ETV Bharat / state

ನಾಡಗೀತೆ ಧಾಟಿ: ಸರ್ಕಾರಕ್ಕಿರುವ ಶಾಸನಾತ್ಮಕ ಅಧಿಕಾರ ತಿಳಿಸಲು ಹೈಕೋರ್ಟ್‌ ಸೂಚನೆ - ಕಿಕ್ಕೇರಿ ಕೃಷ್ಣಮೂರ್ತಿ

ನಾಡಗೀತೆ ಹಾಡಲು ರಾಗವನ್ನು ನಿಗದಿ ಪಡಿಸಿ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರ ಇಂತಹ ಆದೇಶ ಹೊರಡಿಸುವಾಗ ಅದಕ್ಕಿರುವ ಶಾಸನಾತ್ಮಕ ಅಧಿಕಾರಗಳೇನು ಮತ್ತು ಯಾರು, ಯಾವಾಗ ಎಂತಹ ಸಂದರ್ಭಗಳಲ್ಲಿ ನಿಮ್ಮ ಈ ನಿ‌ರ್ಬಂಧ ಪಾಲಿಸಬೇಕು ಎಂಬುದನ್ನು ವಿವರಿಸಿ ಎಂದು ಹೈಕೋರ್ಟ್ ಸೂಚನೆ ನೀಡಿದೆ.

karnataka high court
ಹೈಕೋರ್ಟ್‌
author img

By ETV Bharat Karnataka Team

Published : Sep 2, 2023, 6:44 AM IST

ಬೆಂಗಳೂರು : ಇಂತಹದ್ದೇ ರಾಗದಲ್ಲಿ ನಾಡಗೀತೆ ಹಾಡಬೇಕು ಎಂದು ಸರ್ಕಾರ ಆದೇಶ ಹೊರಡಿಸುವಾಗ ಅದಕ್ಕಿರುವ ಶಾಸನಾತ್ಮಕ ಅಧಿಕಾರಗಳೇನು? ಮತ್ತು ಯಾರು?, ಯಾವಾಗ? ಎಂತಹ ಸಂದರ್ಭಗಳಲ್ಲಿ ನಿಮ್ಮ ಈ ನಿ‌ರ್ಬಂಧ ಪಾಲಿಸಬೇಕು ಎಂಬುದನ್ನು ನ್ಯಾಯಪೀಠಕ್ಕೆ ವಿವರಿಸಲು ಹೈಕೋರ್ಟ್ ಸರ್ಕಾರಕ್ಕೆ ಸೂಚನೆ ನೀಡಿದೆ.

ದಿವಂಗತ ಮೈಸೂರು ಅನಂತಸ್ವಾಮಿ ಸಂಯೋಜಿಸಿದ ಧಾಟಿಯಲ್ಲಿಯೇ ನಾಡಗೀತೆಯನ್ನು 2 ನಿಮಿಷ 30 ಸೆಕೆಂಡ್‌ಗಳಲ್ಲಿ ಹಾಡಬೇಕು ಎಂಬುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ 2022ರ ಸೆಪ್ಟೆಂಬರ್‌ 25 ರಂದು ಹೊರಡಿಸಿದ ಆದೇಶವನ್ನು ಪ್ರಶ್ನಿಸಿ ಸುಗಮ ಸಂಗೀತ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಸಲ್ಲಿಸಿರುವ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೂಚನೆ ನೀಡಿ, ವಿಚಾರಣೆ ಮುಂದೂಡಿತು.

ವಿಚಾರಣೆ ವೇಳೆ, ಅರ್ಜಿದಾರ ಕಿಕ್ಕೇರಿ ಕೃಷ್ಣಮೂರ್ತಿ ಪರ ಹಿರಿಯ ವಕೀಲ ಅಶೋಕ ಹಾರನಹಳ್ಳಿ, ‘ಜನಸಾಮಾನ್ಯರು ಇಂಥದೇ ರಾಗದಲ್ಲಿ ಹಾಡಬೇಕು ಎಂಬ ಷರತ್ತು ಸರಿಯಲ್ಲ. ರಾಜ್ಯ ಸರ್ಕಾರ ನಮ್ಮ ಸಂಗೀತದ ಸ್ವಾತಂತ್ರ್ಯ ಕಸಿದುಕೊಂಡಿದೆ. ಹಾಗಾಗಿ, ಸರ್ಕಾರ ಇದರ ಔಚಿತ್ಯವನ್ನು ಮನವರಿಕೆ ಮಾಡಿಕೊಡಬೇಕು ಎಂದು ಕೋರಿದರು.

ಇದಕ್ಕೆ ಪ್ರತಿಕ್ರಿಯಿಸಿದ ರಾಜ್ಯ ಸರ್ಕಾರದ ಪರ ಹಾಜರಾಗಿದ್ದ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಎಸ್‌.ಎ. ಅಹ್ಮದ್‌, "ಸರ್ಕಾರದ ಈ ಆದೇಶವನ್ನು ಸಂವಿಧಾನದ 162ನೇ ವಿಧಿಯಡಿ ತನಗಿರುವ ಪರಮಾಧಿಕಾರವನ್ನು ಬಳಸಿ ಇಂತಹದೇ ರಾಗದಲ್ಲಿ ಹಾಡುವಂತೆ ನಿರ್ಬಂಧ ವಿಧಿಸಿದೆ. ಇದನ್ನು ಸರ್ಕಾರದ ಅಧಿಕೃತ ಕಾರ್ಯಕ್ರಮಗಳು ಮತ್ತು ಸಾರ್ವಜನಿಕ ಸಮಾರಂಭಗಳಲ್ಲಿ ಮೈಸೂರು ಅನಂತಸ್ವಾಮಿ ಸಂಯೋಜಿಸದ ಧಾಟಿಯಲ್ಲೇ ಹಾಡುವಂತೆ ಆದೇಶಿಸಲಾಗಿದೆ" ಎಂದು ಸಮರ್ಥಿಸಿಕೊಂಡರು.

ಇದನ್ನು ಒಪ್ಪದ ನ್ಯಾಯಪೀಠ, ಈ ಪ್ರಕರಣದಲ್ಲಿ ಅರ್ಜಿದಾರರು ಎತ್ತಿರುವ ಪ್ರಶ್ನೆಯ ಅನುಸಾರ ಅವರು ತಮ್ಮ ಮನಸ್ಸಿಗೆ ಬಂದ ರಾಗದಲ್ಲಿ ಹಾಡಲು ನೀವೇಕೆ ನಿರ್ಬಂಧಿಸಿದ್ದೀರಿ ಎಂಬುದೇ ಆಗಿದೆ. ಹೀಗಾಗಿ, ಸರ್ಕಾರಕ್ಕೆ ಇರುವ ಶಾಸನಾತ್ಮ ಅಧಿಕಾರ ತಿಳಿಸುವಂತೆ ಸೂಚನೆ ನೀಡಿತು.

ಇದೇ ವೇಳೆ, ಮಧ್ಯಂತರ ಅರ್ಜಿದಾರ ಅಖಿಲ ಕರ್ನಾಟಕ ಸುಗಮ ಸಂಗೀತ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ಮೃತ್ಯುಂಜಯ ದೊಡ್ಡವಾಡ ಪರ ವಕೀಲರಾದ ಸಿ.ಎಚ್‌.ಹನುಮಂತರಾಯ ಅವರು ವಾದ ಮಂಡಿಸಿ, ನಾಡಗೀತೆಗಳನ್ನು 1919ರಲ್ಲಿ ಒಡಿಶಾ ರಾಜ್ಯದಲ್ಲಿ, 1965ರಲ್ಲಿ ಆಂಧ್ರಪ್ರದೇಶ, 2004ರಲ್ಲಿ ಕರ್ನಾಟಕ ನಂತರ ಏಳು ರಾಜ್ಯಗಳಲ್ಲಿ ಅಳವಡಿಸಿಕೊಳ್ಳಲಾಗಿದೆ. ಇನ್ನೈದು ರಾಜ್ಯಗಳಲ್ಲಿ ಅನಧಿಕೃತವಾಗಿ ಶಾಲಾ ಕಾಲೇಜು, ರಾಜ್ಯ ಸರ್ಕಾರ ಪ್ರಾಯೋಜಿತ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ನಾಡಗೀತೆಯನ್ನು ಹಾಡುವ ಪರಿಪಾಟ ಇದೆ ಎಂದರು.

ಇದನ್ನೂ ಓದಿ : ನಾಡಗೀತೆ ವಿಚಾರ: ಸಂಗೀತ ತಜ್ಞರು ನ್ಯಾಯಾಲಯಕ್ಕೆ ನೆರವಾಗುವಂತೆ ಹೈಕೋರ್ಟ್ ಸೂಚನೆ

ಆದರೆ, ಯಾವ ರಾಜ್ಯದಲ್ಲೂ ನಾಡಗೀತೆಯನ್ನು ಇಂಥದ್ದೇ ಧಾಟಿಯಲ್ಲಿ ಹಾಡಬೇಕೆಂಬುದಕ್ಕೆ ಕೈಗೊಳ್ಳಲಾದ ನಿರ್ಣಯದ ಸಾಂವಿಧಾನಿಕ ಮಾನ್ಯತೆಯನ್ನು ಪ್ರಶ್ನಿಸಲಾಗಿಲ್ಲ. ದೇಶದಲ್ಲೇ ಮೊಟ್ಟ ಮೊದಲ ಬಾರಿಗೆ ಇಂತಹದೊಂದು ಸಂದಿಗ್ಧವನ್ನು ಹೊಂದಿದ ಪ್ರಕರಣ ಇದಾಗಿದೆ. ಆದ್ದರಿಂದ, ಇದಕ್ಕೆ ತುಂಬಾ ಮಹತ್ವವಿದೆ ಎಂದು ವಿವರಿಸಿದರು. ವಾದ ಆಲಿಸಿದ ನ್ಯಾಯಪೀಠ, ಸರ್ಕಾರ ವಿಚಾರಣೆಗೆ ಸಿದ್ಧವಿದೆ ಎಂದು ನ್ಯಾಯಪೀಠಕ್ಕೆ ಮುಂಚಿತವಾಗಿ ತಿಳಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿತು.

ಇದನ್ನೂ ಓದಿ : ನಾಡಗೀತೆ ಹಾಡುವ ಕುರಿತು ಸಮಗ್ರ ಮಾಹಿತಿ ನೀಡಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.