ETV Bharat / state

ರಾಜ್ಯದ ಜನತೆಯನ್ನುದ್ದೇಶಿಸಿ ರಾಜ್ಯಪಾಲ ಥಾವರ್​ಚಂದ್​ ಭಾಷಣ...ಜಲಾನಯನ ಅಭಿವೃದ್ಧಿ ಬಗ್ಗೆ ಹೆಚ್ಚಿನ ಒತ್ತು - ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ

73ನೇ ಗಣರಾಜ್ಯೋತ್ಸವ ದಿನದ ಹಿನ್ನೆಲೆ ಕರ್ನಾಟಕ ರಾಜ್ಯದ ಜನತೆಯನ್ನು ಉದ್ದೇಶಿಸಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಿದರು.

ಕರ್ನಾಟಕ ರಾಜ್ಯದ ಜನತೆಯನ್ನು ಉದ್ದೇಶಿಸಿ ಥಾವರ್​ಚಂದ್​ ಭಾಷಣ  ಕರ್ನಾಟಕ ರಾಜ್ಯದ ಜನತೆಯನ್ನು ಉದ್ದೇಶಿಸಿ ಥಾವರ್​ಚಂದ್​ ಭಾಷಣ
ಕರ್ನಾಟಕ ರಾಜ್ಯದ ಜನತೆಯನ್ನು ಉದ್ದೇಶಿಸಿ ಥಾವರ್​ಚಂದ್​ ಭಾಷಣ
author img

By

Published : Jan 26, 2022, 11:26 AM IST

Updated : Jan 26, 2022, 12:01 PM IST

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣ, ಲಾಕ್​ಡೌನ್ ವೇಳೆ ಸಂಕಷ್ಟಕ್ಕೆ ಒಳಗಾದ ಜನರಿಗೆ ಸರ್ಕಾರದ ನೆರವು, ಕರ್ನಾಟಕ ಸರ್ಕಾರದ ಅಮೃತ ಯೋಜನೆಗಳು, ಕೊರೊನಾ ಲಸಿಕೆ ಹಾಗೂ ಕೊರೊನಾ ವಾರಿಯರ್ಸ್​ ಸೇವೆ, ಕರ್ನಾಟಕದಲ್ಲಿ ಸಂಭವಿಸಿದ ಅತಿವೃಷ್ಟಿ ಅನಾವೃಷ್ಟಿ ಇತ್ಯಾದಿ ವಿಚಾರಗಳ ಕುರಿತು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಿದ್ದಾರೆ.

73ನೇ ಗಣರಾಜ್ಯೋತ್ಸವ ದಿನಾಚರಣೆ ಹಿನ್ನೆಲೆ ಕರ್ನಾಟಕ ರಾಜ್ಯದ ಜನತೆಯನ್ನು ಉದ್ದೇಶಿಸಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಮಾತನಾಡಿದ ಅವರು, ಕೊರನಾ ನಿಯಂತ್ರಿಸಲು ವೈದ್ಯರು, ನರ್ಸ್‌ಗಳು ಅವಿರತ ಸೇವೆ ಸಲ್ಲಿಸಿದ್ದಾರೆ. ಪೊಲೀಸ್ ಸಿಬ್ಬಂದಿ, ಆರೋಗ್ಯ ಕಾರ್ಯಕರ್ತರು, ಫ್ರಂಟ್ ಲೈನ್ ವಾರಿಯರ್ಸ್‌ಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

2021-22ರಲ್ಲಿ ಜಗತ್ತು ಸವಾಲನ್ನು ನಿಭಾಯಿಸಲು ಹೆಣಗುತ್ತಿರುವಾಗ ನಾವು ಕೋವಿಡ್-19ರ ವಿರುದ್ಧ ಅತ್ಯಂತ ಸಮರ್ಥವಾಗಿ ಹೋರಾಡಿದ್ದೇವೆ. ನವ ಚೈತನ್ಯ ಮತ್ತು ಆಶೋತ್ತರಗಳೊಂದಿಗೆ 2022ಕ್ಕೆ ಹೆಜ್ಜೆ ಇರಿಸಿದ್ದೇವೆ. ರಾಜ್ಯ ಸರ್ಕಾರವು ಕೋವಿಡ್-19 ರ ಪರಿಣಾಮವನ್ನು ತಗ್ಗಿಸಲು ಹಗಲಿರುಳು ಶ್ರಮಿಸಿದೆ. ಜನತೆಯ ಸಹಕಾರದೊಂದಿಗೆ ಪರಿಣಾಮಕಾರಿಯಾಗಿ ಕೋವಿಡ್​ ತಗ್ಗಿಸುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಹೇಳಿದರು.

ಕರ್ನಾಟಕ ರಾಜ್ಯದ ಜನತೆಯನ್ನು ಉದ್ದೇಶಿಸಿ ರಾಜ್ಯಪಾಲ ಥಾವರ್​ಚಂದ್​ ಗೆಹ್ಲೋಟ್​​ ಭಾಷಣ

ಅಮೃತ ಮಹೋತ್ಸವ ಕಾರ್ಯಕ್ರಮ: ದೇಶದ ಪ್ರಗತಿಪರ ರಾಜ್ಯಗಳಲ್ಲಿ ಒಂದಾಗಿರುವ ಕರ್ನಾಟಕ, ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಅನೇಕ ಮಹತ್ವಪೂರ್ಣ ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸಿದೆ.

ಅಮೃತ ಗ್ರಾಮ ಪಂಚಾಯಿತಿಗಳ ಅಮೃತ ರೈತ, ಅಮೃತ ಗ್ರಾಮೀಣ ವಸತಿ ಯೋಜನೆ, ಅಮೃತ ನಿರ್ಮಲ, ಅಮೃತ ಶಾಲಾ ಮೂಲಸೌಕರ್ಯ ಕಾರ್ಯಕ್ರಮ, ಅಮೃತ ಅಂಗನವಾಡಿ ಕೇಂದ್ರಗಳು, ಅಮೃತ ನಗರೋತ್ಥಾನ ಇತ್ಯಾದಿಗಳನ್ನು ಒಳಗೊಂಡಂತೆ 14 ಅಮೃತ ಮಹೋತ್ಸವ ಕಾರ್ಯಕ್ರಮಗಳನ್ನು ರಾಜ್ಯವು ಘೋಷಿಸಿದೆ. ಕರ್ನಾಟಕವು 15 ಆಗಸ್ಟ್ 2023 ರವರೆಗೆ ಗುರಿಪಡಿಸಿದ ಫಲಿತಾಂಶಗಳೊಂದಿಗೆ ಅನುಷ್ಠಾನ ಮಾರ್ಗಸೂಚಿಯನ್ನು ಸಿದ್ಧಪಡಿಸಿದೆ ಎಂದು ತಿಳಿಸಿದರು.

ಜಲಾನಯನ ಅಭಿವೃದ್ಧಿ ಕಡೆ ಗಮನ: ಸರ್ಕಾರವು ಕೃಷಿ ವಲಯದಲ್ಲಿ ಬದಲಾವಣೆಯನ್ನು ತರಲು ಜಲಾನಯನ ಅಭಿವೃದ್ಧಿಯ ಕಡೆ ಗಮನಹರಿಸಿದೆ. 2021-22ನೇ ಸಾಲಿನಲ್ಲಿ ಸರ್ಕಾರವು 1,472 ಕೋಟಿ ರೂಪಾಯಿಗಳ ಮೊತ್ತದ ಜಲಾನಯನ ಅಭಿವೃದ್ಧಿ ಕಾಮಗಾರಿಗಳಿಗೆ ಅನುಮೋದನೆ ನೀಡಿದೆ. ಹಾಗೆಯೇ ಮೊಬೈಲ್ ಮತ್ತು ತಂತ್ರಜ್ಞಾನ ಆಧಾರಿತ ಬೆಳೆ ಸಮೀಕ್ಷೆಯನ್ನು ಗ್ರಾಮ ಮಟ್ಟದ ಸ್ಥಳೀಯ ಯುವಕರ ಮೂಲಕ ಈಗಾಗಲೇ ಅನುಷ್ಠಾನಗೊಳಿಸಲಾಗಿದೆ ಎಂದು ಘೋಷಿಸಿದರು.

ಕರ್ನಾಟಕ ರಾಜ್ಯದ ಜನತೆಯನ್ನು ಉದ್ದೇಶಿಸಿ ರಾಜ್ಯಪಾಲ ಥಾವರ್​ಚಂದ್ ಗೆಹ್ಲೋಟ್​​ ಭಾಷಣ

2021-22ನೇ ಸಾಲಿನಲ್ಲಿ 12,76,868 ರೈತರು ಬೆಳೆ ಸಮೀಕ್ಷೆಯಡಿ ನೋಂದಾಯಿಸಿಕೊಂಡಿದ್ದಾರೆ ಮತ್ತು 256.95 ಲಕ್ಷ ಪ್ರದೇಶವನ್ನು ಬೆಳೆ ಸಮೀಕ್ಷೆಯ ಅಡಿ ತರಲಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿನ ರೈತರ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಲು ರೂ. 4.41 ಕೋಟಿ ಮೊತ್ತವನ್ನು 16,176 ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗಿದೆ.

ಆರೋಗ್ಯ ಇಲಾಖೆಯು ಹಿರಿಯ ವೈದ್ಯಾಧಿಕಾರಿಗಳು, ತಂತ್ರಜ್ಞರು, ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲು ವಿಶೇಷ ನೇಮಕಾತಿ ಸಮಿತಿಯನ್ನು ರಚಿಸಿದೆ. 6 ತಿಂಗಳ ಅವಧಿಯೊಳಗೆ 746 ತಂತ್ರಜ್ಞರು ಮತ್ತು 1,048 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ನೇಮಕ ಮಾಡಿದೆ ಎಂದು ಗಣರಾಜ್ಯೋತ್ಸವ ಭಾಷಣದಲ್ಲಿ ಪ್ರಸ್ತಾಪಿಸಿದರು.

ಸರ್ಕಾರವು ವಲಸೆ ಕಾರ್ಮಿಕರು ಮತ್ತು ಇತರ ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡಿಕೊಂಡು ಬರುವಲ್ಲಿ ಸರಿಯಾದ ತೀರ್ಮಾನಗಳನ್ನು ತೆಗೆದುಕೊಂಡಿದೆ. ಕರ್ನಾಟಕ ಕಟ್ಟಡ ಮತ್ತು ಇತರೆ ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ನೋಂದಾಯಿಸಿಕೊಂಡಿದೆ. ಮಂಡಳಿಯು 15 ವಿವಿಧ 26.73 ಲಕ್ಷ ಕಾರ್ಮಿಕರನ್ನು ಯೋಜನೆಗಳಡಿ 10,10,485 ಫಲಾನುಭವಿಗಳಿಗೆ ರೂ. 1,136.05 ಮೊತ್ತದ ಸಹಾಯಧನವನ್ನು ಪಾವತಿಸಿದೆ ಮತ್ತು 8,390 ಕೋಟಿ ರೂಪಾಯಿಗಳನ್ನು ಸುಂಕವಾಗಿ ಸಂಗ್ರಹಿಸಲಾಗಿದೆ ಅಂತಾ ಸರ್ಕಾರದ ಅಭಿವೃದ್ಧಿ ಬಗ್ಗೆ ತಿಳಿಸಿದರು.

ಎರಡನೇ ಅಲೆಯ ಲಾಕ್‌ಡೌನ್ ಸಂದರ್ಭದಲ್ಲಿ 11,82,307 ಕಾರ್ಮಿಕರಿಗೆ ತಲಾ 2,000 ರೂಪಾಯಿಗಳಂತೆ 236.46 ಕೋಟಿ ರೂ. ಪಾವತಿಸಲಾಗಿದೆ. ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯು 14,527 ಸಂಘಟಿತ ಕಾರ್ಮಿಕರು ಮತ್ತು ಅವರ ಅವಲಂಬಿತರಿಗೆ 628.16 ಕೋಟಿ ರೂಪಾಯಿಗಳನ್ನು ವಿತರಿಸಿದೆ ಎಂದರು.

ತೋಟಗಾರಿಕೆ ಕ್ಷೇತ್ರದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ: ಕರ್ನಾಟಕವು ಈಗಲೂ ಸಹ ತೋಟಗಾರಿಕೆ ಕ್ಷೇತ್ರದಲ್ಲಿ ಪ್ರಥಮ ಸ್ಥಾನದಲ್ಲಿದೆ ಮತ್ತು ಸರ್ಕಾರವು ವಿವಿಧ ತೋಟಗಾರಿಕಾ ಉತ್ಪನ್ನಗಳ ಸಾಗುವಳಿಯ ಕ್ಷೇತ್ರವನ್ನು 57.05 ಹೆಕ್ಟರ್ ಪ್ರದೇಶಕ್ಕೆ ವಿಸ್ತರಿಸಿದೆ. 18,777 ಹೆಕ್ಟರ್ ಪ್ರದೇಶದಲ್ಲಿ ಹನಿ ನೀರಾವರಿಯನ್ನು ಅನುಷ್ಠಾನಗೊಳಿಸಲಾಗಿದೆ ಮತ್ತು ಇದರಿಂದ 20,634 ಫಲಾನುಭವಿಗಳಿಗೆ ಪ್ರಯೋಜನವಾಗಿದೆ. 57.05 ಹೆಕ್ಟರ್ ಪ್ರದೇಶವನ್ನು ಕೀಟಗಳು ಮತ್ತು ರೋಗಗಳ ನಿಯಂತ್ರಣದಡಿಗೆ ತರಲಾಗಿದೆ. 3347 ಹೆಕ್ಟರ್ ಪ್ರದೇಶದಲ್ಲಿ ಸಂರಕ್ಷಿತ ಬೇಸಾಯ ಪದ್ಧತಿಯನ್ನು ಜಾರಿಗೆ ತರಲಾಗಿದೆ. 3440 ಜೇನು ಪೆಟ್ಟಿಗೆಗಳನ್ನು ವಿತರಿಸಲಾಗಿದೆ ಎಂದರು.

ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆದ ಆಕರ್ಷಕ ಪಥಸಂಚಲನ

ಪೊಲೀಸ್ ಇಲಾಖೆಗಳ ವಿವಿಧ ಘಟಕಗಳಿಗೆ ಶಸ್ತ್ರಾಸ್ತ್ರಗಳು, ವಾಹನಗಳು ಮತ್ತು ವೈಜ್ಞಾನಿಕ ಉಪಕರಣ ಮುಂತಾದವುಗಳ ಖರೀದಿಗಾಗಿ ಆಧುನೀಕರಣ ಯೋಜನೆಯ ಅಡಿಯಲ್ಲಿ ಕೇಂದ್ರ ಸರ್ಕಾರದಿಂದ 14.23 ಕೋಟಿ ರೂ. ಮೊತ್ತವನ್ನು ಮತ್ತು ರಾಜ್ಯ ಸರ್ಕಾರದಿಂದ 13.39 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ವೈರ್‌ಲೆಸ್ ಉಪಕರಣಗಳ ಖರೀದಿಗಾಗಿ ಕೇಂದ್ರ ಸರ್ಕಾರದಿಂದ 9.14 ಕೋಟಿ ರೂ. ಮೊತ್ತವನ್ನು ಮತ್ತು ರಾಜ್ಯ ಸರ್ಕಾರದಿಂದ 6.09 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಅಂದರು.

2021-22ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಗಳ ವಿವಿಧ ಕಲ್ಯಾಣ ಯೋಜನೆಗಳ ಅನುಷ್ಠಾನಕ್ಕಾಗಿ ಸಮಾಜ ಕಲ್ಯಾಣ ಇಲಾಖೆಗೆ ಒಟ್ಟು ರೂ.3,710 ಕೋಟಿಗಳನ್ನು ಹಂಚಿಕೆ ಮಾಡಲಾಗಿದೆ. ಈ ಪೈಕಿ ನವೆಂಬರ್ 2021ರ ವರೆಗೆ ಸುಮಾರು ರೂ. 2,014 ಕೋಟಿಗಳನ್ನು ವೆಚ್ಚ ಮಾಡಲಾಗಿದೆ.

ಮಾತೃಪೂರ್ಣ ಯೋಜನೆಯಡಿಯಲ್ಲಿ ಗರ್ಭಿಣಿ ಮಹಿಳೆಯರು ಮತ್ತು ಬಾಣಂತಿಯರಿಗೆ ಪೌಷ್ಠಿಕ ಆಹಾರವನ್ನು ಒದಗಿಸುತ್ತಿದೆ. ಇದನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅನುಷ್ಠಾನಗೊಳಿಸಲಾಗಿದೆ ಹಾಗೂ ಈ ಸೌಲಭ್ಯವನ್ನು 9.36 ಲಕ್ಷ ಫಲಾನುಭವಿಗಳು ಪಡೆದುಕೊಂಡಿರುತ್ತಾರೆ.

ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆಯಡಿ ಗರ್ಭಿಣಿ ಸ್ತ್ರೀಯರ ಮತ್ತು ಬಾಣಂತಿಯರ ಬ್ಯಾಂಕ್ ಖಾತೆಗಳಿಗೆ 5000 ರೂಪಾಯಿಗಳನ್ನು ಜಮೆ ಮಾಡಲಾಗುವುದು ಅಂತ ವಿವಿಧ ಯೋಜನೆಗಳ ಕುರಿತು ಭಾಷಣದಲ್ಲಿ ತಿಳಿಸಿದರು.

Last Updated : Jan 26, 2022, 12:01 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.