ETV Bharat / state

2020ಕ್ಕೆ ರಾಜ್ಯದಲ್ಲಿ ಗ್ರಾಪಂ ಚುನಾವಣೆ: ಪೂರ್ವಸಿದ್ಧತೆಯಲ್ಲಿ ಚುನಾವಣಾ ಆಯೋಗ

author img

By

Published : Jul 27, 2019, 8:38 PM IST

ಗ್ರಾಮ ಪಂಚಾಯಿತಿ ಚುನಾವಣೆ ಬಗ್ಗೆ ರಾಜ್ಯ ಚುನಾವಣಾ ಆಯೋಗ ತೀರ್ಮಾನ ಕೈಗೊಂಡಿದ್ದು, ಪೂರ್ವಸಿದ್ಧತೆ ಆರಂಭಿಸುವಂತೆ ಜಿಲ್ಲಾಧಿಕಾರಿಗಳಿಗೆ ಅಧಿಸೂಚನೆ ಹೊರಡಿಸಿದೆ.

ಪೂರ್ವಸಿದ್ಧತೆಯಲ್ಲಿ ಚುನಾವಣಾ ಆಯೋಗ

ಬೆಂಗಳೂರು: 2020ರ ಮೇ ತಿಂಗಳಲ್ಲಿ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸಲು ಕರ್ನಾಟಕ ರಾಜ್ಯ ಚುನಾವಣಾ ಆಯೋಗ ತೀರ್ಮಾನ ಮಾಡಿದ್ದು, ಪೂರ್ವ ಸಿದ್ಧತೆ ಆರಂಭಿಸಿದೆ.

Karnataka Gram Panchayat Election
ಚುನಾವಣಾ ಆಯೋಗದ ಅಧಿಸೂಚನೆ

ಗ್ರಾಮ ಪಂಚಾಯಿತಿಗಳಿಗೆ 2020ರ ಮೇ ತಿಂಗಳಲ್ಲಿ ಚುನಾವಣೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಚುನಾವಣಾ ಆಯೋಗ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಅಧಿಸೂಚನೆ ಹೊರಡಿಸಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯು ಬದಲಾವಣೆ ಆಗಿದ್ದಲ್ಲಿ ಜನಸಂಖ್ಯೆ ವ್ಯತ್ಯಾಸದಿಂದ ಹೊಸದಾಗಿ ಸ್ಥಾನಗಳನ್ನು ನಿಗದಿಪಡಿಸಿ, ಚುನಾವಣೆ ನಡೆಸಲು ಪೂರ್ವಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ.

ಅಲ್ಲದೆ ವರ್ಗವಾರು ಸ್ಥಾನಗಳನ್ನು ಪುನರ್ ನಿಗದಿಪಡಿಸಬೇಕಾದ ಗ್ರಾಮ ಪಂಚಾಯಿತಿಗಳ ವಿವರಗಳನ್ನು ನಿಗದಿತ ದಿನಾಂಕದಂದು ಆಯೋಗಕ್ಕೆ ಕಳುಹಿಸಿಕೊಡುವಂತೆ ಕರ್ನಾಟಕ ರಾಜ್ಯ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ. ಈ ಹಿಂದೆ 2015 ರ ಮೇ-ಜೂನ್ ತಿಂಗಳಲ್ಲಿ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆದಿತ್ತು.

Intro:2020 ಮೇ ತಿಂಗಳಲ್ಲಿ ಗ್ರಾಮ ಪಂಚಾಯತಿಗಳಿಗೆ ಚುನಾವಣೆ- ಪೂರ್ವಸಿದ್ಧತೆಯಲ್ಲಿ ರಾಜ್ಯ ಚುನಾವಣಾ ಆಯೋಗ
ಬೆಂಗಳೂರು- ಗ್ರಾಮ ಪಂಚಾಯತಿಗಳ ಸಾರ್ವತ್ರಿಕ ಚುನಾವಣೆ, ಪೂರ್ವಸಿದ್ಧತೆ ಆರಂಭಗೊಂಡಿದೆ.
ಗ್ರಾಮ ಪಂಚಾಯತಿಗಳಿಗೆ 2020 ರ ಮೇ ತಿಂಗಳಲ್ಲಿ ಚುನಾವಣೆ ನಡೆಸಲು ತೀರ್ಮಾನಿಸಲಾಗಿದೆ ಎಂದು ರಾಜ್ಯ ಚುನಾವಣಾ ಆಯೋಗ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಅಧಿಸೂಚನೆ ಹೊರಡಿಸಿದೆ. ಈ ಹಿಂದೆ 2015 ರಲ್ಲಿ ಮೇ-ಜೂನ್ ತಿಂಗಳಲ್ಲಿ ಚುನಾವಣೆ ನಡೆದಿತ್ತು.
ಅಲ್ಲದೆ ಗ್ರಾಮ ಪಂಚಾಯತಿಯ ವ್ಯಾಪ್ತಿಯು ಬದಲಾವಣೆ ಆಗಿದ್ದಲ್ಲಿ ಅಥವಾ ಜನಸಂಖ್ಯೆ ವ್ಯಾತ್ಯಾಸದಿಂದ ಹೊಸದಾಗಿ ಸ್ಥಾನಗಳನ್ನು ನಿಗದಿಪಡಿಸಿ ಚುನಾವಣೆ ನಡೆಸುವ ಪೂರ್ವಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ.
ಅಲ್ಲದೆ ಯಾವ ಜಿಲ್ಲೆಗಳಲ್ಲಿ ವರ್ಗವಾರು ಸ್ಥಾನಗಳನ್ನು ಪುನರ್ ನಿಗದಿಪಡಿಸಬೇಕಾದ ಗ್ರಾಮ ಪಂಚಾಯಿತಿಗಳ ವಿವರಗಳನ್ನು ನಿಗದಿತ ದಿನಾಂಕದಂದು ಆಯೋಗಕ್ಕೆ ಕಳಿಸಿಕೊಡುವಂತೆ ರಾಜ್ಯ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ.

ಸೌಮ್ಯಶ್ರೀ
Kn_Bng_04_grama_panchayath_7202707Body:..Conclusion:..
ETV Bharat Logo

Copyright © 2024 Ushodaya Enterprises Pvt. Ltd., All Rights Reserved.