ಬೆಂಗಳೂರು: ರಾಜ್ಯದಲ್ಲಿ ಪ್ರತಿ ಜಿಲ್ಲೆಗೆ ಕನಿಷ್ಠ 2 ರಂತೆ ಒಟ್ಟು 75 ಸರ್ಕಾರಿ ಶಾಲೆಗಳನ್ನು ಆಯ್ಕೆ ಮಾಡಿ, ಅವುಗಳನ್ನು ನೇತಾಜಿ ಅಮೃತ ಶಾಲೆಗಳೆಂದು ಘೋಷಿಸಿ ಸರ್ಕಾರದಿಂದ ಇಂದು ಆದೇಶ ಹೊರಡಿಸಲಾಗಿದೆ.
ಜನವರಿ 23ರಂದು ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಾಜ್ಯದಲ್ಲಿ ಪ್ರತಿ ಜಿಲ್ಲೆಗೆ ಕನಿಷ್ಠ 2 ರಂತೆ 75 ಶಾಲೆಗಳಲ್ಲಿ ಎನ್.ಸಿ.ಸಿ ಘಟಕಗಳನ್ನು ಸ್ಥಾಪಿಸಿ, ಈ ಶಾಲೆಗಳನ್ನು ನೇತಾಜಿ ಅಮೃತ ಶಾಲೆಗಳೆಂದು ಘೋಷಿಸಲು ತೀರ್ಮಾನಿಸಲಾಗಿತ್ತು. ಅದರಂತೆ ಈ ಆದೇಶ ಹೊರಡಿಸಲಾಗಿದೆ.
ನೇತಾಜಿ ಅಮೃತ ಶಾಲೆಗಳೆಂದು ಘೋಷಿಸಲ್ಪಡುವ ಪ್ರತಿ ಶಾಲೆಯಿಂದ 100 ವಿದ್ಯಾರ್ಥಿಗಳಂತೆ, ಒಟ್ಟು 7,500 ವಿದ್ಯಾರ್ಥಿಗಳಿಗೆ ಎನ್.ಸಿ.ಸಿ. ತರಬೇತಿಯನ್ನು ನೀಡಲು ನಿರ್ಧರಿಸಲಾಗಿದೆ. ಒಬ್ಬ ವಿದ್ಯಾರ್ಥಿಗೆ ತಗಲುವ ವೆಚ್ಚ 12,000 ರೂ. ನಂತೆ ಒಟ್ಟು 9 ಕೋಟಿ ರೂ. ಅನುದಾನ ಮಂಜೂರು ಮಾಡಿದೆ.
ಜಾಹೀರಾತು : ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ