ETV Bharat / state

ಬೂದಿ ಮುಚ್ಚಿದ ಕೆಂಡದಂತಿದೆ ಬಿಜೆಪಿ ಭಿನ್ನಮತ; ಅತೃಪ್ತಿಗೆ ಬ್ರೇಕ್ ಹಾಕ್ತಾರಾ ಅಮಿತ್ ಶಾ..?

author img

By

Published : Jan 15, 2021, 6:00 PM IST

ಈ ಬಾರಿ ಸಿ.ಪಿ ಯೋಗೇಶ್ವರ್​ಗೆ ಸಂಪುಟದಲ್ಲಿ ಅವಕಾಶ ನೀಡಿದ್ದೇ ಹೆಚ್ಚಿನ ಸಮಸ್ಯೆ ಸೃಷ್ಟಿಸಿದೆ. ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ, ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಬಂಡೆದಿದ್ದಾರೆ. ಇದೊಂದು ವಿಚಾರದಲ್ಲಿ ಯಡಿಯೂರಪ್ಪ ನಿರ್ಧಾರವನ್ನು ಪ್ರಶ್ನಿಸುತ್ತಿದ್ದಾರೆ.

karnataka-govt-cabinet-expansion-news
ಅತೃಪ್ತಿಗೆ ಬ್ರೇಕ್ ಹಾಕ್ತಾರಾ ಅಮಿತ್ ಶಾ

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಪಕ್ಷದಲ್ಲಿ ಆಂತರಿಕ ಕಲಹ, ಅಸಮಾಧಾನಿತರ ಆಕ್ರೋಶ ಹೊಗೆಯಾಡುತ್ತಲೇ ಬಂದಿದೆ. ಗುಂಪುಗಾರಿಕೆ, ಮೂಲ, ವಲಸಿಗರ ತಿಕ್ಕಾಟ ನಡೆದುಕೊಂಡೇ ಬಂದಿದೆ. ಮೂರು ಬಾರಿ ಸಂಪುಟ ವಿಸ್ತರಣೆ ನಡೆದರೂ ಅತೃಪ್ತಿ ಮಾತ್ರ ತಣ್ಣಗಾಗಿಲ್ಲ.

2019 ರ ಜೂನ್ 26 ರಂದು ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕಾರ ಮಾಡಿದ ದಿನದಿಂದಲೂ ಪಕ್ಷದಲ್ಲಿ ಅತೃಪ್ತಿಯ ಹೊಗೆಯಾಡುತ್ತಲೇ ಬಂದಿದೆ. ಮೂರು ಜನರಿಗೆ ಡಿಸಿಎಂ ಸ್ಥಾನ ನೀಡಿದ್ದು ಮತ್ತು ಚುನಾವಣೆಯಲ್ಲಿ ಸೋತಿದ್ದ ಲಕ್ಷ್ಮಣ ಸವದಿಯನ್ನು ಡಿಸಿಎಂ ಮಾಡಿದ್ದು, ಸಚಿವ ಸ್ಥಾನ ವಂಚಿತ ಉಮೇಶ್ ಕತ್ತಿ, ಮುರುಗೇಶ್ ನಿರಾಣಿ ಸೇರಿದಂತೆ ಮತ್ತಿತರ ನಾಯಕರ ಆಕ್ರೋಶ ವ್ಯಕ್ತವಾಗಿತ್ತು.

ನಂತರ 2020ರ ಜನವರಿಯಲ್ಲಿ ಎರಡನೇ ಬಾರಿ ಸಂಪುಟ ವಿಸ್ತರಣೆ ಮಾಡಿ ವಲಸೆ 10 ಜನರಿಗೆ ಮಾತ್ರ ಸಂಪುಟದಲ್ಲಿ ಅವಕಾಶ ನೀಡಲಾಗಿತ್ತು. ಮೂಲ‌ ಬಿಜೆಪಿಯ ಯಾರನ್ನೂ ಎರಡನೇ ಸಂಪುಟ ವಿಸ್ತರಣೆಯಲ್ಲಿ ಪರಿಗಣಿಸಿರಲಿಲ್ಲ. ಇದು ಮೂಲ ಬಿಜೆಪಿಗರು ವಿಶೇಷವಾಗಿ ಉಮೇಶ್ ಕತ್ತಿ, ಬಸನಗೌಡ ಪಾಟೀಲ್ ಯತ್ನಾಳ್ ಸೇರಿ ಹಲವರ ಕಣ್ಣು ಕೆಂಪಾಗಿಸಿತ್ತು.

ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ನಾಯಕತ್ವದ ವಿರುದ್ಧವೇ ಆಯ್ದ 10-20 ಶಾಸಕರು ಪದೇ ಪದೇ ಅತೃಪ್ತಿ ಹೊರಹಾಕುತ್ತಲೇ ಬಂದಿದ್ದಾರೆ. ಆಗಾಗ ಪ್ರತ್ಯೇಕ ಸಭೆ ನಡೆಸಿ ಹೈಕಮಾಂಡ್ ವರೆಗೂ ಸಂದೇಶ ತಲುಪಿಸುವ ಕೆಲಸ ಮಾಡಿದ್ದಾರೆ.

ಆರಂಭದಲ್ಲಿ ಸಚಿವ ಜಗದೀಶ್ ಶೆಟ್ಟರ್ ನಿವಾಸದಲ್ಲಿ ಶಾಸಕರ ಸಭೆ ನಡೆಸಿ, 20 ಕ್ಕೂ ಹೆಚ್ಚು ಶಾಸಕರು ಭಾಗಿಯಾಗಿದ್ದರು. ಬಸನಗೌಡ ಪಾಟೀಲ್ ಯತ್ನಾಳ್, ರಾಜೂಗೌಡ, ಸಿ.ಪಿ ಯೋಗೀಶ್ವರ್, ಉಮೇಶ್ ಕತ್ತಿ, ಮುರುಗೇಶ್ ನಿರಾಣಿ, ಶಿವನಗೌಡ ನಾಯಕ್, ರುದ್ರಪ್ಪ ಲಮಾಣಿ, ಆಪರೇಷನ್ ಕಮಲದಲ್ಲಿ ಸಕ್ರಿಯವಾಗಿದ್ದ ಸಿಎಂ ಆಪ್ತ ಸಂತೋಷ್ ಕೂಡ ಭಾಗಿಯಾಗಿ ಗಮನ ಸೆಳೆದಿದ್ದರು. ವಿಷಯ ಹೈಕಮಾಂಡ್ ತಲುಪುತ್ತಿದ್ದಂತೆ ಸಿಎಂ ನಿವಾಸಕ್ಕೆ ದೌಡಾಯಿಸಿದ್ದ ಶೆಟ್ಟರ್ ಸಭೆ ನಡೆಸಿಲ್ಲ, ಭೋಜನ ಮಾತ್ರ ನಡೆಸಿದ್ದೇವೆ ಎಂದು ಸಮಜಾಯಿಷಿ ನೀಡಿದ್ದರು.

ನಂತರ ಲಾಕ್ ಡೌನ್ ಸಮಯದಲ್ಲೇ ಅತೃಪ್ತರ ಸಭೆ ನಡೆದಿತ್ತು, ಶಾಸಕರಾಗಿದ್ದ ಉಮೇಶ್ ಕತ್ತಿ ಅಪಾರ್ಟ್ ಮೆಂಟ್ ನಲ್ಲಿ ಸಭೆ ನಡೆದಿತ್ತು. ಮುರುಗೇಶ್ ನಿರಾಣಿ, ರಾಮದಾಸ್, ಬಸನಗೌಡ ಪಾಟೀಲ್ ಯತ್ನಾಳ್, ಸಿದ್ದು ಸವದಿ ಸೇರಿ 10ಕ್ಕೂ ಹೆಚ್ಚು ಶಾಸಕರು ಭಾಗಿಯಾಗಿದ್ದರು. ಇದು ರಾಜ್ಯ ಬಿಜೆಪಿ ಪಾಳಯದಲ್ಲಿ ಸಂಚಲನ ಮೂಡಿಸಿತ್ತು.

ನಂತರ ಶಾಸಕರ ಭವನದಲ್ಲಿ ಮತ್ತೊಮ್ಮೆ ಸಭೆ ನಡೆಸಲಾಯಿತು. ಸತತವಾಗಿ ಎರಡು ದಿನ ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ, ರಾಜೂಗೌಡ, ನಿರಾಣಿ, ರಾಜಕುಮಾರ್ ಪಾಟೀಲ್ ತೆಲ್ಕೂರ, ಹಾಲಪ್ಪ ಆಚಾರ್, ಶಿವನಗೌಡ ಪಾಟೀಲ್, ಗಂಗಾವತಿ ಪರಣ್ಣ ಮುನವಳ್ಳಿ, ದತ್ತಾತ್ರೇಯ ಪಾಟೀಲ್ ರೇವೂರ, ಬಸವರಾಜ ಮತ್ತಿಮೂಡ, ಆನಂದ ಮಾಮನಿ ಸೇರಿದಂತೆ ಹಲವು ಶಾಸಕರು ಸಭೆ ನಡೆಸಿ ಸಿಎಂ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಮೂಲ‌ ಬಿಜೆಪಿಗರ ಕಡೆಗಣಿಸಿ ವಲಸಿಗರಿಗೆ ಮಾತ್ರ ಮಣೆ ಹಾಕಲಾಗುತ್ತಿದೆ ಎಂದು ಕಿಡಿಕಾರಿದ್ದರು.

ಇದಾದ ನಂತರ ಯಡಿಯೂರಪ್ಪ ಮತ್ತು ನಳಿನ್ ಕುಮಾರ್ ಕಟೀಲ್ ಅತೃಪ್ತರೊಂದಿಗೆ ಮಾತುಕತೆ ನಡೆಸಿದ್ದರು. ಸಂಪುಟ ವಿಸ್ತರಣೆ ವೇಳೆ ಅವಕಾಶ ಕಲ್ಪಿಸುವ ಭರವಸೆ ನೀಡಿ ಪರಿಸ್ಥಿತಿ ತಿಳಿಗೊಳಿಸಿದ್ದರು.

ಅತೃಪ್ತರಿಗೆ ನಿಗಮ-ಮಂಡಳಿ ಗಿಫ್ಟ್:

ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಹಲವರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡುವ ಮೂಲಕ ಅಸಮಾಧಾನ ಶಮನ, ಭಿನ್ನಮತಕ್ಕೆ ಬ್ರೇಕ್ ಹಾಕುವ ಕೆಲಸ ಮಾಡುವಲ್ಲಿ ಬಹುತೇಕ ಸಿಎಂ ಸಫಲರಾಗಿದ್ದಾರೆ. ರಾಜೂಗೌಡ, ಶಿವನಗೌಡ ನಾಯಕ್, ಸಿದ್ದು‌ ಸವದಿ, ಪರಣ್ಣ ಮುನವಳ್ಳಿ, ರಾಜಕುಮಾರ್ ಪಾಟೀಲ್ ತೇಲ್ಕೂರ್, ದತ್ತಾತ್ರೇಯ ಪಾಟೀಲ್ ರೇವೂರ ಅವರನ್ನು ನಿಗಮ ಮಂಡಳಿಗೆ ನೇಮಕ ಮಾಡಿ ಬಂಡಾಯ ಶಮನ ಮಾಡುವಲ್ಲಿ ಬಿಎಸ್​​ವೈ ಸಫಲರಾಗಿದ್ದಾರೆ.

ಸಂಪುಟ ವಿಸ್ತರಣೆ ಎನ್ನುವ ಜೇನುಗೂಡಿಗೆ ಕೈಹಾಕುವ ಮುನ್ನ ಅಸಮಾಧಾ‌ನಿತರ ಸಂಖ್ಯೆಯನ್ನು ನಿಗಮ ಮಂಡಳಿ ಮೂಲಕ ತಗ್ಗಿಸಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪ ಬಹಳ ಎಚ್ಚರಿಕೆಯಿಂದ ಮೂರನೇ ಬಾರಿಗೆ ಸಚಿವ ಸಂಪುಟ ವಿಸ್ತರಣೆ ಮಾಡಿದ್ದಾರೆ. ಇಬ್ಬರು ವಲಸಿಗರು, ಐವರು ಮೂಲ ಬಿಜೆಪಿಗರಿಗೆ ಸಂಪುಟದಲ್ಲಿ ಹೊಸದಾಗಿ ಅವಕಾಶ ನೀಡಿದ್ದಾರೆ.

ಅಸಮಾಧಾನಿತರ ತಂಡದ‌‌ ಪ್ರಮುಖ ನಾಯಕರಾದ ಉಮೇಶ್ ಕತ್ತಿ, ಮುರುಗೇಶ್ ನಿರಾಣಿ, ಸಿ.ಪಿ ಯೋಗೇಶ್ವರ್​​ಗೆ ಅವಕಾಶ ಕಲ್ಪಿಸುವ ಮೂಲಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ರನ್ನು ಏಕಾಂಗಿಯಾಗಿಸಲಾಗಿದೆ. ಹಾಗಾಗಿ ಈ ಹಿಂದೆ ನಡೆದ ರೀತಿಯ ಅಸಮಾಧಾನಿತರ ಸಭೆ ಈಗ ನಡೆಯುವುದು ಅನುಮಾನವಾಗಿದೆ.

ಸೈನಿಕನಿಂದ ಸಮಸ್ಯೆ:

ಈ ಬಾರಿ ಸಿ.ಪಿ ಯೋಗೇಶ್ವರ್​ಗೆ ಸಂಪುಟದಲ್ಲಿ ಅವಕಾಶ ನೀಡಿದ್ದೇ ಹೆಚ್ಚಿನ ಸಮಸ್ಯೆ ಸೃಷ್ಟಿಸಿದೆ. ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ, ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಬಂಡೆದಿದ್ದಾರೆ. ಇದೊಂದು ವಿಚಾರದಲ್ಲಿ ಯಡಿಯೂರಪ್ಪ ನಿರ್ಧಾರವನ್ನು ಪ್ರಶ್ನಿಸುತ್ತಿದ್ದಾರೆ. ದೂರು ನೀಡಲು ರೇಣುಕಾಚಾರ್ಯ ದೆಹಲಿಗೆ ತೆರಳಿದ್ದಾರೆ. ಪ್ರತಿ‌ದಿನ ಸುದ್ದಿಗೋಷ್ಠಿ ನಡೆಸಿ ಸಿಎಂ ಯಡಿಯೂರಪ್ಪ ವಿರುದ್ಧ ಸತತವಾಗಿ ಟೀಕೆಗಳನ್ನು ಮಾಡುತ್ತಿದ್ದಾರೆ.

ಸಿಡಿ ಬಾಂಬ್:

ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ರಾಜ್ಯದಲ್ಲಿ ಸಿಡಿ ವಿಷಯ ತೀವ್ರ ಚರ್ಚೆಗೆ ಗ್ರಾಸವಾಗಿದೆ. ‌ಬಂಡಾಯ ಶಾಸಕರಾಗಿರುವ ಯತ್ನಾಳ್ ಇದೀಗ ಯಡಿಯೂರಪ್ಪ ಅವರ ಸಿಡಿ ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡಿ ಕೆಲವರು ಮಂತ್ರಿಗಳಾಗಿದ್ದಾರೆ‌ ಎಂದು ಆರೋಪಿಸಿದ್ದಾರೆ. ಪ್ರತಿ ದಿನವೂ ಸಿಡಿ ಹೇಳಿಕೆ ನೀಡಿ ಸಿಎಂ ಹಾಗು ಬಿಜೆಪಿಯನ್ನು ಮುಜುಗರಕ್ಕೆ ಸಿಲುಕಿಸುತ್ತಿದ್ದಾರೆ.

ದೆಹಲಿಯತ್ತ ಅತೃಪ್ತಿ:

ಸಿ.ಪಿ ಯೋಗೇಶ್ವರ್​​ಗೆ ಸಚಿವ ಸ್ಥಾನ ನೀಡಿದ್ದಕ್ಕೆ ಅಸಮಾಧಾನಗೊಂಡಿರುವ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಹೈಕಮಾಂಡ್ ಬಾಗಿಲು ತಟ್ಟಿದ್ದಾರೆ. ದೆಹಲಿಗೆ ತೆರಳಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್​​ರನ್ನು ಭೇಟಿ ಮಾಡಿ ಯೋಗೇಶ್ವರ್ ವಿರುದ್ಧ ಇರುವ ಆರೋಪಗಳ ಕುರಿತು ದಾಖಲೆ ಬಿಡುಗಡೆ ನೀಡಿ ದೂರು ಸಲ್ಲಿಸಿದ್ದಾರೆ.

ಬಲ ಕಳೆದುಕೊಂಡ ಬಂಡಾಯ:

ಉಮೇಶ್ ಕತ್ತಿ, ಮುರುಗೇಶ್ ನಿರಾಣಿಗೆ ಸಚಿವ ಸ್ಥಾನ, ರಾಜೂಗೌಡ, ಶಿವನಗೌಡ ನಾಯಕ್, ಸಿದ್ದು‌ ಸವದಿ, ಪರಣ್ಣ ಮುನವಳ್ಳಿ, ರಾಜಕುಮಾರ್ ಪಾಟೀಲ್ ತೇಲ್ಕೂರ್, ದತ್ತಾತ್ರೇಯ ಪಾಟೀಲ್ ರೇವೂರ ಅವರಿಗೆ ನಿಗಮ ಮಂಡಳಿ ಸ್ಥಾನ ಕೊಟ್ಟಿದ್ದರಿಂದ ಅತೃಪ್ತರ ಬಣ ಬಲ ಕಳೆದುಕೊಂಡಿದೆ. ಮೂಲ ಬಿಜೆಪಿ ಪಾಳಯದಲ್ಲಿ ಬಸನಗೌಡ ಪಾಟೀಲ್ ಯತ್ನಾಳ್, ಎಂ.ಪಿ ರೇಣುಕಾಚಾರ್ಯ, ತಿಪ್ಪಾರೆಡ್ಡಿ, ಸತೀಶ್ ರೆಡ್ಡಿ, ರಾಮದಾಸ್, ಸುನೀಲ್ ಕುಮಾರ್, ಅಭಯ್ ಪಾಟೀಲ್, ಅರವಿಂದ ಬೆಲ್ಲದ್, ವಲಸಿಗರಲ್ಲಿ ಹೆಚ್. ವಿಶ್ವನಾಥ್ ಮಾತ್ರ ಬಂಡೆದ್ದಿದ್ದಾರೆ.

ಭಿನ್ನಮತೀಯರ ಮುಂದಿನ ಹಂತ:

ಸಂಪುಟ ವಿಸ್ತರಣೆ ನಂತರ ಬಿಜೆಪಿಯಲ್ಲಿ ಭಿನ್ನಮತೀಯ ಚಟುವಟಿಕೆ ಆರಂಭಗೊಂಡಿದ್ದು, ದೆಹಲಿ ಅಂಗಳಕ್ಕೂ ತಲುಪಿದೆ. ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ದೂರನ್ನು ಹೊತ್ತು ದೆಹಲಿಗೆ ತೆರಳಿದ್ದರೆ. ಯತ್ನಾಳ್, ಯಡಿಯೂರಪ್ಪ ಸಿಡಿ ವಿಷಯ ಹಿಡಿದು ಪ್ರತಿ ದಿನ ಹೇಳೀಕೆ ನೀಡುತ್ತಿದ್ದಾರೆ. ಹೆಚ್.ವಿಶ್ವನಾಥ್ ಪ್ರತಿ ದಿನ ಸುದ್ದಿಗೋಷ್ಠಿ ನಡೆಸಿ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಉಳಿದ ಅತೃಪ್ತರು ಕೇವಲ ಮಾಧ್ಯಮಗಳಿಗೆ ಹೇಳಿಕೆ ನೀಡಿ ಅಸಮಾಧಾನ ಹೊರಹಾಕಿ ಕೈತೊಳೆದುಕೊಂಡಿದ್ದಾರೆ.

ಇದರಲ್ಲಿ ರೇಣುಕಾಚಾರ್ಯ ಮನವೊಲಿಕೆ ಸಾಧ್ಯವಿದ್ದು, ಕೇವಲ ಯತ್ನಾಳ್ ಮತ್ತು ವಿಶ್ವನಾಥ್ ಬಿಜೆಪಿ ಪಾಲಿಗೆ ಬಿಸಿ ತುಪ್ಪವಾಗಿದ್ದಾರೆ. ಈ ಇಬ್ಬರು ನಾಯಕರು ನಿರಂತರವಾಗಿ ಟೀಕೆ ಮಾಡುತ್ತಾ ಪಕ್ಷಕ್ಕೆ ಮತ್ತಷ್ಟು ಮುಜುಗರವನ್ನುಂಟು ಮಾಡಬಹುದು.

ಅಮಿತ್‌ಶಾ ಭೇಟಿ:

ಇನ್ನು ನಾಳೆ ಅಮಿತ್ ಶಾ ರಾಜ್ಯಕ್ಕೆ ಆಗಮಿಸಲಿದ್ದಾರೆ. ಎರಡು ದಿನಗಳ ರಾಜ್ಯ ಪ್ರವಾಸದ ವೇಳೆ ಬೆಂಗಳೂರಿನಲ್ಲೇ ಒಂದು ದಿನ ವಾಸ್ತವ್ಯ ಹೂಡಲಿದ್ದು, ಮುಖಂಡರೊಂದಿಗೆ ಸಭೆ ನಡೆಸಲಿದ್ದಾರೆ. ಈ ವೇಳೆ ಅತೃಪ್ತರೊಂದಿಗೂ ಸಭೆ ನಡೆಸಿ ಅಹವಾಲು ಆಲಿಸುವ ಸಾಧ್ಯತೆ ಇದೆ. ಇಲ್ಲವೇ ಅತೃಪ್ತರೇ ಸಮಯಾವಕಾಶ ಕೋರಿ ಅಮಿತ್ ಶಾ ಭೇಟಿ ಮಾಡಿ ಅಸಮಾಧಾನದ ಕುರಿತು ಚರ್ಚೆ ನಡೆಸುವ ಸಾಧ್ಯತೆ ಇದೆ. ಆದರೆ ಅಮಿತ್ ಶಾ ನಿರ್ಧಾರದ ಮೇಲೆ ಎಲ್ಲವೂ ನಿರ್ಧಾರವಾಗಲಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.