ಕರ್ನಾಟಕ ಉಚ್ಛ ನ್ಯಾಯಾಲಯದಿಂದ ಹುದ್ದೆ ಭರ್ತಿಗೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಲಾಗಿದೆ. ಜಿಲ್ಲಾ ನ್ಯಾಯಾಲಯಗಳಲ್ಲಿ ಖಾಲಿ ಇರುವ ನ್ಯಾಯಾಧೀಶರ ಹುದ್ದೆಗಳು ಇವಾಗಿವೆ. ಒಟ್ಟು 14 ಹುದ್ದೆಗಳ ನೇಮಕಾತಿ ನಡೆಯಲಿದೆ. ಈಗಾಗಲೇ ವಕೀಲಿ ವೃತ್ತಿಯಲ್ಲಿ ಅನುಭವ ಹೊಂದಿರುವ ವಕೀಲರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆ ಕುರಿತು ಸಂಪೂರ್ಣ ಮಾಹಿತಿ, ಅರ್ಜಿ ಸಲ್ಲಿಕೆ ಮತ್ತು ಆಯ್ಕೆ ಪ್ರಕ್ರಿಯೆಗಳು ಈ ಕೆಳಗಿನಂತಿವೆ.
ಹುದ್ದೆ ವಿವರ: ಕರ್ನಾಟಕ ಹೈಕೋರ್ಟ್ನ ಅಧೀನದಲ್ಲಿರುವ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ 14 ಜಿಲ್ಲಾ ನ್ಯಾಯಾಧೀಶರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ: ಅಭ್ಯರ್ಥಿಗಳು ಅಧಿಕೃತ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಕಾನೂನು ಪದವಿ ಹೊಂದಿರಬೇಕು.
ಅನುಭವ: ಅಭ್ಯರ್ಥಿಗಳು ಹೈಕೋರ್ಟ್ ಅಥವಾ ಅದರ ಅಧೀನ ನ್ಯಾಯಾಲಯದಲ್ಲಿ ಕನಿಷ್ಠ 7 ವರ್ಷ ಹುದ್ದೆ ನಿರ್ವಹಣೆ ಮಾಡಿರುವ ಅನುಭವ ಹೊಂದಿರಬೇಕು.
ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 45 ವರ್ಷ ವಯೋಮಿತಿ ಹೊಂದಿರಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಗಮನಿಸಿ ಮುಂದುವರೆಯುವುದು ಅವಶ್ಯಕವಾಗಿದೆ. ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಗೆ ಪ್ರತ್ಯೇಕ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಪ್ರಿಲಿಮನರಿಗೆ ಪ.ಜಾ, ಪ.ಪಂ, ಪ್ರವರ್ಗ 1 ಅಭ್ಯರ್ಥಿಗಳಿಗೆ 500 ರೂ, ಇತರ ಅಭ್ಯರ್ಥಿಗಳಿಗೆ 1000 ರೂ ಅರ್ಜಿ ಶುಲ್ಕ ಇರುತ್ತೆ.
ಮುಖ್ಯ ಪರೀಕ್ಷೆಗೆ ಪ.ಜಾ, ಪ.ಪಂ, ಪ್ರವರ್ಗ 1 ಅಭ್ಯರ್ಥಿಗಳಿಗೆ 750 ರೂ, ಇತರ ಅಭ್ಯರ್ಥಿಗಳಿಗೆ 1500 ರೂ ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ.
ಆಯ್ಕೆ ಪ್ರಕ್ರಿಯೆ: ಈ ಹುದ್ದೆಗೆ ಪ್ರಿಲಿಮನರಿ, ಮುಖ್ಯ ಪರೀಕ್ಷೆ ಮತ್ತು ವೈವಾ ಮೂಲಕ ಆಯ್ಕೆ ಮಾಡಲಾಗುವುದು
ಈ ಹುದ್ದೆಗೆ ಅಕ್ಟೋಬರ್ 19ರಿಂದ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ನವೆಂಬರ್ 17 ಆಗಿದೆ. ಅರ್ಜಿ ಶುಲ್ಕ ಪಾವತಿಗೆ ಕಡೆಯ ದಿನಾಂಕ ನವೆಂಬರ್ 18 ಆಗಿರುತ್ತದೆ. ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ಸೇರಿದಂತೆ ಇನ್ನಿತರ ಮಾಹಿತಿಗೆ karnatakajudiciary.kar.nic.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.
ಇದನ್ನೂ ಓದಿ: ಕೋಲಾರ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ನೇಮಕಾತಿ; ಪಿಯುಸಿ ಆದವರಿಗೆ ಸುವರ್ಣಾವಕಾಶ