ETV Bharat / state

ಕ್ಯಾಬಿನೆಟ್​​ ಒಪ್ಪಿಗೆ ಇಲ್ಲದೇ ಜಿಂದಾಲ್​ಗೆ ಭೂಮಿ ಪರಭಾರೆ: ಸರ್ಕಾರದ ಸ್ಪಷ್ಟ ನಿಲುವು ಕೇಳಿದ ಹೈಕೋರ್ಟ್​​

ಪರಭಾರೆ ವಿಚಾರದಲ್ಲಿ ಸರ್ಕಾರದ ನಿಲುವು ಪಾರದರ್ಶಕವಾಗಿರಬೇಕು. ಆದರೆ, ಸರ್ಕಾರದ ನಿರ್ಧಾರ ಅಸ್ಪಷ್ಟ, ಆಘಾತಕಾರಿಯಾಗಿದೆ. ಹೀಗಾಗಿ ಸಚಿವ ಸಂಪುಟದ ಸಮ್ಮತಿಯಿಲ್ಲದೇ, ಸರ್ಕಾರಿ ಆದೇಶದ ಮೂಲಕ ಜಮೀನು ಪರಭಾರೆ ಮಾಡಬಹುದೇ? ಎಂಬ ಬಗ್ಗೆ ಸರ್ಕಾರ ತನ್ನ ನಿಲುವು ಸ್ಪಷ್ಟಪಡಿಸಬೇಕು ಎಂದು ಸೂಚಿಸಿ, ವಿಚಾರಣೆಯನ್ನು ಜುಲೈ 16ಕ್ಕೆ ಮುಂದೂಡಿತು.

Karnataka high court
Karnataka high court
author img

By

Published : Jul 14, 2021, 2:58 AM IST

ಬೆಂಗಳೂರು : ವಿಜಯನಗರ ಜಿಲ್ಲೆಯ ಸಂಡೂರಿನಲ್ಲಿ ಜಿಂದಾಲ್ ಸಂಸ್ಥೆಗೆ 3,667 ಎಕರೆ ಜಮೀನು ಪರಭಾರೆ ಮಾಡುವ ಸಂಬಂಧ ಸರ್ಕಾರದ ನಿಲುವು ಅಸ್ಪಷ್ಟ ಮತ್ತು ಆಘಾತಕಾರಿ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಇದೇ ವೇಳೆ, ಸಚಿವ ಸಂಪುಟದ ಒಪ್ಪಿಗೆ ಇಲ್ಲದೆ ಸರ್ಕಾರಿ ಆದೇಶದ ಮೂಲಕವೇ ಭೂಮಿ ಪರಭಾರೆ ಮಾಡಲು ಸಾಧ್ಯವೇ ಎಂಬ ಬಗ್ಗೆ ಸರ್ಕಾರ ತನ್ನ ನಿಲುವು ಸ್ಪಷ್ಟಪಡಿಸುವಂತೆ ನಿರ್ದೇಶಿಸಿದೆ.

ಜಿಂದಾಲ್ ಸಂಸ್ಥೆಗೆ ಜಮೀನು ಪರಭಾರೆ ಮಾಡುವ ಸರ್ಕಾರದ ಕ್ರಮ ಪ್ರಶ್ನಿಸಿ ಬೆಂಗಳೂರಿನ ಕೆ.ಎ ಪಾಲ್ ಎಂಬುವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ವಿಭಾಗೀಯಪೀಠ ವಿಚಾರಣೆ ನಡೆಸಿತು. ಈ ವೇಳೆ ಸರ್ಕಾರದ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ, ಸಚಿವ ಸಂಪುಟ ಭೂಮಿ ಮಂಜೂರು ಮಾಡುವ ಸಂಬಂಧ ಅಂತಿಮ ತೀರ್ಮಾನ ಮಾಡಿಲ್ಲ. ಹಾಗೆಯೇ, ಸರ್ಕಾರ ಯಾವುದೇ ತೀರ್ಮಾನವನ್ನೂ ಕೈಗೊಂಡಿಲ್ಲ. ನ್ಯಾಯಾಲಯದ ಆದೇಶದ ನಂತರ ಮುಂದಿನ ತೀರ್ಮಾನ ಕೈಗೊಳ್ಳಲಿದೆ ಎಂದರು.ಇದಕ್ಕೆ ಆಕ್ಷೇಪಿಸಿದ ಅರ್ಜಿದಾರರ ಪರ ವಕೀಲರು, ಕಳೆದ ವಿಚಾರಣೆ ವೇಳೆ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಹೆಚ್ಚುವರಿ ಪ್ರಧಾನ ಕಾರ್ಯದರ್ಶಿ ಪ್ರಮಾಣಪತ್ರದಲ್ಲಿ ಕ್ಯಾಬಿನೆಟ್ ಒಪ್ಪಿಗೆ ಸಿಗುವವರೆಗೂ ಜಮೀನು ಪರಭಾರೆ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಜೊತೆಗೆ ಭೂಮಿ ನೀಡುವ ಪ್ರಸ್ತಾವ ತಡೆಹಿಡಿಯಲಾಗಿದೆ ಎಂದು ಹೇಳಿಕೆ ನೀಡಿದ್ದಾರೆ. ಹೀಗಾಗಿ ಈ ವಿಚಾರಕ್ಕೆ ಸಂಬಂಧಿಸಿದ ಮೂಲ ಕಡತ ಸಲ್ಲಿಸಲು ನಿರ್ದೇಶಿಸಬೇಕು ಎಂದು ಕೋರಿದರು.

ಇದನ್ನೂ ಓದಿರಿ: ಕಾರಿನ ಬಾನೆಟ್​ ಮೇಲೆ ಕುಳಿತು ಫೋಟೋ ಶೂಟ್​​... ವಧುವಿನ ವಿರುದ್ಧ ದಾಖಲಾಯ್ತು FIR

ಹೇಳಿಕೆಗೆ ಪ್ರತಿಕ್ರಿಯಿಸಿದ ಪೀಠ, ಇತ್ತ ಸಚಿವ ಸಂಪುಟದಲ್ಲಿ ಯಾವುದೇ ಅಂತಿಮ ತೀರ್ಮಾನವಾಗಿಲ್ಲ ಎನ್ನುತ್ತೀರಿ, ಅತ್ತ ಭೂಮಿ ಪರಭಾರೆ ಬಗ್ಗೆಯೂ ಮಾತನಾಡುತ್ತೀರಿ. ಪರಭಾರೆ ವಿಚಾರದಲ್ಲಿ ಸರ್ಕಾರದ ನಿಲುವು ಪಾರದರ್ಶಕವಾಗಿರಬೇಕು. ಆದರೆ, ಸರ್ಕಾರದ ನಿರ್ಧಾರ ಅಸ್ಪಷ್ಟ, ಆಘಾತಕಾರಿಯಾಗಿದೆ. ಹೀಗಾಗಿ ಸಚಿವ ಸಂಪುಟದ ಸಮ್ಮತಿಯಿಲ್ಲದೇ, ಸರ್ಕಾರಿ ಆದೇಶದ ಮೂಲಕ ಜಮೀನು ಪರಭಾರೆ ಮಾಡಬಹುದೇ? ಎಂಬ ಬಗ್ಗೆ ಸರ್ಕಾರ ತನ್ನ ನಿಲುವು ಸ್ಪಷ್ಟಪಡಿಸಬೇಕು ಎಂದು ಸೂಚಿಸಿ, ವಿಚಾರಣೆಯನ್ನು ಜುಲೈ 16ಕ್ಕೆ ಮುಂದೂಡಿತು.

ಅರ್ಜಿದಾರರ ಆರೋಪ : ವಿಜಯನಗರ ಜಿಲ್ಲೆಯ ಸಂಡೂರು ತಾಲೂಕಿನಲ್ಲಿ ಸುಮಾರು 3,667 ಎಕರೆ ಭೂಮಿಯನ್ನು ಸರ್ಕಾರ ಜಿಂದಾಲ್ ಸಂಸ್ಥೆಗೆ ಪರಭಾರೆ ಮಾಡಿದೆ. 2019ರಲ್ಲಿ ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ಸರ್ಕಾರ ಜಮೀನು ಪರಭಾರೆ ಮಾಡಲು ಮುಂದಾಗಿದ್ದಾಗ ವಿರೋಧ ಪಕ್ಷದಲ್ಲಿದ್ದ ಯಡಿಯೂರಪ್ಪ ನಿರ್ಧಾರವನ್ನು ವಿರೋಧಿಸಿದ್ದರು. ಆದರೆ, ಇದೀಗ ಯಡಿಯೂರಪ್ಪ ಸರ್ಕಾರವೇ ಖಾಸಗಿ ಸಂಸ್ಥೆಗೆ ಜಮೀನು ನೀಡಲು ಮುಂದಾಗಿದೆ ಎಂದು ಅಜಿರ್ದಾರರು ಆರೋಪಿಸಿದ್ದಾರೆ.ಅಲ್ಲದೆ, ಜಮೀನು ಪರಭಾರೆ ಕುರಿತು 2021ರ ಏಪ್ರಿಲ್ 26ರಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟದಲ್ಲಿ ಕೈಗೊಂಡ ನಿರ್ಧಾರ ರದ್ದುಪಡಿಸಬೇಕು. ಜಮೀನು ಪರಭಾರೆ ನಿರ್ಧಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಮೇಲುಸ್ತುವಾರಿಯಲ್ಲಿ ಸ್ವತಂತ್ರ ಸಂಸ್ಥೆಯೊಂದನ್ನು ನೇಮಿಸಬೇಕು. ಆ ಸಂಸ್ಥೆಯಿಂದ ವರದಿ ತರಿಸಿಕೊಳ್ಳಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.