ಕರ್ನಾಟಕ ಸರ್ಕಾರದ ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ ಗ್ರಾಮೀಣ ಇಂಧನ ಸಹಾಯಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ತಾತ್ಕಾಲಿಕ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ನಡೆಯಲಿದೆ. ಡಿಪ್ಲೊಮಾ ಪದವೀಧರರು ಅರ್ಜಿ ಸಲ್ಲಿಸಬಹುದು.
ಬೆಂಗಳೂರಿನಲ್ಲಿ ಹುದ್ದೆ ಕಾರ್ಯ ನಿರ್ವಹಣೆ ನಡೆಯಲಿದೆ. ಅಭ್ಯರ್ಥಿಗಳು ಕನ್ನಡ ಮತ್ತು ಆಂಗ್ಲ ಭಾಷಣೆಯ ತರಗತಿಗಳನ್ನು ತೆಗೆದುಕೊಳ್ಳುವ ಜ್ಞಾನ ಹೊಂದಿರಬೇಕು. ಕೆಲವೊಮ್ಮೆ ಭಾರತ ಮತ್ತು ಕರ್ನಾಟಕದಾದ್ಯಂತ ಪ್ರಯಾಣಿಸಬೇಕಾಗಿರುತ್ತದೆ ಎಂದು ತಿಳಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 20 ಸಾವಿರ ರೂ ವೇತನ ನಿಗದಿ ಮಾಡಲಾಗಿದೆ. ಒಂದು ವರ್ಷದ ಗುತ್ತಿಗೆ ಅವಧಿಗೆ ನೇಮಕಾತಿ ನಡೆಯಲಿದೆ.
ಆನ್ಲೈನ್ ಮತ್ತು ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಕೆ ಮಾಡಬಹುದು. ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆಯ ಅಧಿಕೃತ ವೆಬ್ಸೈಟ್ನಲ್ಲಿ ನಿಗದಿತ ಅರ್ಜಿ ನಮೂನೆ ಲಭ್ಯವಿದೆ. ಅರ್ಜಿ ಭರ್ತಿ ಮಾಡಿ, ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಅಥವಾ ಸ್ಪೀಡ್ ಪೋಸ್ಟ್/ ಕೊರಿಯರ್ ಮೂಲಕ ಜುಲೈ 3ಕ್ಕೆ ಮುನ್ನ ಸಲ್ಲಿಸಬೇಕಿದೆ. ಇ-ಮೇಲ್ ವಿಳಾಸ: mgiredblr@gmail.com
ಅಂಚೆ ಅರ್ಜಿ ಸಲ್ಲಿಕೆಗೆ ಪೋಸ್ಟಲ್ ವಿಳಾಸ: ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ, ಶ್ರೀರಾಂಪುರ ಕ್ರಾಸ್, ಜಕ್ಕೂರು, ಬೆಂಗಳೂರು-560064.
ಅರ್ಜಿ ಸಲ್ಲಿಕೆ ಜೂನ್ 26ರಿಂದ ಆರಂಭವಾಗಿದೆ. ಜುಲೈ 3 ಕಡೆಯ ದಿನಾಂಕ. ಲಿಖಿತ ಮತ್ತು ಸಂದರ್ಶನದ ಮೂಲಕ ಆಯ್ಕೆ ನಡೆಯಲಿದೆ. ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು ಅಧಿಕೃತ ಜಾಲತಾಣ mgired.kar.nic.inಗೆ ಭೇಟಿ ನೀಡಿ.
ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ತೆಯ ಕುರಿತು..: ಬೆಂಗಳೂರಿನ ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆಯು ಭಾರತ ಸರಕಾರದ ನವ್ಯ ಮತ್ತು ನವೀಕರಿಸಬಹುದಾದ ಇಂಧನ ಮಂತ್ರಾಲಯದ ನೆರವಿನೊಂದಿಗೆ ಕರ್ನಾಟಕ ಸರ್ಕಾರದ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವತಿಯಿಂದ 2000ನೇ ಇಸುವಿಯಲ್ಲಿ ಸ್ಥಾಪಿತವಾದ ಸಂಸ್ಥೆ ಇದಾಗಿದೆ.
ಇದನ್ನೂ ಓದಿ: ಬೆಂಗಳೂರಿನ ಟಾಟಾ ಸಂಸ್ಥೆಯಲ್ಲಿ ಲೈಬ್ರರಿ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ; 55 ಸಾವಿರ ರೂವರೆಗೆ ವೇತನ