ETV Bharat / state

ಹಡ್ಸನ್ ವೃತ್ತದ ಕೃಷಿಕ್ ಸಮಾಜದ ಕಟ್ಟಡ ಕಬ್ಬನ್ ಉದ್ಯಾನದಲ್ಲಿದೆಯೇ? ಸರ್ವೇ ಮಾಡಿ ವರದಿ ಸಲ್ಲಿಸಲು ಹೈಕೋರ್ಟ್ ನಿರ್ದೇಶನ

author img

By

Published : Jan 25, 2023, 7:55 PM IST

ಹಡ್ಸನ್ ವೃತ್ತದಲ್ಲಿವರ ಕರ್ನಾಟಕ ಪ್ರದೇಶ ಕೃಷಿಕ್ ಸಮಾಜದ ಕಟ್ಟಡ ಕಬ್ಬನ್ ಉದ್ಯಾನವನದಲ್ಲಿದೆಯೇ ಎಂಬುದನ್ನು ಪರಿಶೀಲನೆ ಮಾಡಿ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

High Court
ಹೈಕೋರ್ಟ್

ಬೆಂಗಳೂರು: ನಗರದ ಹಡ್ಸ್‌ನ್ ವೃತ್ತದಲ್ಲಿರುವ ಕರ್ನಾಟಕ ಪ್ರದೇಶ ಕೃಷಿಕ್ ಸಮಾಜದ ಕಟ್ಟಡ (ಹಾಪ್ ಕಾಮ್ಸ್ ಕಟ್ಟಡ) ಕಬ್ಬನ್ ಉದ್ಯಾನವನದಲ್ಲಿದೆಯೇ ಎಂಬುದನ್ನು ಸರ್ವೇ ಮಾಡಿ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಪಾಕ್ಸ್ ಮತ್ತು ಗಾಡನ್ಸ್ ಕಾಯಿದೆಯಡಿಯಲ್ಲಿರುವ ಕಬ್ಬನ್ ಉದ್ಯಾನವನದಲ್ಲಿ ಯಾವುದೇ ಶಾಶ್ವತ ಕಟ್ಟಡಗಳ ನಿರ್ಮಾಣಕ್ಕೆ ಅವಕಾಶವಿಲ್ಲ. ಆದರೂ ಕಟ್ಟಡಗಳನ್ನು ನಿರ್ಮಾಣ ಮಾಡಲಾಗಿದೆ ಎಂದು ಕಬನ್ಬ್ ಉದ್ಯಾನವನದ ನಡಿಗೆದಾರರ ಸಂಘದ ಅಧ್ಯಕ್ಷ ಎಸ್.ಉಮೇಶ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಸರ್ವೇ ಮಾಡಿ ವರದಿ ನೀಡಿ: ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಆಶೋಕ್ ಎಸ್.ಕಿಣಗಿ ಅವರಿದ್ದ ನ್ಯಾಯಪೀಠ ಈ ಅರ್ಜಿ ವಿಚಾರಣೆ ನಡೆಸಿತು. ಹಡ್ಸನ್ ವೃತ್ತದಲ್ಲಿರುವ ಕರ್ನಾಟಕ ಪ್ರದೇಶ ಕೃಷಿಕ್ ಸಮಾಜದ ಕಟ್ಟಡ ಕಬ್ಬನ್ ಉದ್ಯಾನದಲ್ಲಿದಿಯೇ ಎಂಬುದನ್ನು ಪರಿಶೀಲನೆ ನಡೆಸುವುದಕ್ಕಾಗಿ ಲೋಕೋಪಯೋಗಿ ಇಲಾಖೆಯ ಮುಖ್ಯ ಎಂಜಿನಿಯರ್ ಹಾಗೂ ಭೂ ದಾಖಲೆಗಳ ಇಲಾಖೆ ಸಹಾಯಕ ನಿರ್ದೇಶಕರು ಜಂಟಿಯಾಗಿ ಫೆ.4 ರಂದು ಬೆಳಗ್ಗೆ 11 ಗಂಟೆಗೆ ಸರ್ವೇ ಕಾರ್ಯ ಮಾಡಬೇಕು. ಈ ಸಂದರ್ಭದಲ್ಲಿ ಪ್ರಕರಣದ ಪ್ರತಿವಾದಿಗಳಾದ ತೋಟಗಾರಿಕೆ ಇಲಾಖೆಯ ನಿರ್ದೇಶಕರು, ಜಂಟಿ ನಿರ್ದೇಶಕರು, ಉಪ ನಿರ್ದೇಶಕರು, ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯ ಅಧಿಕಾರಿಗಳು, ಪಶುಸಂಗೋಪನಾ ಇಲಾಖೆ ಕಾರ್ಯದರ್ಶಿಗಳು, ಜಲ ಮಂಡಳಿ ಅಧಿಕಾರಿಗಳು ಸೇರಿದಂತೆ ಇತರರರ ಹಾಜರಿರುವಂತೆ ನೋಡಿ ಕೊಳ್ಳಬೇಕು ಎಂದು ನಿರ್ದೇಶನ ನೀಡಿದೆ. ಅಲ್ಲದೇ, ಫೆ.4 ರಂದು ನಡೆಸಿದ ಸರ್ವೇ ಕಾರ್ಯಕ್ಕೆ ಸಂಬಂಧ ಪಡಿಸಿದಂತೆ ವರದಿಯನ್ನು ಫೆ. 8ರಂದು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಸೂಚನೆ ನೀಡಿ ವಿಚಾರಣೆಯನ್ನು ಫೆ.10ಕ್ಕೆ ಮುಂದೂಡಿದೆ.

ರೈತರಿಗೆ ನೆರವು: ವಿಚಾರಣೆ ವೇಳೆ ಕರ್ನಾಟಕ ಕೃಷಿಕ್ ಸಮಾಜದ ಪರ ವಕೀಲರು ಹಾಜರಾಗಿ ನೂತನ ಕಟ್ಟಡ ಬಳಕೆಗೆ ಅನುಮತಿ ನೀಡಬೇಕು ಎಂದು ಮಧ್ಯಂತ ಅರ್ಜಿ ಸಲ್ಲಿಸಿ ಮನವಿ ಮಾಡಿದರು. ಅಲ್ಲದೆ, ಕರ್ನಾಟಕ ಪ್ರದೇಶ ಕೃಷಿಕ್ ಸಮಾಜ ಪ್ರಾರಂಭದಲ್ಲಿ ಮೈಸೂರು ಕೃಷಿಕ್ ಸಮಾಜ ಎಂಬುದಾಗಿತ್ತು. ಮೈಸೂರು ಸಹಕಾರ ಸಂಘಗಳ ಕಾಯಿದೆ ಅಡಿಯಲ್ಲಿ ನೋಂದಣಿಯಾಗಿದೆ. ಈ ಸಂಸ್ಥೆ ರಾಜ್ಯದಲ್ಲಿರುವ ರೈತರ ಸಮಾಜಕ್ಕೆ ಅಗತ್ಯವಿರುವ ತಾಂತ್ರಿಕ ಸಲಹೆಗಳನ್ನು ನೀಡುತ್ತಿದೆ. ಜತೆಗೆ ರೈತರಿಗೆ ನೆರವಾಗವಂತಹ ಕೌಶಲ್ಯ ಹೆಚ್ಚಳಕ್ಕೆ ಶ್ರಮಿಸುತ್ತಿದೆ. ಅಲ್ಲದೇ ರೈತ ಉತ್ಪನ್ನಗಳಾದ ಹಣ್ಣು ಮತ್ತು ತರಕಾರಿ ಮಾರಾಟಕ್ಕೆ ವ್ಯವಸ್ಥೆ ಕಲ್ಪಿಸಿದೆ.

ಸಮೀಕ್ಷೆ ನಡೆಸಲು ಸೂಚನೆ: 1966 ರಂದು ರಾಜ್ಯ ಸರ್ಕಾರ 53,328 ಚದರ ಅಡಿ ಜಮೀನ್ನು ಕರ್ನಾಟಕ ಪ್ರದೇಶ ಕೃಷಿಕ್ ಸಮಾಜಕ್ಕೆ 99 ವರ್ಷಗಳ ಅವಧಿಗೆ ಗುತ್ತಿಗೆ ನೀಡಿದೆ. ಜತೆಗೆ, ಈವರೆಗೂ ಕೃಷಿಕ್ ಸಮಾಜ ಆದಾಯ ತೆರಿಗೆಯನ್ನು ಪಾವತಿಸುತ್ತಿದೆ. ಪ್ರಸ್ತುತ ರೈತರಿಗೆ ಅನುಕೂಲವಾಗುವಂತಹ ಸೌಲಭ್ಯಗಳನ್ನು ಕಲ್ಪಿಸಲು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದಕ್ಕಾಗಿ ದೊಡ್ಡ ಪ್ರಮಾಣದ ಬಂಡವಾಳ ಹೂಡಿಕೆ ಮಾಡಿ ಬೃಹತ್ ಕಟ್ಟಡವನ್ನು ನಿರ್ಮಿಸಿದೆ. ಆದರೆ, ನ್ಯಾಯಾಲಯದ ಅನುಮತಿ ಇಲ್ಲದೆ ಕಟ್ಟಡ ಬಳಕೆ ಮಾಡುವುದಕ್ಕೆ ಅವಕಾಶ ಇಲ್ಲ. ಹಾಗಾಗಿ ಕಟ್ಟಡ ಬಳಕೆ ಮಾಡಿಕೊಳ್ಳಲು ಅನುಮತಿ ನೀಡಬೇಕು ಎಂದು ಮನವಿ ಮಾಡಿದರು. ಇದನ್ನು ಪರಿಗಣಿಸಿದ ನ್ಯಾಯಪೀಠ, ಸಮೀಕ್ಷೆ ನಡೆಸುವುದಕ್ಕೆ ಸೂಚನೆ ನೀಡಿ ವಿಚಾರಣೆ ಮುಂದೂಡಿತು.

ಇದನ್ನೂ ಓದಿ: ಬಡ್ತಿ ಮೀಸಲು ಜಾರಿ ಗೊಂದಲ ನಿವಾರಣೆಗೆ ಹೊಸ ಮಾರ್ಗಸೂಚಿ ಸೂಕ್ತ: ಹೈಕೋರ್ಟ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.