ETV Bharat / state

ಕಾಂಗ್ರೆಸ್​​ನ ಐದು ಗ್ಯಾರಂಟಿಗಳ ಜಾರಿಗೆ ತಾತ್ವಿಕವಾಗಿ ಅನುಮೋದನೆ ನೀಡಿ ಸರ್ಕಾರ ಆದೇಶ! - ಮಹಿಳೆಯರಿಗೆ ಉಚಿತ ಬಸ್ ಯೋಜನೆ

ಕಾಂಗ್ರೆಸ್​ನ ಐದು ಗ್ಯಾರಂಟಿ ಯೋಜನೆಗಳ ಜಾರಿಗೆ ತಾತ್ವಿಕ ಅನುಮೋದನೆ ನೀಡಿ ಸರ್ಕಾರ ಆದೇಶಿಸಿದೆ.

Guarantee schemes
ಗ್ಯಾರಂಟಿ ಯೋಜನೆಗಳು
author img

By

Published : May 20, 2023, 9:33 PM IST

Updated : May 20, 2023, 9:49 PM IST

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನೂತನ ಸಂಪುಟ ಸಭೆಯಲ್ಲಿ ತೀರ್ಮಾನಿಸಿದಂತೆ ಐದು ಗ್ಯಾರಂಟಿ ಯೋಜನೆಗಳ ಜಾರಿಗೆ ತಾತ್ವಿಕ ಅನುಮೋದನೆ ನೀಡಿ ಸರ್ಕಾರ ಆದೇಶ ಹೊರಡಿಸಲಾಗಿದೆ. ಇಂದು ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಕಾಂಗ್ರೆಸ್​ ನೀಡಿದ್ದ ಎಲ್ಲಾ ಐದು ಗ್ಯಾರಂಟಿ ಯೋಜನೆಗಳ ಜಾರಿಗೆ ತಾತ್ವಿಕ ಅನುಮೋದನೆ ನೀಡಲಾಗಿತ್ತು. ಅದರಂತೆ ಇದೀಗ ಸರ್ಕಾರ ತಾತ್ವಿಕ ಅನುಮೋದನೆ ನೀಡಿ ಆದೇಶಿಸಿದೆ.

  • ಚುನಾವಣಾ ಪೂರ್ವದಲ್ಲಿ ನಾವು ನಾಡಿನ ಜನರಿಗೆ 5 ಪ್ರಮುಖ ಗ್ಯಾರೆಂಟಿಗಳನ್ನು ನೀಡಿದ್ದೆವು, ಜನತೆ ನಮ್ಮ ಮೇಲೆ ನಂಬಿಕೆಯಿಟ್ಟು ಪಕ್ಷಕ್ಕೆ ಪೂರ್ಣ ಬಹುಮತ ನೀಡಿದ್ದರಿಂದ ಇಂದು ನಾನು ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದೇನೆ. ನಮ್ಮ ಸರ್ಕಾರದ ಮೊದಲ ಸಂಪುಟ ಸಭೆಯಲ್ಲಿಯೇ ಐದೂ ಗ್ಯಾರೆಂಟಿಗಳಿಗೆ ಅನುಮೋದನೆ ನೀಡುವ ವಚನ ನೀಡಿದ್ದೆ,… pic.twitter.com/x6uiaSevhv

    — Siddaramaiah (@siddaramaiah) May 20, 2023 " class="align-text-top noRightClick twitterSection" data=" ">

ಕಾಂಗ್ರೆಸ್​ನ ಗ್ಯಾರಂಟಿ ಯೋಜನಗೆಳು: ಕುಟುಂಬದ ಮಹಿಳೆಗೆ ಪ್ರತಿ ತಿಂಗಳು 2,000 ರೂ ನೀಡುವ ಗೃಹಲಕ್ಷ್ಮಿ ಯೋಜನೆ, ಪ್ರತಿ ತಿಂಗಳು ಗೃಹ ಬಳಕೆಯ 200 ಯುನಿಟ್ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆ, ಪದವೀಧರರಿಗೆ ಪ್ರತಿ ತಿಂಗಳು 3,000 ರೂ ಹಾಗೂ ಡಿಪ್ಲೋಮಾ ಪದವೀಧರರಿಗೆ 1,500 ರೂ ನೀಡುವ ಯುವನಿಧಿ ಯೋಜನೆ, ರಾಜ್ಯದ ಮಹಿಳೆಯರಿಗೆ ಉಚಿತ ಸರ್ಕಾರಿ ಬಸ್ ಪ್ರಯಾಣದ ಶಕ್ತಿ ಯೋಜನೆ ಹಾಗೂ ಬಿಪಿಎಲ್ ಕಾರ್ಡ್ ದಾರರಿಗೆ 10 ಕೆಜಿ ಅನ್ನಭಾಗ್ಯ ಯೋಜನೆ ಜಾರಿ ಸಂಬಂಧ ತಾತ್ವಿಕ ಒಪ್ಪಿಗೆ ನೀಡಿ ಸರ್ಕಾರ ಆದೇಶಿಸಿದೆ.

ಯೋಜನೆಗಳನ್ನು ಅನುಷ್ಠಾನಗೊಳಿಸಲು ಅನುಸರಿಸಬೇಕಾದ ಕಾರ್ಯವಿಧಾನ ರೂಪುರೇಷೆ ಮತ್ತು ಪಾಲಿಸಬೇಕಾದ ಷರತ್ತು ಮತ್ತು ನಿಬಂಧನೆಗಳ ಬಗ್ಗೆ ಸರ್ಕಾರದಿಂದ ಪ್ರತ್ಯೇಕವಾಗಿ ಆದೇಶ ಹೊರಡಿಸಲಾಗುವುದು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಹಾಗಾಗಿ ಈ ಐದೂ ಯೋಜನೆಗಳ ಜಾರಿ ಇನ್ನೂ ವಿಳಂಬವಾಗಲಿದೆ. ಈ ತಾತ್ವಿಕ ಒಪ್ಪಿಗೆಯ ಆದೇಶದಿಂದ ಐದೂ ಯೋಜನೆಗಳು ತಕ್ಷಣದಿಂದ ಜಾರಿಯಾಗುವುದಿಲ್ಲ. ಮುಂದೆ ಪ್ರತಿ ಐದು ಗ್ಯಾರಂಟಿ ಯೋಜನೆಗಳಿಗೆ ರೂಪುರೇಷೆ, ನಿಬಂಧನೆಗಳು, ಷರತ್ತುಗಳ ಜೊತೆ ಅಧಿಕೃತ ಆದೇಶ ಮುಂದೆ ಹೊರಡಿಸಲಾಗುತ್ತದೆ. ಅದಾದ ಬಳಿಕವೇ ಗ್ಯಾರಂಟಿ ಯೋಜನೆಗಳ ಲಾಭ ಫಲಾನುಭವಿಗಳಿಗೆ ಸಿಗಲಿದೆ.

  • ಚುನಾವಣಾ ಪೂರ್ವದಲ್ಲಿ ನಾವು ನಾಡಿನ ಜನರಿಗೆ 5 ಪ್ರಮುಖ ಗ್ಯಾರೆಂಟಿಗಳನ್ನು ನೀಡಿದ್ದೆವು, ಜನತೆ ನಮ್ಮ ಮೇಲೆ ನಂಬಿಕೆಯಿಟ್ಟು ಪಕ್ಷಕ್ಕೆ ಪೂರ್ಣ ಬಹುಮತ ನೀಡಿದ್ದರಿಂದ ಇಂದು ನಾನು ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದೇನೆ. ನಮ್ಮ ಸರ್ಕಾರದ ಮೊದಲ ಸಂಪುಟ ಸಭೆಯಲ್ಲಿಯೇ ಐದೂ ಗ್ಯಾರೆಂಟಿಗಳಿಗೆ ಅನುಮೋದನೆ ನೀಡುವ ವಚನ ನೀಡಿದ್ದೆ,… pic.twitter.com/uAcblJsLjl

ಇದನ್ನೂ ಓದಿ: ಜುಲೈ ತಿಂಗಳಲ್ಲಿ 3.25 ಲಕ್ಷ ಕೋಟಿ ರೂ. ಮೊತ್ತದ ಬಜೆಟ್ ಮಂಡಿಸಲಿದ್ದೇವೆ: ಸಿಎಂ ಸಿದ್ದರಾಮಯ್ಯ

ಚುನಾವಣಾ ಪೂರ್ವದಲ್ಲಿ ನಾವು ಜನರಿಗೆ 5 ಪ್ರಮುಖ ಗ್ಯಾರಂಟಿಗಳನ್ನು ನೀಡಿದ್ದೆವು, ಜನತೆ ನಮ್ಮ ಮೇಲೆ ನಂಬಿಕೆಯಿಟ್ಟು ಪಕ್ಷಕ್ಕೆ ಪೂರ್ಣ ಬಹುಮತ ನೀಡಿದ್ದರಿಂದ ಇಂದು ನಾನು ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದೇನೆ. ನಮ್ಮ ಸರ್ಕಾರದ ಮೊದಲ ಸಂಪುಟ ಸಭೆಯಲ್ಲಿಯೇ ಐದೂ ಗ್ಯಾರಂಟಿಗಳಿಗೆ ಅನುಮೋದನೆ ನೀಡುವ ವಚನ ನೀಡಿದ್ದೆ, ಇಂದು ಕೊಟ್ಟ ಮಾತಿನಂತೆ ಪ್ರಥಮ ಸಂಪುಟ ಸಭೆಯಲ್ಲೇ ನಮ್ಮ ಎಲ್ಲಾ ಗ್ಯಾರಂಟಿಗಳಿಗೆ ತಾತ್ವಿಕ ಅನುಮೋದನೆ ನೀಡಿ ಮತ್ತೊಮ್ಮೆ ನುಡಿದಂತೆ ನಡೆದಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಸಚಿವ ಸಂಪುಟ ಸಭೆ ಬಳಿಕ ಸಿದ್ದರಾಮಯ್ಯ ಹೇಳಿದ್ದೇನು?: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಇಂದು ಪ್ರಮಾಣ ವಚನ ಸ್ವೀಕರಿಸಿದರು. ಇದೇ ವೇಳೆ ಉಪ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಮತ್ತು ಸಚಿವರಾಗಿ ಎಂಟು ಶಾಸಕರು ಪದಗ್ರಹಣ ಮಾಡಿದರು. ಬಳಿಕ ವಿಧಾನಸೌಧಕ್ಕೆ ತೆರಳಿ ಮೊದಲ ಸಚಿವ ಸಂಪುಟ ಸಭೆ ನಡೆಸಿ, ಕಾಂಗ್ರೆಸ್​ನ ಐದೂ ಗ್ಯಾರಂಟಿಗಳಿಗೆ ಒಪ್ಪಿಗೆ ಸೂಚಿಸಿದರು.

ಬಳಿಕ ಸುದ್ದಿಗೋಷ್ಠಿಯಲ್ಲಿ ಸಿಎಂ ಮಾತನಾಡಿ, ಈ ಗ್ಯಾರಂಟಿಗಳ ಖರ್ಚು, ವೆಚ್ಚ, ರೂಪುರೇಷೆ ಲೆಕ್ಕ ಹಾಕಿ ನಂತರ ಆದೇಶ ಹೊರಡಿಸುತ್ತೇವೆ. ಈ ಗ್ಯಾರಂಟಿ ಯೋಜನೆಗಳಿಗೆ ಸುಮಾರು 50,000 ಸಾವಿರ ಕೋಟಿ ರೂ. ಆಗಲಿದೆ. ಗೃಹ ಜ್ಯೋತಿ ಯೋಜನೆಗಾಗಿಯೇ ಪ್ರತಿ ತಿಂಗಳು ಅಂದಾಜು 1,200 ಕೋಟಿ ರೂ. ವೆಚ್ಚ ತಗುಲಿದೆ. ಕುಟುಂಬದ ಮಹಿಳೆಗೆ ಪ್ರತಿ ತಿಂಗಳು 2,000 ನೀಡುವ ಗೃಹಲಕ್ಷ್ಮಿ ಯೋಜನೆ ಹಾಗೂ ಯುವನಿಧಿ, ಶಕ್ತಿ ಮತ್ತು ಅನ್ನಭಾಗ್ಯ ಯೋಜನೆ ಜಾರಿ ಮಾಡುವುದು ಖಚಿತ. ಖರ್ಚು ವೆಚ್ಚದ ಬಗ್ಗೆ ಚರ್ಚೆ ಮಾಡಿ ಮುಂದಿನ ಸಂಪುಟ ಸಭೆಯಲ್ಲಿ ತೀರ್ಮಾನ‌ ಮಾಡುತ್ತೇವೆ ಎಂದು ಸಿಎಂ ಹೇಳಿದ್ದರು.

ಇದನ್ನೂ ಓದಿ: ಎರಡನೇ ಬಾರಿಗೆ ರಾಜ್ಯದ ಗದ್ದುಗೆ ಏರಿದ ಅಹಿಂದಾ ರಾಜಕಾರಣಿ: ಪಂಚ ಭರವಸೆ ಈಡೇರಿಸುವತ್ತ ಕಾಂಗ್ರೆಸ್​ ನೂತನ ಸಿಂಎಂ ಚಿತ್ತ..

Last Updated : May 20, 2023, 9:49 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.