ETV Bharat / state

ಪಂಚ ಗ್ಯಾರಂಟಿ: ಇಲ್ಲಿವರೆಗೆ ರಾಜ್ಯ ಸರ್ಕಾರ ಬಿಡುಗಡೆ ಮಾಡಿದ ಅನುದಾನದ ಸಂಪೂರ್ಣ ವಿವರ - ಬೆಂಗಳೂರು

ರಾಜ್ಯ ಕಾಂಗ್ರೆಸ್​ ಸರ್ಕಾರ ಚುನಾವಣಾ ಪೂರ್ವದಲ್ಲಿ ನೀಡಿದ ಭರವಸೆಯಂತೆ ಪಂಚ ಗ್ಯಾರಂಟಿಗಳನ್ನು ಒಂದೊಂದಾಗಿ ಅನುಷ್ಠಾನಗೊಳಿಸುತ್ತಿದೆ. ಈವರೆಗೆ ಈ ಗ್ಯಾರಂಟಿಗಳಿಗಾಗಿ ಸರ್ಕಾರ ಬಿಡುಗಡೆ ಮಾಡಿರುವ ಅನುದಾನದ ವಿವರ ಇಲ್ಲಿದೆ.

ವಿಧಾನಸೌಧ
ವಿಧಾನಸೌಧ
author img

By ETV Bharat Karnataka Team

Published : Sep 18, 2023, 7:00 AM IST

ಬೆಂಗಳೂರು: ಪಂಚ ಗ್ಯಾರಂಟಿಗಳ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಪ್ರಮುಖ ಆದ್ಯತೆ ನೀಡಿದೆ.‌ ಗ್ಯಾರಂಟಿಗಳ ಜಾರಿಗೆ ತೊಡಕಾಗದಂತೆ ಅನುದಾನ ಬಿಡುಗಡೆ ಮಾಡುತ್ತಿದೆ. ಆಗಸ್ಟ್​ವರೆಗೆ ಜಾರಿಯಾಗಿರುವ 4 ಗ್ಯಾರಂಟಿಗಳಿಗೆ ನೀಡಿರುವ ಅನುದಾನದ ಮಾಹಿತಿ ನೋಡೋಣ.

2023-24ರ ಸಾಲಿನಲ್ಲಿ ಪಂಚ ಗ್ಯಾರಂಟಿಗಳಿಗಾಗಿ ಸರ್ಕಾರ ಸುಮಾರು 40,000 ಕೋಟಿ ರೂ.‌ ಅನುದಾನ ಹಂಚಿಕೆ ಮಾಡಿದೆ. ಈ ಗ್ಯಾರಂಟಿಗಳಿಗಾಗಿ ಎಸ್‌ಸಿಎಸ್ ಪಿಟಿಎಸ್‌ಪಿಯಡಿ 11,144 ಕೋಟಿ ರೂ. ಅನುದಾನ ಹಂಚಿದೆ. ಉಳಿದಂತೆ, ಇತರೆ ಇಲಾಖೆಗಳ ಅನುದಾನಗಳನ್ನು ಹೊಂದಿಸಿ 5 ಗ್ಯಾರಂಟಿಗಳಿಗೆ ಬಳಸುತ್ತಿದೆ.‌ ಈ ಮೂಲಕ ಅನುದಾನ ಕೊರತೆಯಾಗದಂತೆ ಎಚ್ಚರಿಕೆ ವಹಿಸುತ್ತಿದೆ. ಶಕ್ತಿ ಯೋಜನೆ, ಅನ್ನ ಭಾಗ್ಯ, ಗೃಹ ಜ್ಯೋತಿ ಹಾಗೂ ಗೃಹ ಲಕ್ಷ್ಮಿ ಯೋಜನೆಗಳನ್ನು ಈಗಾಗಲೇ ಜಾರಿಯಾಗಿದೆ.

1. ಶಕ್ತಿ ಯೋಜನೆ: ಶಕ್ತಿ ಯೋಜನೆಗೆ ಸರ್ಕಾರ 2023-24 ಸಾಲಿನಲ್ಲಿ ಒಟ್ಟು 2,800 ಅನುದಾನ ಹಂಚಿದೆ. ಜೂನ್ 11ರಿಂದ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆ ಆರಂಭವಾಗಿದೆ. ಆಗಸ್ಟ್​ವರೆಗೆ ಸುಮಾರು 50.10 ಕೋಟಿ ಮಹಿಳೆಯರು ಉಚಿತವಾಗಿ ಸರ್ಕಾರಿ ಬಸ್​ನಲ್ಲಿ ಪ್ರಯಾಣಿಸಿದ್ದಾರೆ. ಆಗಸ್ಟ್​ವರೆಗೆ ಸುಮಾರು 1,163.14 ಕೋಟಿ ರೂ. ಉಚಿತ ಟಿಕೆಟ್ ವೆಚ್ಚವಾಗಿದೆ.

ಯೋಜನೆ ಹಾಗೂ ಸಾಂಖ್ಯಿಕ ಇಲಾಖೆ ನೀಡಿರುವ ಕೆಡಿಪಿ ಪ್ರಗತಿ ಅಂಕಿಅಂಶದ ಪ್ರಕಾರ ಆಗಸ್ಟ್​ವರೆಗೆ ಶಕ್ತಿ ಯೋಜನೆಗಾಗಿ 490.74 ಕೋಟಿ ರೂ. ಅನುದಾನ ಬಿಡುಗಡೆಗೊಳಿಸಿದೆ. ಆದರೆ ತೋರಿಸಿರುವ ವೆಚ್ಚ ಮಾತ್ರ 85.44 ಕೋಟಿ ರೂ., ಆದರೆ ಆಗಸ್ಟ್​ವರೆಗೆ ಆಗಿರುವ ವಾಸ್ತವ ವೆಚ್ಚ ಸಾವಿರ ಕೋಟಿ ರೂ. ದಾಟಿದೆ.

2. ಅನ್ನಭಾಗ್ಯ: ಅನ್ನಭಾಗ್ಯ ಯೋಜನೆಯಡಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ 5 ಕೆ.ಜಿ. ಅಕ್ಕಿ ವಿತರಿಸಲು ಯೋಜಿಸಿತ್ತು.‌ ರಾಜ್ಯದ ಅಂತ್ಯೋದಯ ಅನ್ನ ಯೋಜನೆ ಹಾಗೂ ಆದ್ಯತಾ ಪಡಿತರದಾರರಿಗೆ ಐದು ಕೆ.ಜಿ.‌ಉಚಿತ ಅಕ್ಕಿ ನೀಡಲು ನಿರ್ಧರಿಸಿತ್ತು. ಆದರೆ ಅಕ್ಕಿ ಕೊರತೆ ಎದುರಾದ ಕಾರಣ ಸರ್ಕಾರ ನಗದು ಜಮೆ ಮಾಡಲು ಆರಂಭಿಸಿದೆ. ಜುಲೈ 10ರಿಂದ ಫಲಾನುಭವಿಗಳ ಖಾತೆಗೆ ನಗದು ಜಮೆ ಮಾಡುವ ಪ್ರಕ್ರಿಯೆ ಆರಂಭಿಸಿತ್ತು.

ಪ್ರತಿ ಕೆ.ಜಿಗೆ ರೂ.34 ರೂ.ರಂತೆ ಮಾಸಿಕ 170 ರೂ.‌ ನಗದು ಹಣವನ್ನು ಪಡಿತರ ಫಲಾನುಭವಿಯ ಕುಟುಂಬದ ಮುಖ್ಯಸ್ಥರ ಬ್ಯಾಂಕ್‌ ಖಾತೆಗೆ DBT ಮೂಲಕ ವರ್ಗಾಯಿಸಲಾಗುತ್ತಿದೆ. ರಾಜ್ಯದಲ್ಲಿ 10,89,990 ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿದಾರರಿದ್ದರೆ. 1,17,26,296 ಆದ್ಯತಾ ಪಡಿತರ ಚೀಟಿದಾರರಿದ್ದಾರೆ. ಒಟ್ಟು 4.42 ಕೋಟಿ ಕುಟುಂಬ ಸದಸ್ಯರು ಇದರ ಫಲಾನುಭವಿಗಳಾಗಿದ್ದಾರೆ. ಅನ್ನಭಾಗ್ಯಕ್ಕೆ ರಾಜ್ಯ ಸರ್ಕಾರ ಒಟ್ಟು 10,265 ಕೋಟಿ ರೂ. ಹಂಚಿಕೆ ಮಾಡಿದೆ. ಈ ಪೈಕಿ ಆಗಸ್ಟ್​ವರೆಗೆ 1,774.42 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಅನ್ನಭಾಗ್ಯ ಯೋಜನೆಯಡಿ SCSPTSPಯಿಂದ 284.57 ಕೋಟಿ ರೂ. ಬಿಡುಗಡೆ ಮಾಡಿದೆ. ಅನ್ನಭಾಗ್ಯ ಯೋಜನೆಯಡಿ ಆಗಸ್ಟ್ ವರೆಗೆ 1,360.60 ಕೋಟಿ ರೂ. ವೆಚ್ಚ ತೋರಿಸಲಾಗಿದೆ.

3. ಗೃಹ ಜ್ಯೋತಿ: 200 ಯುನಿಟ್​ವರೆಗಿನ ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ ಯೋಜನೆಗಾಗಿ ರಾಜ್ಯ ಸರ್ಕಾರ 2023-24 ಸಾಲಿನಲ್ಲಿ 9,000 ಕೋಟಿ ರೂ. ಅನುದಾನ ಹಂಚಿಕೆ ಮಾಡಿದೆ. ಹಿಂದಿನ ಒಂದು ವರ್ಷದ ಸರಾಸರಿ ವಿದ್ಯುತ್ ಬಳಕೆ +10% ವರೆಗಿನ ಬಳಕೆಗೆ ಈ ಯೋಜನೆ ಅನ್ವಯವಾಗುತ್ತಿದೆ. ಜುಲೈ ತಿಂಗಳಿಂದ ಈ ಯೋಜನೆ ಆರಂಭವಾಗಿದೆ.

ಗೃಹ ಜ್ಯೋತಿಗೆ ಆಗಸ್ಟ್​ವರೆಗೆ 650 ಕೋಟಿ ರೂ. ಬಿಡುಗಡೆ ಮಾಡಿದೆ. ಆಗಸ್ಟ್​ವರೆಗೆ ಯೋಜನೆಯಡಿ ತೋರಿಸಿದ ವೆಚ್ಚ 650 ಕೋಟಿ ರೂ. ಆಗಿದೆ. ಗೃಹ ಜ್ಯೋತಿ ಯೋಜನೆಗೆ SCSPTSPಯಿಂದ ಆಗಸ್ಟ್​ವರೆಗೆ ಒಟ್ಟು 174 ಕೋಟಿ ರೂ. ಬಿಡುಗಡೆ ಮಾಡಿದೆ ಎಂದು ಕೆಡಿಪಿ ಪ್ರಗತಿ ಪರಿಶೀಲನಾ ಅಂಕಿ ಅಂಶ ತಿಳಿಸಿದೆ.

4. ಗೃಹ ಲಕ್ಷ್ಮಿ ಯೋಜನೆ: ಗೃಹ ಲಕ್ಷ್ಮಿ ಯೋಜನೆಗಾಗಿ ಸರ್ಕಾರ 2023-24 ಸಾಲಿನಲ್ಲಿ 17,500 ಕೋಟಿ ರೂ. ಅನುದಾನ ಹಂಚಿದೆ. ಗೃಹ ಲಕ್ಷ್ಮಿ ಯೋಜನೆಯಡಿ ಮನೆ ಯಜಮಾನಿಗೆ ಮಾಸಿಕ 2,000 ರೂ. ಜಮೆ ಮಾಡಲಾಗುತ್ತಿದೆ. ಆಗಸ್ಟ್ ತಿಂಗಳಿಂದ ಯೋಜನೆ ಜಾರಿಯಾಗಿದೆ. ಸುಮಾರು 1.28 ಕೋಟಿ ಯಜಮಾನಿಗಳು ಫಲಾನುಭವಿಗಳಾಗಿದ್ದಾರೆ.

ಆಗಸ್ಟ್ ತಿಂಗಳವರೆಗೆ ಗೃಹ ಲಕ್ಷ್ಮಿಗಾಗಿ 2,180.51 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಆಗಸ್ಟ್​ವರೆಗೆ ತೋರಿಸಲಾದ ವೆಚ್ಚ 946.62 ಕೋಟಿ ರೂ. ಇತ್ತ SCSPTSPಯಿಂದ ಒಟ್ಟು ಆಗಸ್ಟ್​ವರೆಗೆ 540.92 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಇನ್ನು ಮೊದಲ ಕಂತಿನ ಅನುದಾನವಾಗಿ ಆಗಸ್ಟ್ ಹಾಗೂ ಸೆಪ್ಟೆಂಬರ್ ತಿಂಗಳಿಗೆ ಇಲಾಖೆಗೆ ಸುಮಾರು 4,569 ಕೋಟಿ ರೂ. ಬಿಡುಗಡೆ ಮಾಡಿದೆ.

ಇದನ್ನೂ ಓದಿ: ಗ್ಯಾರಂಟಿ ಯೋಜನೆಗೆ 'SCSPTSP' ಅನುದಾನ ಬಳಕೆ: ಈವರೆಗೆ ಬಿಡುಗಡೆಯಾದ ಹಣ ಎಷ್ಟು?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.