ಬೆಂಗಳೂರು : ಐದು ರಾಜ್ಯಗಳಲ್ಲಿ ನಡೆಯುವ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಳ್ಳುವ ರಾಜ್ಯದ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಕೋವಿಡ್ ಲಸಿಕೆಯ ಬೂಸ್ಟರ್ ಡೋಸ್ ನೀಡಲು ಆದೇಶ ಹೊರಡಿಸಲಾಗಿದೆ.
ಗೋವಾ, ಮಣಿಪುರ, ಪಂಜಾಬ್, ಉತ್ತರಖಾಂಡ್ ಮತ್ತು ಉತ್ತರಪ್ರದೇಶ ರಾಜ್ಯಗಳಲ್ಲಿ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ಕರ್ನಾಟಕದಿಂದ ನಿಯೋಜನೆಗೊಂಡಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿ ಕೋವಿಡ್ 2ನೇ ಡೋಸ್ ಲಸಿಕೆ ಪಡೆದು 39 ವಾರಗಳು ಪೂರ್ಣಗೊಳ್ಳದಿದ್ದರೂ ಮುಂಚೂಣಿ ಕಾರ್ಯಕರ್ತರೆಂದು ಪರಿಗಣಿಸಲಾಗುತ್ತದೆ. ಹೀಗಾಗಿ, ಕೊರೊನಾ ಮುನ್ನಚ್ಚರಿಕೆ ಡೋಸ್ ಅನ್ನು ನೀಡಬಹುದೆಂದು ಕೇಂದ್ರ ಸರ್ಕಾರ ಪತ್ರದ ಮೂಲಕ ತಿಳಿಸಿದೆ.
ಚುನಾವಣೆಗೆ ನಿಯೋಜಿಸಲ್ಪಟ್ಟಿರುವ ಕರ್ನಾಟಕ ರಾಜ್ಯದ ಅಧಿಕಾರಿಗಳ ಮತ್ತು ಸಿಬ್ಬಂದಿಯ ಪಟ್ಟಿಯನ್ನು ಮುಖ್ಯ ಚುನಾವಣಾ ಅಧಿಕಾರಿಗಳ ಕಚೇರಿಯಿಂದ ಪಡೆದು ಆಯಾ ಅಧಿಕಾರಿ ಹಾಗೂ ಸಿಬ್ಬಂದಿಗೆ ವಿಶೇಷವಾಗಿ ಲಸಿಕಾಕರಣ ನಡೆಸಿ ಬೂಸ್ಟರ್ ಡೋಸ್ ನೀಡಬೇಕು. ಇದನ್ನು ಕೋವಿನ್ ಪೋರ್ಟಲ್‌ನಲ್ಲಿ ಅಪ್ಡೇಟ್ ಮಾಡುವಂತೆ ರಾಷ್ಟ್ರೀಯ ಆರೋಗ್ಯ ಇಲಾಖೆ ತಿಳಿಸಿದೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ