ETV Bharat / state

ಇಂದು ಹೈಕೋರ್ಟ್​​ನಲ್ಲಿ ನಿರ್ಧಾರವಾಗುತ್ತಾ ಪಿಯು ಪುನರಾವರ್ತಿತ ವಿದ್ಯಾರ್ಥಿಗಳ ಭವಿಷ್ಯ? - ಜೂನ್ 15ರ ಹೈಕೋರ್ಟ್ ಸೂಚನೆ

ಪ್ರಥಮ ಪಿಯು ಪರೀಕ್ಷೆಯ ಅಂಕಗಳನ್ನು ಪರಿಗಣಿಸಿ ಪುನರಾವರ್ತಿತ ವಿದ್ಯಾರ್ಥಿಗಳನ್ನೂ ಉತ್ತೀರ್ಣಗೊಳಿಸುವ ಕುರಿತು ರಾಜ್ಯ ಸರ್ಕಾರ ತನ್ನ ನಿಲುವು ತಿಳಿಸಬೇಕು ಎಂದು ಸೂಚಿಸಿ ವಿಚಾರಣೆಯನ್ನು ಹೈಕೋರ್ಟ್​​​​ ಜೂನ್ 17ಕ್ಕೆ ಮುಂದೂಡಿತ್ತು.

karnataka-govt-gives-information-to-high-court-on-pu-exam-repeaters
ಇಂದು ಹೈಕೋರ್ಟ್​​ನಲ್ಲಿ ನಿರ್ಧಾರವಾಗುತ್ತಾ ಪಿಯು ಪುನರಾವರ್ತಿತ ವಿದ್ಯಾರ್ಥಿಗಳ ಭವಿಷ್ಯ ..?
author img

By

Published : Jun 17, 2021, 12:38 PM IST

ಬೆಂಗಳೂರು: ದ್ವಿತೀಯ ಪಿಯುಸಿ ರಿಪೀಟರ್ಸ್​​ಗೆ ಪರೀಕ್ಷೆ ನಡೆಸುವ ವಿಚಾರವಾಗಿ ವಿದ್ಯಾರ್ಥಿಗಳನ್ನು ಸಹ ಪರೀಕ್ಷೆ ಇಲ್ಲದೆ ಪಾಸ್ ಮಾಡಲು ಸರ್ಕಾರವನ್ನು ಆಗ್ರಹಿಸಲಾಗುತ್ತಿದೆ. ಈ ಕುರಿತು ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ(PIL) ಸಲ್ಲಿಸಲಾಗಿದ್ದು, ಕೆಲ ದಿನಗಳ ಹಿಂದೆ ವಿಚಾರಣೆ ನಡೆಸಿದ್ದ ಹೈಕೋರ್ಟ್ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ನೀಡದಂತೆ ತಡೆ ನೀಡಿತ್ತು.

ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಇವತ್ತು ಕೋರ್ಟ್​​ಗೆ ಮಾಹಿತಿ ನೀಡಲಿದೆ. ಅಂಕ ನೀಡುವ ಸಲುವಾಗಿ ಹಾಗೂ ರಿಪೀಟರ್ಸ್​ಗೆ ಪರೀಕ್ಷೆ ವಿಚಾರವಾಗಿ 12 ಜನರ ಸಮಿತಿ ರಚನೆ ಮಾಡಲಾಗಿದೆ ಹಾಗೂ ಸಮಿತಿಯ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಿದೆ. ಈ ವಾರದ ಒಳಗೆ 12 ಜನರ ಸಮಿತಿ ವರದಿ ನೀಡಲಿದೆ ಎಂದು ಮಾಹಿತಿ ದೊರೆತಿದೆ.

ಈ ಬಗ್ಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಇಂದು ನ್ಯಾ ಬಿ.ವಿ.ನಾಗರತ್ನ ಅವರ ನೇತೃತ್ವದ ವಿಭಾಗೀಯ ಪೀಠಕ್ಕೆ ಮಾಹಿತಿ ನೀಡಲಿದ್ದಾರೆ. ಹೈಕೋರ್ಟ್ ಯಾವ ನಿರ್ಧಾರಕ್ಕೆ ಬರಲಿದೆ ಎನ್ನುವುದರ ಮೇಲೆ ಪಿಯು ಪುನರಾವರ್ತಿತ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

ಹೈಕೋರ್ಟ್ ಸೂಚನೆಗೆ ಸ್ಪಷ್ಟನೆ ನೀಡಿದ್ದ ಸಚಿವ ಸುರೇಶ್ ಕುಮಾರ್

ಪ್ರಸಕ್ತ ಸಾಲಿನ ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ ಪಾಸ್​ ಮಾಡುವ ಸರ್ಕಾರದ ಆದೇಶ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿರುವ ಹೈಕೋರ್ಟ್, ಪುನರಾವರ್ತಿತ ವಿದ್ಯಾರ್ಥಿಗಳನ್ನು ತೇರ್ಗಡೆಗೊಳಿಸುವ ಕುರಿತು ಪರಿಶೀಲಿಸಿ ನಿರ್ಧಾರ ತಿಳಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು.

ಈ ಸಂಬಂಧ ಪ್ರತಿಕ್ರಿಯಿಸಿದ್ದ ಸಚಿವ ಸುರೇಶ್ ಕುಮಾರ್, ದ್ವಿತೀಯ ಪಿಯುಸಿ ವಿಚಾರ ಕುರಿತು ಇಂದು ಹೈಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ, ಪದವಿ ಪೂರ್ವ ಶಿಕ್ಷಣ ಮಂಡಳಿ ಆದೇಶವನ್ನು ಅಧ್ಯಯನ ಮಾಡಿ, ಅಗತ್ಯ ಪರಾಮರ್ಶೆ ನಡೆಸಿ ತನ್ನ ನಿಲುವನ್ನು ಕೋರ್ಟ್​ಗೆ ತಿಳಿಸುವುದಾಗಿ ಸ್ಪಷ್ಟಪಡಿಸಿದ್ದರು.

ಜೂನ್ 15ರ ಹೈಕೋರ್ಟ್ ಸೂಚನೆ

ಪ್ರಸಕ್ತ ಸಾಲಿನ ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ ಪಾಸು ಮಾಡುವ ಸರ್ಕಾರದ ಆದೇಶ ಪ್ರಶ್ನಿಸಿ ಜೂನ್ 8ರಂದು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ಪುನರಾವರ್ತಿತ ವಿದ್ಯಾರ್ಥಿಗಳನ್ನು ತೇರ್ಗಡೆಗೊಳಿಸುವ ಕುರಿತು ಪರಿಶೀಲಿಸಿ ನಿರ್ಧಾರ ತಿಳಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು.

ಪರೀಕ್ಷೆ ನಡೆಸದೇ ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿರುವ ನೋಟಿಫಿಕೇಷನ್ ರದ್ದು ಕೋರಿ ನಗರದ ಜ್ಞಾನಮಂದಿರ ಎಜುಕೇಷನ್ ಟ್ರಸ್ಟ್ ನ ಎಸ್.ವಿ.ಸಿಂಗ್ರೇಗೌಡ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ ಈ ನಿರ್ದೇಶನ ನೀಡಿತ್ತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಆರ್.ಪಿ ಸೋಮಶೇಖರಯ್ಯ ವಾದ ಮಂಡಿಸಿ, ಪ್ರಸಕ್ತ ಸಾಲಿನ ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ ಉತ್ತೀರ್ಣಗೊಳಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಪ್ರಥಮ ಪಿಯು ಪರೀಕ್ಷೆಯ ಅಂಕಗಳನ್ನು ಪರಿಗಣಿಸಿ ದ್ವಿತೀಯ ಪಿಯು ಪಾಸು ಮಾಡಲು ಮುಂದಾಗಿದೆ. ಇದೇ ಸೌಲಭ್ಯವನ್ನು ಪುನರಾವರ್ತಿತ ವಿದ್ಯಾರ್ಥಿಗಳಿಗೂ ವಿಸ್ತರಿಸಬೇಕು, ಇಲ್ಲದಿದ್ದರೆ ತಾರತಮ್ಯ ಮಾಡಿದಂತಾಗುತ್ತದೆ ಎಂದಿದ್ದರು.

ಇದನ್ನೂ ಓದಿ: 12th ವಿದ್ಯಾರ್ಥಿಗಳ ಮೌಲ್ಯಮಾಪನಕ್ಕೆ CBSE ಮಾನದಂಡ ಪ್ರಕಟ: ಜುಲೈ 31ರೊಳಗೆ ರಿಸಲ್ಟ್​

ವಾದ ಪರಿಗಣಿಸಿದ ಪೀಠ, ಪ್ರಥಮ ಪಿಯು ಪರೀಕ್ಷೆಯ ಅಂಕಗಳನ್ನು ಪರಿಗಣಿಸಿ ಪುನರಾವರ್ತಿತ ವಿದ್ಯಾರ್ಥಿಗಳನ್ನೂ ಉತ್ತೀರ್ಣಗೊಳಿಸುವ ಕುರಿತು ರಾಜ್ಯ ಸರ್ಕಾರ ತನ್ನ ನಿಲುವು ತಿಳಿಸಬೇಕು ಎಂದು ಸೂಚಿಸಿ ವಿಚಾರಣೆಯನ್ನು ಜೂನ್ 17ಕ್ಕೆ ಮುಂದೂಡಿತ್ತು.

ಅರ್ಜಿದಾರರ ಕೋರಿಕೆ:

ಪ್ರಸ್ತಕ ಸಾಲಿನಲ್ಲಿ 7 ಲಕ್ಷ ದ್ವಿತೀಯ ಪಿಯು ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಳ್ಳಬೇಕಿತ್ತು. ಆದರೆ, ಕೋವಿಡ್ ಹಿನ್ನೆಲೆಯಲ್ಲಿ ಪರೀಕ್ಷೆ ನಡೆಸದೇ ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಪಾಸು ಮಾಡಲು ಸರ್ಕಾರ ನಿರ್ಧರಿಸಿದ್ದು. ಪ್ರಥಮ ಪಿಯು ಪರೀಕ್ಷೆ ಅಂಕ ಪರಿಗಣಿಸಿ ಉತ್ತೀರ್ಣ ಮಾಡುವ ಸಂಬಂಧ ಜೂನ್ 3ರಂದು ರಾಜ್ಯ ಸರ್ಕಾರ ನೋಟಿಫಿಕೇಷನ್ ಹೊರಡಿಸಿದೆ.

ಆದರೆ, ಪುನರಾವರ್ತಿತ ಮತ್ತು ಖಾಸಗಿ ಅಭ್ಯರ್ಥಿಗಳಿಗೆ ಈ ಅನುಕೂಲ ಕಲ್ಪಿಸಿಲ್ಲ. ಇದು ತಾರತಮ್ಯ ನೀತಿಯಾಗಿದೆ. ರಾಜ್ಯದಲ್ಲಿ 95 ಸಾವಿರ ಪುನರಾವರ್ತಿತ ವಿದ್ಯಾರ್ಥಿಗಳಿದ್ದಾರೆ. ಅವರನ್ನೂ ಪರೀಕ್ಷೆ ಇಲ್ಲದೇ ಉತ್ತೀರ್ಣ ಮಾಡಬೇಕು. ಇಲ್ಲದಿದ್ದರೆ ಸರ್ಕಾರದ ನೋಟಿಫಿಕೇಷನ್ ರದ್ದುಪಡಿಸಬೇಕು ಎಂದು ಅರ್ಜಿದಾರರು ಕೋರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.