ETV Bharat / state

ರಾಜ್ಯದಲ್ಲಿ ಹೊಸದಾಗಿ 4,244 ಅಂಗನವಾಡಿ ಕೇಂದ್ರಗಳ ಪ್ರಾರಂಭಕ್ಕೆ ಸರ್ಕಾರ ಆದೇಶ - woman and children welfare department

ಅಂಗನವಾಡಿ ಕೇಂದ್ರಗಳ ಪ್ರಾರಂಭಕ್ಕೆ ಸರ್ಕಾರ ಆದೇಶ: ರಾಜ್ಯದಲ್ಲಿ ಹೊಸದಾಗಿ ಅಂಗನವಾಡಿ ಕೇಂದ್ರಗಳ ಪ್ರಾರಂಭಕ್ಕೆ ಸರ್ಕಾರ ಆದೇಶ ಹೊರಡಿಸಿದೆ. 4,244 ಅಂಗನವಾಡಿ ಕೇಂದ್ರಗಳನ್ನು ಪ್ರಾರಂಭಿಸಲು 268.98 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ.

ಅಂಗನವಾಡಿ ಕೇಂದ್ರಗಳ ಪ್ರಾರಂಭಕ್ಕೆ ಸರ್ಕಾರ ಆದೇಶ

author img

By

Published : Sep 3, 2022, 3:54 PM IST

ಬೆಂಗಳೂರು: ರಾಜ್ಯದ ಸುಮಾರು 16 ಲಕ್ಷ ಕುಟುಂಬಗಳ ಮಕ್ಕಳ ಪೌಷ್ಟಿಕಾಂಶ ಮತ್ತು ಶಾಲಾ ಪೂರ್ವ ಶಿಕ್ಷಣದ ಪ್ರಯೋಜನ ಹಾಗೂ 8,100 ಮಹಿಳೆಯರಿಗೆ ಉದ್ಯೋಗಾವಕಾಶ ನೀಡುವಂತಹ 4,244 ಅಂಗನವಾಡಿ ಕೇಂದ್ರಗಳನ್ನು ಪ್ರಾರಂಭಿಸಲು ಅಧಿಕೃತ ಆದೇಶ ಹೊರಡಿಸಲಾಗಿದೆ. ಈ ಉದ್ದೇಶಕ್ಕಾಗಿ 268.98 ಕೋಟಿ ರೂಪಾಯಿಗಳ ಅನುದಾನವನ್ನು ಮೀಸಲಿಡಲಾಗಿದೆ.

ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವ ಹಾಲಪ್ಪ ಆಚಾರ್‌, ಪ್ರಧಾನಿ ನರೇಂದ್ರ ಮೋದಿ ಅವರ ಪೋಷಣ್ ಮಾಸಾಚರಣೆಯ ಘೋಷಣೆಯ ಬೆನ್ನಲ್ಲೇ ಈ ಅಧಿಕೃತ ಆದೇಶ ಹೊರಡಿಸಿರುವುದು ಬಹಳ ಸಂತಸದ ವಿಷಯವಾಗಿದೆ.

ಕರ್ನಾಟಕ ಅಂಗನವಾಡಿ ಮತ್ತು ಪೋಷಣ್ ಅಭಿಯಾನ 2.0 ಎಂದು ಮರುನಾಮಾಂಕಿತಗೊಂಡಿರುವ ಸಮಗ್ರ ಮಕ್ಕಳ ಅಭಿವೃದ್ಧಿ ಯೋಜನೆಯನ್ನು 1975 ರಲ್ಲಿ ಪ್ರಾರಂಭಿಸಲಾಗಿತ್ತು. ಪ್ರಸ್ತುತ ರಾಜ್ಯದಲ್ಲಿ ಈ ಯೋಜನೆಯ ಅಡಿ ಒಟ್ಟು 66,361 ಅಂಗನವಾಡಿ ಕೇಂದ್ರಗಳು ಸ್ಥಾಪಿತವಾಗಿದ್ದು, ಅವುಗಳ ಮೂಲಕ ರಾಜ್ಯದ ಮಕ್ಕಳಿಗೆ, ಕಿಶೋರಿಯರಿಗೆ, ಗರ್ಭಿಣಿ ಸ್ತ್ರೀಯರಿಗೆ ಹಾಗೂ ಬಾಣಂತಿಯರಿಗೆ ಪೂರಕ ಪೌಷ್ಟಿಕ ಆಹಾರ, ಶಾಲಾ ಪೂರ್ವ ಶಿಕ್ಷಣ, ಪೌಷ್ಟಿಕತೆ ಮತ್ತು ಆರೋಗ್ಯ ಶಿಕ್ಷಣ ಮುಂತಾದ 6 ಸೇವೆಗಳನ್ನು ಒದಗಿಸಲಾಗುತ್ತಿದೆ.

ಪ್ರಸ್ತುತ ಈ ಯೋಜನೆಯ ಅಡಿ ಶೇಕಡಾ 56 ರಷ್ಟು ಫಲಾನುಭವಿಗಳಿಗೆ ಮಾತ್ರ ಸೌಲಭ್ಯ ನೀಡಲು ಸಾಧ್ಯವಾಗಿದೆ. ಈ ಯೋಜನೆಯಿಂದ ಹೊರಗಿರುವ ಕಡಿಮೆ ಆದಾಯದ ಜನಸಂಖ್ಯೆಯು ವಾಸಿಸುವ ಪ್ರದೇಶಗಳು ಹೆಚ್ಚಾಗಿದ್ದು, ಅವರಿಗೆ 6 ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರ ತನ್ನ ಅನುದಾನದಲ್ಲಿಯೇ ಈ ಹೊಸ ಅಂಗನವಾಡಿ ಕೇಂದ್ರಗಳನ್ನು ಪ್ರಾರಂಭಿಸುತ್ತಿದೆ. ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು 76ನೇ ವರ್ಷದ ಸ್ವಾತಂತ್ರೋತ್ಸವ ಭಾಷಣದಲ್ಲಿ ಘೋಷಿಸಿದ ಒಂದು ತಿಂಗಳ ಒಳಗಾಗಿಯೇ ಅನುಷ್ಠಾನದತ್ತ ಸ್ಪಷ್ಟ ಹೆಜ್ಜೆಯನ್ನು ಇಟ್ಟಿರುವುದು ಬಹಳ ಸಂತಸದ ವಿಷಯವಾಗಿದೆ. ಈ ಅಂಗನವಾಡಿ ಕೇಂದ್ರಗಳನ್ನು ಶೀಘ್ರದಲ್ಲೇ ಪ್ರಾರಂಭಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.

(ಇದನ್ನೂ ಓದಿ: ದಲಿತೆ ಎಂದು ಅನುಮತಿ ನೀಡದ ಗ್ರಾಮಸ್ಥರು: ಅಂಗನವಾಡಿಯನ್ನ ಕಾನ್ವೆಂಟ್ ರೀತಿ ಮಾಡಿ ಸವಾಲೆಸೆದ ಶಿಕ್ಷಕಿ!)

ETV Bharat Logo

Copyright © 2024 Ushodaya Enterprises Pvt. Ltd., All Rights Reserved.