾರದ ಲಾಕ್‌ಡೌನ್ ವೇಳೆ ಕೊರೊನಾ ಪಾಸಿಟಿವಿಟಿ ದರ 10% ಗಿಂತ ಕೆಳಗೆ ಇಳಿಕೆಯಾಗುವ ವಿಶ್ವಾಸ ಸರ್ಕಾರದ್ದಾಗಿದೆ.

ಇತ್ತ ಲಾಕ್‌ಡೌನ್ ವೇಳೆ ಕೊರೊನಾ ನಿರ್ವಹಣೆಗಾಗಿ ಅಗತ್ಯವಿರುವ ಬೆಡ್ ಪ್ರಮಾಣ, ಆಕ್ಸಿಜನ್, ಐಸಿಯು ಬೆಡ್, ಸಿಸಿಸಿಗಳನ್ನು ಸರ್ಕಾರ ಏರಿಕೆ ಮಾಡಲಾಗುತ್ತಿದೆ.

ಕೋವಿಡ್ ನಿರ್ವಹಣೆಗೆ ಬೇಕಾಗಿರುವ ಮೂಲಸೌಕರ್ಯಗಳನ್ನು ವೇಗವಾಗಿ ವೃದ್ಧಿಸಲಾಗುತ್ತಿದೆ. ಹೀಗಾಗಿ, ಹಂತ ಹಂತವಾಗಿ ಅನ್​ಲಾಕ್ ಮಾಡುವ ಯೋಚನೆ ಸರ್ಕಾರದ ಮಟ್ಟದಲ್ಲಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಅನ್‌ಲಾಕ್ ಮಾರ್ಗಸೂಚಿಯನ್ನು ಸಿದ್ಧಪಡಿಸುತ್ತಿದ್ದಾರೆ.

ಬಹುತೇಕ ಕಳೆದ ಬಾರಿಯ ರಾಷ್ಟ್ರೀಯ ಲಾಕ್‌ಡೌನ್ ವೇಳೆ ಅನುಸರಿಸಲಾದ ಅನ್‌ಲಾಕ್ ಮಾರ್ಗಸೂಚಿಯನ್ನೇ ಈ ಬಾರಿಯೂ ಸಿದ್ಧಪಡಿಸಲಾಗುತ್ತದೆ. ಈಗಾಗಲೇ ಡಿಸಿಎಂ ಅಶ್ವತ್ಥ್ ನಾರಾಯಣ್, ಎಸ್.ಟಿ.ಸೋಮಶೇಖರ್, ಆರ್.ಅಶೋಕ್ ಸೇರಿದಂತೆ ಕೆಲ ಹಿರಿಯ ಸಚಿವರು ಅನ್​ಲಾಕ್ ಪ್ರಕ್ರಿಯೆ ಪ್ರಾರಂಭಿಸುವಂತೆ ಸಲಹೆ ನೀಡಿದ್ದಾರೆ.

ಇತ್ತ ತಜ್ಞರ ಸಮಿತಿಯೂ ಪ್ರಕರಣ ಕಡಿಮೆ ಇರುವಲ್ಲಿ ಆರ್ಥಿಕ ಚಟುವಟಿಕೆ ಪ್ರಾರಂಭಿಸುವ ನಿಟ್ಟಿನಲ್ಲಿ ಲಾಕ್‌ಡೌನ್ ಸಡಿಲಗೊಳಿಸುವ ಅಭಿಪ್ರಾಯ ಹೊಂದಿದೆ. ಆರ್ಥಿಕ ಚಟುವಟಿಕೆ ನಿಧಾನವಾಗಿ ಪ್ರಾರಂಭವಾಗಬೇಕು ಇಲ್ಲವಾದರೆ ರಾಜ್ಯದ ಆರ್ಥಿಕತೆ ಸಂಪೂರ್ಣ ಕುಸಿಯಲಿದೆ.

ಹೀಗಾಗಿ, ಅನ್‌ಲಾಕ್ ಮಾಡುವುದು ಅನಿವಾರ್ಯ ಎಂದು ಡಿಸಿಎಂ ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. ಸಿಎಂ ಕೂಡ ಜೂನ್ 7ರ ಬಳಿಕ ಅನ್‌ಲಾಕ್ ಮಾಡುವ ಬಗ್ಗೆ ಸುಳಿವು ನೀಡಿದ್ದಾರೆ. ಜೂನ್ 6ರಂದು ಕೊರೊನಾ ಪ್ರಕರಣಗಳ ಸ್ಥಿತಿಗತಿ ಅವಲೋಕಿಸಿ ಸಿಎಂ ಅನ್‌ಲಾಕ್ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ.

ಅನ್‌ಲಾಕ್ ಪ್ಲಾನ್ ಹೇಗಿರಲಿದೆ?:

- ಕೈಗಾರಿಕಾ ಚಟುವಟಿಕೆಗಳಿಗೆ ಅನುಮತಿ

- ಸಾರಿಗೆ ಸಂಚಾರಕ್ಕೆ ನಿರ್ಬಂಧಿತ ಅವಕಾಶ

- ಓಲಾ, ಉಬರ್, ಆಟೋ ಸಂಚಾರಕ್ಕೆ ಅನುಮತಿ

- ಮಾಲ್, ವಾಣಿಜ್ಯ ಸಂಕೀರ್ಣಗಳಿಗೆ 50% ಅನುಮತಿ

- ಸಾರ್ವಜನಿಕ ವಾಹನಗಳಲ್ಲಿ 50% ಪ್ರಯಾಣಿಕರಿಗೆ ಅವಕಾಶ

- ಅಗತ್ಯೇತರ ಅಂಗಡಿ ಮುಂಗಟ್ಟಿಗೂ ನಿರ್ಬಂಧಿತ ಅವಕಾಶ

- ಹೋಟೆಲ್​​, ಬಾರ್, ರೆಸ್ಟೋರೆಂಟ್ ನಿರ್ಬಂಧಿತ ಅವಕಾಶ

- ಪ್ರಕರಣ ಹೆಚ್ಚಿರುವ ಜಿಲ್ಲೆಗಳಲ್ಲಿ ಕಠಿಣ ನಿರ್ಬಂಧ ವಿಸ್ತರಣೆ

- ಮೈಕ್ರೋ ಕಂಟೈನ್ಮೆಂಟ್ ಝೋನ್​ಗೆ ಹೆಚ್ಚಿನ ಒತ್ತು

- ಸಭೆ ಸಮಾರಂಭ, ರಾಜಕೀಯ ಸಭೆ, ಗುಂಪು ಸೇರುವಿಕೆಗೆ ನಿಷೇಧ

- ಮದುವೆ, ಸಮಾರಂಭಕ್ಕೂ ನಿರ್ಬಂಧಿತ ಅವಕಾಶ

- ಸದ್ಯ ಪಬ್, ಜಿಮ್, ಈಜುಕೊಳ, ಸಿನಿಮಾ ಥಿಯೇಟರ್​​ಗೆ ನಿಷೇಧ

- ನೈಟ್ ಕರ್ಫ್ಯೂ ಮುಂದುವರಿಸಲು ಚಿಂತನೆ

- ಕಠಿಣ ನಿಯಂತ್ರಕ ಕ್ರಮಗಳು ಮುಂದುವರಿಕೆ

- ಧಾರ್ಮಿಕ ಕೇಂದ್ರಗಳಿಗೆ ನಿರ್ಬಂಧಿತ ಅವಕಾಶ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.