ETV Bharat / state

'ಯಶಸ್ವಿನಿ ಯೋಜನೆ' ಮರು ಜಾರಿ: ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದರಾ ಸಿಎಂ ಬೊಮ್ಮಾಯಿ?

ರಾಜ್ಯದಲ್ಲಿ ಜಾರಿಯಲ್ಲಿರುವ 'ಆರೋಗ್ಯ ಕರ್ನಾಟಕ ಯೋಜನೆ' ಅನುಷ್ಠಾನ ವಿಳಂಬದಿಂದಾಗಿ ರಾಜ್ಯದಲ್ಲಿದ್ದ 43.42 ಲಕ್ಷ ಯಶಸ್ವಿನಿ ಫಲಾನುಭವಿಗಳ ಪೈಕಿ 30 ಲಕ್ಷದಷ್ಟು ಜನರಿಗೆ ಆರೋಗ್ಯ ಸೇವೆ ಲಭ್ಯವಾಗದಂತಾಗಿದೆ. ಇವರೆಲ್ಲಾ ಸ್ವಂತ ಖರ್ಚಿನಲ್ಲಿ ಚಿಕಿತ್ಸೆ ಪಡೆಯಬೇಕಿದ್ದು ಆರ್ಥಿಕ ದುರ್ಬಲರು, ಮಧ್ಯಮ ವರ್ಗದ ಜನರಿಗೆ ಇದು ತುಂಬಾ ದುಬಾರಿಯಾಗುತ್ತಿದೆ. ಈಗ ಇವರಿಗೆಲ್ಲ ಮತ್ತೆ ಯಶಸ್ವಿನಿ ಯೋಜನೆ ಜಾರಿಯಾದಲ್ಲಿ ಉಚಿತ ಚಿಕಿತ್ಸೆ ಪಡೆಯಲು ಅವಕಾಶ ಸಿಕ್ಕಂತಾಗಲಿದೆ.

CM Basavaraj Bommai
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
author img

By

Published : Mar 7, 2022, 7:15 AM IST

ಬೆಂಗಳೂರು: ಮುಂಬರಲಿರುವ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಜನಪ್ರಿಯ ಕಾರ್ಯಕ್ರಮಗಳ ಮೊರೆ ಹೋಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 'ಯಶಸ್ವಿನಿ ಯೋಜನೆ' ಮರು ಜಾರಿ ಮೂಲಕ ಜಾತಿ, ಧರ್ಮಗಳನ್ನು ಮೀರಿ ಅರ್ಧ ಕೋಟಿ ಜನರ ಮನ ತಲುಪಲು ಮುಂದಾಗಿದ್ದಾರೆ.

ರಾಜ್ಯದಲ್ಲಿನ 30 ಜಿಲ್ಲೆಗಳಲ್ಲಿರುವ ಸಹಕಾರಿ ಸಂಘಗಳು, ಸೊಸೈಟಿಗಳು, ಪತ್ರಕರ್ತರ ಸಹಕಾರ ಸಂಘಗಳು, ಸಹಕಾರಿ ಬ್ಯಾಂಕ್‌, ಸ್ತ್ರೀ ಶಕ್ತಿ ಸಂಘ, ಸಾಂಸ್ಕೃತಿಕ ಸಹಕಾರ ಸೊಸೈಟಿಗಳ 43.42 ಲಕ್ಷ ಮಂದಿ ಯಶಸ್ವಿನಿ ಯೋಜನೆಯ ಫಲಾನುಭವಿಗಳಾಗಿದ್ದರು.

ಬಿಪಿಎಲ್‌ ಹಾಗೂ ಎಪಿಎಲ್‌ ತಾರತಮ್ಯವಿಲ್ಲದೇ ಪ್ರತಿಯೊಂದು ಕುಟುಂಬಕ್ಕೆ 2 ಲಕ್ಷ ರೂ.ವರೆಗೆ ವಾರ್ಷಿಕ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸುತ್ತಿತ್ತು. ಈಗ ಮರಳಿ ಯೋಜನೆ ಅನುಷ್ಠಾನಕ್ಕೆ ತರುತ್ತಿರುವುದರಿಂದ ಫಲಾನುಭವಿಗಳ ಸಂಖ್ಯೆ 50 ಲಕ್ಷದ ಸನಿಹಕ್ಕೆ ಬರಲಿದೆ.

ಉಚಿತ ಚಿಕಿತ್ಸೆ ಪಡೆಯಲು ಅವಕಾಶ: ಸದ್ಯ ರಾಜ್ಯದಲ್ಲಿ ಜಾರಿಯಲ್ಲಿರುವ 'ಆರೋಗ್ಯ ಕರ್ನಾಟಕ ಯೋಜನೆ' ಅನುಷ್ಠಾನ ವಿಳಂಬದಿಂದಾಗಿ ರಾಜ್ಯದಲ್ಲಿದ್ದ 43.42 ಲಕ್ಷ ಯಶಸ್ವಿನಿ ಫಲಾನುಭವಿಗಳ ಪೈಕಿ 30 ಲಕ್ಷದಷ್ಟು ಜನರಿಗೆ ಆರೋಗ್ಯ ಸೇವೆ ಲಭ್ಯವಾಗದಂತಾಗಿದೆ. ಇವರೆಲ್ಲ ಸ್ವಂತ ಖರ್ಚಿನಲ್ಲಿ ಚಿಕಿತ್ಸೆ ಪಡೆಯಬೇಕಿದ್ದು, ಆರ್ಥಿಕ ದುರ್ಬಲರು, ಮಧ್ಯಮ ವರ್ಗದ ಜನರಿಗೆ ಇದು ತುಂಬಾ ದುಬಾರಿಯಾಗುತ್ತಿದೆ. ಈಗ ಇವರಿಗೆಲ್ಲ ಮತ್ತೆ ಯಶಸ್ವಿನಿ ಯೋಜನೆ ಜಾರಿಯಾದಲ್ಲಿ ಉಚಿತ ಚಿಕಿತ್ಸೆ ಪಡೆಯಲು ಅವಕಾಶ ಸಿಕ್ಕಂತಾಗಲಿದೆ.

ಸ್ಥಗಿತಗೊಂಡಿದ್ದ ಯೋಜನೆ ಮರು ಜಾರಿ:ಸರ್ಕಾರದ ಈ ನಿರ್ಧಾರದಿಂದಾಗಿ ಯೋಜನೆಯ ಫಲಾನುಭವಿಗಳು ದೊಡ್ಡ ಪ್ರಮಾಣದಲ್ಲಿ ಕೇಸರಿ ಪಕ್ಷದ ಕಡೆ ವಾಲುತ್ತಾರೆ. ಚುನಾವಣೆಯಲ್ಲಿ ಇದು ಸಹಕಾರಿಯಾಗಲಿದೆ ಎನ್ನುವುದು ಬೊಮ್ಮಾಯಿ ಅವರ ಲೆಕ್ಕಾಚಾರವಾಗಿದೆ.

ಹಾಗಾಗಿ ಯಾವುದೋ ಹೊಸ ಜನಪ್ರಿಯ ಯೋಜನೆ ಘೋಷಿಸಿ ಜನಪ್ರಿಯತೆ ಗಳಿಸುವ ಬದಲು ಸ್ಥಗಿತಗೊಂಡಿದ್ದ ಜನಪ್ರಿಯ ಯೋಜನೆಯನ್ನೇ ಮರು ಜಾರಿ ಮಾಡಿ ಜನಪ್ರಿಯತೆ ಗಳಿಸಿಕೊಳ್ಳುವ ಮೂಲಕ ಒಂದೇ ಕಲ್ಲಿಗೆ ಬೊಮ್ಮಾಯಿ ಎರಡು ಹಕ್ಕಿ ಹೊಡೆಯುತ್ತಿದ್ದಾರೆ.

ಇದನ್ನೂ ಓದಿ: ಯಶಸ್ವಿನಿ ಯೋಜನೆ ಮರು ಜಾರಿಗೆ ಎಸ್ಎಂ ಕೃಷ್ಣ ಸಂತಸ..!

ಎಸ್.ಎಂ ಕೃಷ್ಣ ಅವರ ಮಹತ್ವಾಕಾಂಕ್ಷಿ ಯೋಜನೆ: 2003ರಲ್ಲಿ ಅಂದಿನ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಮಹತ್ವಾಕಾಂಕ್ಷಿ ಯೋಜನೆ 'ಯಶಸ್ವಿನಿ ಆರೋಗ್ಯ ಕಾರ್ಡ್'. ಗ್ರಾಮೀಣ ಪ್ರದೇಶಗಳಲ್ಲಿ ಸಹಕಾರಿ ಬ್ಯಾಂಕ್​​ಗಳ ಸದಸ್ಯರಾಗಿದ್ದವರು ತಮ್ಮ ಕುಟುಂಬದ ಆರೋಗ್ಯ ಭದ್ರಪಡಿಸಿಕೊಳ್ಳಲು ಯಶಸ್ವಿನಿ ಕಾರ್ಡ್ ಅತ್ಯಂತ ಸುಲಭ ಮಾರ್ಗವಾಗಿತ್ತು.

ವರ್ಷಕ್ಕೊಮ್ಮೆ ಕೇವಲ 300 ರೂ. ಪ್ರೀಮಿಯಂ ಪಾವತಿ ಮಾಡುವ ಮೂಲಕ ಯಶಸ್ವಿನಿ ಕಾರ್ಡ್​ನ ಪ್ರಯೋಜನಗಳನ್ನು ಪಡೆಯಬಹುದಾಗಿತ್ತು. ನಂತರ 2015ರಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಯೋಜನೆಯನ್ನು ನಗರ ಪ್ರದೇಶಕ್ಕೂ ವಿಸ್ತರಿಸಿದ್ದರು. ನಗರ ಪ್ರದೇಶದ ಪ್ರೀಮಿಯಂ 700 ರೂ. ಎಂದು ನಿಗದಿಯಾಗಿತ್ತು.

ಸುಮಾರು 2 ಲಕ್ಷ ರೂ.ವರೆಗಿನ ಚಿಕಿತ್ಸೆಯನ್ನು ಈ ಕಾರ್ಡ್​ ಹೊಂದಿದವರು ಸಂಪೂರ್ಣ ಉಚಿತವಾಗಿ ಪಡೆಯುವ ಅವಕಾಶವಿತ್ತು. ಮೊದಲ ಬಾರಿಗೆ 2003ರಲ್ಲಿ ಶುರುವಾದ ಯೋಜನೆಯಲ್ಲಿ 2003-04ನೇ ಸಾಲಿನಲ್ಲಿಯೇ 16 ಲಕ್ಷ ಸದಸ್ಯರು ನೋಂದಣಿ ಮಾಡಿಕೊಂಡಿದ್ದರು. 2016-17ನೇ ಸಾಲಿಗೆ ಸದಸ್ಯರ ಸಂಖ್ಯೆ 43.42 ಲಕ್ಷದಷ್ಟಾಗಿದೆ.

2018ರಲ್ಲಿ ಸ್ಥಗಿತಗೊಂಡ ಯೋಜನೆ: 2016-17ನೇ ಸಾಲಿನಲ್ಲಿ ಯೋಜನೆಯಡಿ 2,71,776 ಮಂದಿ ಹೊರ ರೋಗಿಗಳು ಸೇವೆ ಪಡೆದಿದ್ದಾರೆ. ಜತೆಗೆ 1,94,129 ಮಂದಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ. ಈ ಹಣದಲ್ಲಿ ಸದಸ್ಯರ ವಿಮಾ ಕಂತಿನಿಂದ 105.32 ಕೋಟಿ ರೂ. ಹಾಗೂ ಸರ್ಕಾರದಿಂದ 170.43 ಕೋಟಿ ರೂ. ಭರಿಸಲಾಗಿದೆ. ಇದೆಲ್ಲದರ ನಡುವೆ 2018ರ ಮೇ 31ರಂದು ಯಶಸ್ವಿನಿ ಯೋಜನೆ ಸಂಪೂರ್ಣವಾಗಿ ಸ್ಥಗಿತಗೊಂಡಿತ್ತು. ರಾಜ್ಯ ಸರ್ಕಾರ ತನ್ನ ಮತ್ತೊಂದು ಮಹತ್ವಾಕಾಂಕ್ಷಿ ಯೋಜನೆಯಾದ 'ಆರೋಗ್ಯ ಕರ್ನಾಟಕ ಯೂನಿವರ್ಸಲ್ ಹೆಲ್ತ್ ಕಾರ್ಡ್' ಜಾರಿ ಮಾಡಿದೆ.

ಈಗ ಮತ್ತೆ ಈ ಯೋಜನೆ ಕೆಲ ಮಾರ್ಪಾಡುಗಳೊಂದಿಗೆ ಮರಳಿ ಜಾರಿಯಾಗುತ್ತಿದ್ದು, ಅರ್ಧ ಕೋಟಿ ಜನರಿಗೆ ಇದರ ಉಪಯೋಗವಾಗಲಿದೆ. ಭವಿಷ್ಯದ ಚುನಾವಣಾ ದೃಷ್ಟಿಯಿಂದ ಯಶಸ್ವಿನಿ ಯೋಜನೆ ಬೊಮ್ಮಾಯಿ ಲೆಕ್ಕಾಚಾರಗಳಲ್ಲೊಂದಾಗಿದ್ದು, ಎಷ್ಟರ ಮಟ್ಟಿಗೆ ಫಲಾನುಭವಿಗಳು ಬಿಜೆಪಿ ಸರ್ಕಾರದ ಪರ ವಾಲುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ‌.

  • ಏನಿದು ಯಶಸ್ವಿನಿ ಯೋಜನೆ?: ಯಶಸ್ವಿನಿ ಗ್ರಾಮೀಣ ಸಹಕಾರಿಗಳ ಆರೋಗ್ಯ ರಕ್ಷಣಾ ಯೋಜನೆ. ಕರ್ನಾಟಕದ ರಾಜ್ಯದ ಗ್ರಾಮೀಣ ಸಹಕಾರಿಗಳಿಗಾಗಿಯೇ ರೂಪಗೊಂಡಿರುವ ಒಂದು 'ಸ್ವಯಂ-ನಿಧಿ ಶಸ್ತ್ರಚಿಕಿತ್ಸಾ ಯೋಜನೆ'. ಈ ಯೋಜನೆಯಡಿ ಗ್ರಾಮೀಣ ಸಹಕಾರಿಯೊಬ್ಬರು ತಿಂಗಳಿಗೆ ಇಂತಿಷ್ಟರಂತೆ ನಿಗದಿತ ಪ್ರಮಾಣದಲ್ಲಿ ಒಂದು ವರ್ಷದ ಅವಧಿಯಲ್ಲಿ ಯೋಜನೆಯಲ್ಲಿ ಒಳಗೊಂಡ ಯಾವುದೇ ಶಸ್ತ್ರ ಚಿಕಿತ್ಸೆಯನ್ನು ನಿಗದಿತ ಮಿತಿಯೊಳಗೆ, ಷರತ್ತು ಮತ್ತು ನಿಯಮಗಳಿಗೆ ಒಳಪಟ್ಟು ಟ್ರಸ್ಟಿನಿಂದ ಅಂಗೀಕೃತ ಯಾವುದೇ ಆಸ್ಪತ್ರೆಗಳಲ್ಲಿ ನಗದು ರಹಿತವಾಗಿ ಪಡೆಯಬಹುದು.
  • ಯೋಜನೆಯ ಫಲಾಭವಿಯಾಗಲು ಇರಬೇಕಾದ ಅರ್ಹತೆಗಳೇನು?: ಈ ಯೋಜನೆಯ ಫಲಾನುಭವಿಯಾಗಲು ಕನಿಷ್ಟ 3 ತಿಂಗಳು ಮುಂಚಿತ ಅರ್ಹ ಗ್ರಾಮೀಣ ಸಹಕಾರ ಸಂಘವೊಂದರ ಸದಸ್ಯರಾಗಿರಬೇಕು. ಅಲ್ಲದೇ ಗ್ರಾಮೀಣ ಸಹಕಾರ ಸಂಘ/ಬ್ಯಾಂಕುಗಳೊಡನೆ ವ್ಯವಹರಿಸುತ್ತಿರುವ ಗ್ರಾಮೀಣ ಸ್ತ್ರೀ ಶಕ್ತಿ ಗುಂಪು, ಸ್ವ-ಸಹಾಯ ಗುಂಪಿನ ಸದಸ್ಯರು ಮತ್ತು ಅವರ ಕುಟುಂಬದ ಎಲ್ಲ ಸದಸ್ಯರು ಯೋಜನೆಯ ಫಲಾನುಭವಿಯಾಗಬಹುದು.
  • ಪಾವತಿಸಬೇಕಾದ ವಂತಿಗೆ ಹಣ ಎಷ್ಟು?: ಫಲಾನುಭವಿಯಾಗ ಬಯಸುವ ಪ್ರತಿಯೊಬ್ಬರೂ ವರ್ಷಕ್ಕೆ ನಿಗದಿತ ಪ್ರಮಾಣದ ವಂತಿಗೆ ಹಣ ನೀಡಬೇಕು. 2014-15ನೇ ಸಾಲಿಗೆ ವಾರ್ಷಿಕ ವಂತಿಗೆ ರೂ.250ರೂ. ಆಗಿರುತ್ತದೆ. ಒಂದೇ ಕುಟುಂಬದ 5 ಅಥವಾ 5ಕ್ಕಿಂತ ಹೆಚ್ಚು ಸದಸ್ಯರು ನೊಂದಣಿಯಾದಲ್ಲಿ ವಂತಿಗೆಯಲ್ಲಿ ಶೇ.15 ರಿಯಾಯಿತಿ ಇರುತ್ತದೆ .
  • ಕುಟುಂಬದ ಎಲ್ಲ ಸದಸ್ಯರು ಸದಸ್ಯತ್ವವನ್ನು ಹೊಂದಿರಬೇಕೆ?: ಕುಟುಂಬದ ಯಾವುದೇ ಒಬ್ಬ ಸದಸ್ಯನು/ಸದಸ್ಯಳು ಮೇಲೆ ತಿಳಿಸಿರುವ ಅರ್ಹ ಸಹಕಾರ ಸಂಘದ ಸದಸ್ಯನಾಗಿ/ಳಾಗಿ ಯಶಸ್ವಿನಿ ವರ್ಷದ ಮೊದಲ ದಿನ ಅಂದರೆ 01.06.2014ಕ್ಕೆ ಮೂರು ತಿಂಗಳಾಗಿದ್ದಲ್ಲಿ, ಕುಟುಂಬದ ಪ್ರತಿಯೊಬ್ಬ ಸದಸ್ಯನೂ ನಿಗದಿತ ಅವಧಿಯಲ್ಲಿ ವಾರ್ಷಿಕ ವಂತಿಗೆ ಸಲ್ಲಿಸುವ ಮೂಲಕ ಯಶಸ್ವಿನಿ ಯೋಜನೆಯ ಸೌಲಭ್ಯ ಪಡೆಯಬಹುದು.
  • ನೋಂದವಣೆ ಯಾವಾಗ?: ಯಶಸ್ವಿನಿ ನೋಂದಾವಣೆಯು ಪ್ರತಿ ವರ್ಷದಲ್ಲಿ ಜನವರಿ ಅಥವಾ ಫೆಬ್ರವರಿಯಲ್ಲಿ ಪ್ರಾರಂಭವಾಗಿ ಆಗಸ್ಟ್ ಮಾಹೆಯಲ್ಲಿ ಕೊನೆಗೊಳ್ಳುತ್ತದೆ.
  • ಯಾವ ಯಾವ ಸದಸ್ಯರು ಸೇರಿರುತ್ತಾರೆ?: ಗ್ರಾಮೀಣ ಪ್ರದೇಶದಲ್ಲಿರುವ ಸಹಕಾರಿ ಸಂಘ/ಸಹಕಾರಿ ಬ್ಯಾಂಕುಗಳಲ್ಲಿ ಹಣಕಾಸಿನ ವಹಿವಾಟು ಹೊಂದಿರುವ ಸ್ವ-ಸಹಾಯ ಗುಂಪಿನ ಸದಸ್ಯರು ಕೂಡ ಯೋಜನೆಯ ಸೌಲಭ್ಯ ಪಡೆಯಬಹುದು. ನಗರ/ಪಟ್ಟಣ ಪ್ರದೇಶದಲ್ಲಿ ಸಹಕಾರಿ ಮೀನುಗಾರರು, ಸಹಕಾರಿ ಬೀಡಿ ಕಾರ್ಮಿಕರು ಮತ್ತು ಸಹಕಾರಿ ನೇಕಾರರು ಕೂಡ ಯೋಜನೆಯ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ.
  • ಯೋಜನೆಯ ಸೌಲಭ್ಯ ಪಡೆಯಲು ವಯೋಮಿತಿ ನಿಗದಿಪಡಿಸಲಾಗಿಲ್ಲ. ಯೋಜನೆಯ ಸೌಲಭ್ಯವನ್ನು ಜೀವಿತಾವಧಿಯವರಿಗೆ ಪಡೆಯಬಹುದು.
  • ಸದಸ್ಯರನ್ನು ಗುರುತಿಸಲು ಯಾವ ದಾಖಲೆ ನೀಡಿರುತ್ತಾರೆ?: ಪ್ರತಿಯೊಬ್ಬ ಸದಸ್ಯನಿಗೆ ಯುನಿಕ್ ಐಡಿ ನಂಬರ್​​​ಗಳಿರುವ ಬಾರ್ ಕೋಡ್ ರೀಡಿಂಗ್ ವ್ಯವಸ್ಥೆ ಇರುವ ಗುರುತಿಸುವ ಕಾರ್ಡ್ ಅನ್ನು ಕೊಡಲಾಗುತ್ತದೆ. ಅದರ ಮುಂದಿನ ಪ್ರಬದಲ್ಲಿ ನೋಂದಾಯಿಸಿದ ವಿವರಗಳು ಮತ್ತು ಹಿಂಬದಿಯಲ್ಲೇ ಅವರ ಭಾವಚಿತ್ರಗಳು ಇರುತ್ತದೆ.
  • ಯೋಜನೆಯು ಒಳಗೊಂಡ ಶಸ್ತ್ರಚಿಕಿತ್ಸೆಗಳೆಷ್ಟು: ಯಶಸ್ವಿನಿ ಈ ಯೋಜನೆಯಲ್ಲಿ 823 ಬಗೆಯ ಶಸ್ತ್ರಚಿಕಿತ್ಸೆಗಳು ಒಳಗೊಂಡಿದೆ.
  • ಫಲಾನುಭವಿಗಳಿಗೆ ದೊರೆಯುವ ಇತರ ಸೌಲಭ್ಯಗಳು ಯಾವುವು?: ಟ್ರಸ್ಟನಿಂದ ಅಂಗೀಕೃತವಾದ ಆಸ್ಪತ್ರೆಗಳಲ್ಲಿ ಯಶಸ್ವಿನಿ ಫಲಾನುಭವಿಗಳು ಹೊರರೋಗಿ ಸಲಹೆಯನ್ನು ರೂ 100ಗಳನ್ನು ಸಾಮಾನ್ಯ ಪರೀಕ್ಷೆಗೆ ಮತ್ತು ವಿಶೇಷ ತಜ್ಙರಿಂದ ಪರೀಕ್ಷೆ ಮಾಡಿಸಿಕೊಳ್ಳಲು ರೂ.200ಗಳನ್ನು ಪಾವತಿಸಿ ಮೂರು ತಿಂಗಳವರೆಗೆ ಅದೇ ಕಾರ್ಡ್​​​​​ನಲ್ಲಿ ತಪಾಸಣೆ ಮಾಡಿಸಿಕೊಳ್ಳಬಹುದು. ಯಶಸ್ವಿನಿ ಕಾರ್ಡ್​ದಾರರು ನೆಟ್ ವರ್ಕ್ ಆಸ್ಪತ್ರೆಗಳಲ್ಲಿ ಕ್ಲಿನಿಕ್ ಅಥವಾ ಇನ್ನಾವುದೇ ಇನ್ವೆಸ್ಟಿಗೇಷನ್ ಗಳನ್ನು ಶೇ 25 ರಿಯಾಯಿತಿ ದರದಲ್ಲಿ ಪಡೆಯಬಹುದು.
  • ಯಶಸ್ವಿನಿ ಯೋಜನೆಯಡಿಯಲ್ಲಿ ಒಳಪಡದ ಶಸ್ತ್ರಚಿಕಿತ್ಸೆಗಳು ಯಾವುವು?: ಶಸ್ತ್ರಚಿಕಿತ್ಸೆ ಅವಶ್ಯವಿಲ್ಲದ ಯಾವುದೇ ವೈದ್ಯಕೀಯ ಚಿಕಿತ್ಸೆ ಯೋಜನೆಯಲ್ಲಿ ಲಭ್ಯವಿರುವುದಿಲ್ಲ. ಇದಲ್ಲದೇ ಚಿಕಿತ್ಸೆಗಳಾದ ಕೀಮೊಥೆರಪಿ, ರೇಡಿಯೋ ಥೆರಪಿ, ಜಾಯಿಂಟ್ ಬದಲಾವಣೆ, ಸುಟ್ಟು ಗಾಯಗಳು, ರಸ್ತೆ ಅಪಘಾತಗಳು, ಹಲ್ಲಿನ ಶಸ್ತ್ರಚಿಕಿತ್ಸೆ, ಚರ್ಮದ ಗ್ರಾಫ್ಟಿಂಗ್,ಸ್ಟಂಟ್, ಇಂಪ್ಲಾಂಟ್ಸ್ ಇತ್ಯಾದಿ ಸೌಲಭ್ಯಗಳು ಯೋಜನೆಯಲ್ಲಿ ಸೇರಿರುವುದಿಲ್ಲ. ಇಂತಹ ಅನಾರೋಗ್ಯಗಳಿಗೆ ಫಲಾನುಭವಿ ಪಡೆಯುವ ವೈದ್ಯಕೀಯ ಚಿಕಿತ್ಸೆ, ಔಷಧೋಪಚಾರಗಳ ಹಾಗೂ ಶಸ್ತ್ರಚಿಕಿತ್ಸಾ ವೆಚ್ಚವನ್ನು ಫಲಾನುಭವಿಗಳೇ ಭರಿಸಬೇಕು.
  • ಯೋಜನೆಯಡಿಯಲ್ಲಿ ದೊರೆಯುವ ಹೆಚ್ಚಿನ ಸೌಲಭ್ಯಗಳು: ಈ ಕೆಳಗಿನ ತುರ್ತು ವೈದ್ಯಕೀಯ ಚಿಕಿತ್ಸಾ ಸೌಲಭ್ಯಗಳು ಕೆಲವೊಂದು ಷರತ್ತುಗಳಿಗೊಳಪಟ್ಟು ಲಭ್ಯವಿರುತ್ತವೆ.
  1. ಸಾಮಾನ್ಯ ಹೆರಿಗೆ
  2. ನವಜಾತ ಶಿಶುವಿನ ಶುಶ್ರೂಷೆ
  3. ಕೃಷಿ ಉಪಕರಣಗಳಿಂದಾಗುವ ಅಪಘಾತಗಳು
  4. ನೀರಿನಲ್ಲಿ ಮುಳುಗುವುದು
  5. ನಾಯಿಕಡಿತ, ಹಾವು ಕಡಿತ
  6. ವಿದ್ಯತ್​​ ಆಘಾತಗಳು ಇತ್ಯಾದಿಗಳು..
  • ಸದಸ್ಯರಿಗೆ ಮರುಪಾವತಿಯಾಗುವ ಮೊತ್ತವೆಷ್ಟು?: ಒಂದು ವರ್ಷದಲ್ಲಿ ಒಬ್ಬ ಸದಸ್ಯ ಒಂದು ಬಾರಿ ಆಸ್ಪತ್ರೆಗೆ ದಾಖಲಾದರೆ ಆತ ರೂ. 1.25 ಗರಿಷ್ಠ ಮಿತಿಯಲ್ಲಿ ಚಿಕಿತ್ಸೆ ಪಡೆಯಬಹುದು. ಅದೇ ವರ್ಷದಲ್ಲಿ ಆ ವ್ಯಕ್ತಿ ಅನೇಕ ಬಾರಿ ಶಸ್ತ್ರ ಚಿಕಿತ್ಸೆ ಪಡೆಯುವ ಪ್ರಕರಣಗಳಲ್ಲಿ ಗರಿಷ್ಠ ಮಿತಿ 2 ಲಕ್ಷದವರೆಗೆ ಚಿಕಿತ್ಸೆ ಪಡೆಯಬಹುದು.
  • ಯಶಸ್ವಿನಿ ಯೋಜನೆಯ ಒಂದು ಸ್ವಯಂ ನಿಧಿ ಶಸ್ತ್ರಚಿಕಿತ್ಸಾ ಯೋಜನೆ, ವಿಮಾ ಯೋಜನೆಯಲ್ಲ.
  • ಯೋಜನೆಯ ಸೌಲಭ್ಯವನ್ನು ಎಲ್ಲಿ ಪಡೆಯಬಹುದು?: ಯಶಸ್ವಿನಿ ಯೋಜನೆಯ ಫಲಾನುಭವಿಗಳು ಯೋಜನೆಯ ಸೌಲಭ್ಯವನ್ನು ಮುಖ್ಯವಾಗಿ ಆಯಾ ಗ್ರಾಮೀಣ ಸಹಕಾರಿಗಳು ವಾಸಿಸುವ ಜಿಲ್ಲೆಯಲ್ಲಿ ಟ್ರಸ್ಟಿನಿಂದ ಅಂಗೀಕೃತವಾದ ಆಸ್ಪತ್ರೆಗಳು/ ನರ್ಸಿಂಗ್ ಹೋಂಗಳಲ್ಲಿ ಚಿಕಿತ್ಸೆಯನ್ನು ಪಡೆಯಬಹುದು.
  • ಕರ್ನಾಟಕದಲ್ಲಿ ಎಷ್ಟು ಆಸ್ಪತ್ರೆಗಳು ನೋಂದಣಿ ಆಗಿದೆ?: ಈವರೆಗೆ ರಾಜ್ಯದಲ್ಲಿ ಸುಮಾರು 496 ಆಸ್ಪತ್ರೆಗಳು ಅಂಗೀಕೃತ ಆಸ್ಪತ್ರೆಗಳಾಗಿ ಗುರುತಿಸಲ್ಪಟ್ಟಿವೆ.
  • ಅನುಷ್ಟಾನ ಸಂಸ್ಥೆ ಎಂದರೇನು?: ಅನುಷ್ಟಾನ ಸಂಸ್ಥೆಯು ಯೋಜನೆಯಲ್ಲಿ ಮ್ಯಾನೇಜ್ ಮೆಂಟ್ ಸಪೋರ್ಟ್ ಸರ್ವಿಸ್ ಪ್ರೊವೈಡರ್ (ಎಂಎಸ್​​ಪಿ) ಆಗಿ ಕಾರ್ಯನಿರ್ವಹಿಸುತ್ತದೆ ಹಾಗೂ ಯೋಜನೆಯ ಪ್ರಸಕ್ತ ಕಾರ್ಯನಿರ್ವಹಿಸುತ್ತದೆ ಜವಾಬ್ದಾರಿ ಹೊಂದಿರುತ್ತದೆ. ಅನುಷ್ಠಾನ ಸಂಸ್ಥೆಯ ಹೆಸರು 'ಎಂ.ಡಿ.ಇಂಡಿಯಾ ನೆಟ್ ವರ್ಕ್ಸ್ ಪ್ರೈ.ಲಿ. ಬೆಂಗಳೂರು'.
  • ಸೌಲಭ್ಯ ಪಡೆಯುವುದು ಹೇಗೆ?: ಯಶಸ್ವಿನಿ ಫಲಾನುಭವಿಗಳು ಶಸ್ತ್ರಚಿಕಿತ್ಸೆ ಬೇಕಾದಲ್ಲಿ ತಮ್ಮ ಯೂನಿಕ್ ಐಡಿ(ID) ಸಂಖ್ಯೆ ಹೊಂದಿರುವ ಸದಸ್ಯರ ಉಪಯೋಗಕ್ಕಾಗಿ ನೀಡಲಾದ ಮೂಲ ಗುರುತಿನ ಕಾರ್ಡ್ ಮತ್ತು ಮೂಲ ಹಣ ಪಾವತಿ ರಸೀದಿಯೊಂದಿಗೆ ಯೋಜನೆಯಡಿಯಲ್ಲಿ ಅಂಗೀಕೃತವಾದ ಆಸ್ಪತ್ರೆಗೆ ಭೇಟಿ ನೀಡಬೇಕು.

ಆಸ್ಪತ್ರೆಯ ವೈದ್ಯಾಧಿಕಾರಿಗಳು ಅಂತಹ ಫಲಾನುಭವಿಗಳ ಆರೋಗ್ಯ ತಪಾಸಣೆ ಮಾಡಿ, ಶಸ್ತ್ರಚಿಕಿತ್ಸೆ ಅವಶ್ಯಕಂಡು ಬಂದಲ್ಲಿ ಮತ್ತು ಸದರಿ ಶಸ್ತ್ರಚಿಕಿತ್ಸೆಯ ಯೋಜನೆಯಲ್ಲಿ ಒಳಗೊಂಡಿದ್ದಲ್ಲಿ, ವಿವರಗಳೊಂದಿಗೆ ಅನುಷ್ಠಾನ ಸಂಸ್ಥೆಗೆ ಇಂಟರ್ ನೆಟ್ ಮುಖಾಂತರ ಪ್ರಸ್ತಾಪ ಕಳಿಸುವರು. ಅನುಷ್ಟಾನ ಸಂಸ್ಥೆಯವರು ಪ್ರಸ್ತಾಪವನ್ನು ಪರಿಶೀಲಿಸಿ ಚಿಕಿತ್ಸಾ ಪೂರ್ವಾನುಮತಿ ನೀಡಿದ ನಂತರ ಆಸ್ಪತ್ರೆಯವರು ಶಸ್ತ್ರಚಿಕಿತ್ಸೆಯನ್ನು ನಿರ್ವಹಿಸುವರು.

ಯಶಸ್ವಿನಿ ಫಲಾನುಭವಿಗಳು ಆಸ್ಪತ್ರೆಗೆ ಸೇರಿದಾಗ ಶಸ್ತ್ರಚಿಕಿತ್ಸೆಗೆ ಹಣ ಪಾವತಿ ಮಾಡಬೇಕಾಗಿಲ್ಲ. ಈ ಯೋಜನೆಯಲ್ಲಿ ಗುರುತಿಸಿದ ಶಸ್ತ್ರಚಿಕಿತ್ಸೆಗಳು ಕೆಲವೊಂದು ಷರತ್ತುಗಳಿಗೊಳಪಟ್ಟ ನಗದು ರಹಿತವಾಗಿರುತ್ತದೆ. ಈ ಶಸ್ತ್ರಚಿಕಿತ್ಸೆಯ ವೆಚ್ಚವನ್ನು ಆಸ್ಪತ್ರೆಗೆ ಟ್ರಸ್ಟ್ ಭರಿಸುತ್ತದೆ.

  • ಶಸ್ತ್ರಚಿಕಿತ್ಸೆ ಪಡೆದ ಫಲಾನುಭವಿಗಳ ಬಿಲ್​​ ಪಾವತಿ ಹೇಗೆ ?: ಯಶಸ್ವಿನಿ ಫಲಾನುಭವಿಗಳು, ಆಸ್ಪತ್ರೆಗೆ ಬಿಲ್​​ನ್ನು ಪಾವತಿ ಮಾಡಬೇಕಾಗಿಲ್ಲ. ಆಸ್ಪತ್ರೆಯವರು ಚಿಕಿತ್ಸಾ ಪೂರ್ವಾನುಮತಿಯಲ್ಲಿ ಮಂಜೂರು ಮಾಡಿದ ಮೊತ್ತಕ್ಕೆ ಬಿಲ್​​ ಅನ್ನು ಅನುಷ್ಠಾನ ಸಂಸ್ಥೆಗೆ ಕಳಿಸುವರು. ಅನುಷ್ಠಾನ ಸಂಸ್ಥೆಯವರು ಬಿಲ್​​​ನ್ನು ಪರಿಶೀಲನೆ ಮಾಡಿ ಅವು ಯೋಜನೆಯ ಪ್ರಕಾರ ಇದ್ದಲ್ಲಿ ಅವುಗಳನ್ನು ಪಾಸ್​​ ಮಾಡಲು ಯಶಸ್ವಿನಿ ಟ್ರಸ್ಟಗೆ ಕಳಿಸುವರು. ಯಶಸ್ವಿನಿ ಟ್ರಸ್ಟ್ ಆಸ್ಪತ್ರೆಗಳ ಬಿಲ್​​ನ್ನು ಮಂಜೂರು ಮಾಡಿದ ನಂತರ ಬಿಲ್ಲಿನ ಮೊತ್ತವನ್ನು ಅನುಷ್ಠಾನ ಸಂಸ್ಥೆಯ ಮೂಲಕ ಆಸ್ಪತ್ರೆಗೆ ಪಾವತಿಸಲಾಗುವುದು.

ಇದನ್ನೂ ಓದಿ: ಗ್ರಾಮ ಒನ್ ಯೋಜನೆ ಯಶಸ್ವಿ ಅನುಷ್ಠಾನ; ಕೆಲ ಸೂಚನೆ ನೀಡಿದ ಸಿಎಂ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.