ETV Bharat / state

ಎಸಿಬಿಗೆ ಭ್ರಷ್ಟಾಚಾರ ಪ್ರಕರಣದ ತನಿಖಾ ವಿಧಾನವೇ ಗೊತ್ತಿಲ್ಲ: ಹೈಕೋರ್ಟ್ ಚಾಟಿ - etv bharat kannada

ಎಸಿಬಿಯು ತನಿಖೆಯಲ್ಲಿ ಕಾನೂನುಗಳನ್ನು ಸರಿಯಾಗಿ ಪಾಲಿಸುತ್ತಿಲ್ಲ. ಇಂತಹ ತಪ್ಪುಗಳನ್ನು ನೋಡಿಕೊಂಡು ನ್ಯಾಯಾಲಯ ಸುಮ್ಮನೆ ಕೂರಲಾಗದು ಎಂದು ಹೈಕೋರ್ಟ್​ ತರಾಟೆಗೆ ತಗೆದುಕೊಂಡರು.

karnataka-high-court-slams-anti-corruption-bureau
ಎಸಿಬಿಗೆ ಭ್ರಷ್ಟಾಚಾರ ಪ್ರಕರಣದ ತನಿಖಾ ವಿಧಾನವೇ ಗೊತ್ತಿಲ್ಲ: ಹೈಕೋರ್ಟ್ ಚಾಟಿ
author img

By

Published : Jul 28, 2022, 8:27 AM IST

ಬೆಂಗಳೂರು: ಎಸಿಬಿಗೆ ಭ್ರಷ್ಟಾಚಾರ ಪ್ರಕರಣಗಳಲ್ಲಿ ಹೇಗೆ ಸರಿಯಾಗಿ ತನಿಖೆ ನಡೆಸಬೇಕೆನ್ನುವ ವಿಧಾನವೇ ಸರಿಯಾಗಿ ತಿಳಿದಿಲ್ಲ. ತನಿಖಾ ಪದ್ಧತಿಯಲ್ಲಿ ಸಾಕಷ್ಟು ಲೋಪದೋಷಗಳಿವೆ ಎಂದು ಹೈಕೋರ್ಟ್ ಭ್ರಷ್ಟಾಚಾರ ನಿಗ್ರಹ ದಳಕ್ಕೆ ಮತ್ತೊಮ್ಮೆ ಚಾಟಿ ಬೀಸಿದೆ. ಹೈಕೋರ್ಟ್​​ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಎಸಿಬಿಯು ತನಿಖೆಯಲ್ಲಿ ಕಾನೂನುಗಳನ್ನು ಸರಿಯಾಗಿ ಪಾಲಿಸುತ್ತಿಲ್ಲ. ಇಂತಹ ತಪ್ಪುಗಳನ್ನು ನೋಡಿಕೊಂಡು ನ್ಯಾಯಾಲಯ ಸುಮ್ಮನೆ ಕೂರಲಾಗದು ಎಂದು ಎಸಿಬಿಯನ್ನು ತರಾಟೆಗೆ ತಗೆದುಕೊಂಡರು.

ತಮ್ಮ ಮೇಲಿನ ಭ್ರಷ್ಟಾಚಾರ ಪ್ರಕರಣದಲ್ಲಿ ಎಸಿಬಿ ಸರಿಯಾಗಿ ತನಿಖೆ ನಡೆಸದೇ ಮೊಕದ್ದಮೆ ದಾಖಲಿಸಿದ್ದರ ವಿರುದ್ಧ ಕೆಪಿಟಿಸಿಎಲ್‌ನ ಎಕ್ಸಿಕ್ಯೂಟಿವ್‌ ಎಂಜಿನಿಯರ್‌ ಕೆ.ಆರ್‌.ಕುಮಾರ್‌ ನಾಯ್ಕ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್ ಎಸಿಬಿ ವಿರುದ್ಧ ತನ್ನ ಅಸಮಾಧಾನ ವ್ಯಕ್ತಪಡಿಸಿದೆ. ಎಸಿಬಿಯು ಈ ಪ್ರಕರಣದಲ್ಲಿ ಕಾನೂನಿನ ಪ್ರಕ್ರಿಯೆಯನ್ನು ದುರ್ಬಳಕೆ ಮಾಡಿಕೊಂಡಿದೆ. ಇಂತಹ ತಪ್ಪು ನೋಡಿಯೂ ನ್ಯಾಯಾಲಯ ಮೌನವಾಗಿರಲು ಸಾಧ್ಯವಿಲ್ಲ ಎಂದು ತಿಳಿಸಿದೆ.

ಆತುರಾತುರವಾಗಿ ಎಸಿಬಿ ಮೂಲ ವರದಿ ಸಲ್ಲಿಸಿದೆ. ಒಂದೇ ದಿನದ 24 ಗಂಟೆಗಳಲ್ಲೇ ಮೂಲ ವರದಿ ಮತ್ತು ಎಫ್ಐಆರ್‌ ಸಿದ್ದಪಡಿಸಲಾಗಿದ್ದು, ಅಧಿಕಾರಿಯ ಸೇವಾವಧಿಯ ವಿವರವನ್ನ ಸಹ ನಮೂದಿಸಿಲ್ಲ. ಎಫ್ಐಆರ್‌ ದಾಖಲಿಸುವ ಮುನ್ನ ಅಧಿಕಾರಿಯ ವಾರ್ಷಿಕ ಸಂಬಳ ಪರಿಶೀಲಿಸಿಲ್ಲ. ಆಸ್ತಿಯ ವಾರ್ಷಿಕ ವರದಿ ಪರಾಮರ್ಶಿಸಿಲ್ಲ. ಈ ಪ್ರಕರಣದಲ್ಲಿ ಕಾನೂನಿನ ದುರುಪಯೋಗ ಮಾಡಿಕೊಳ್ಳಲಾಗಿದೆ ಎಂದು ಎಸಿಬಿಯ ತನಿಖೆಯ ತಪ್ಪುಗಳನ್ನು ಎಳೆಎಳೆಯಾಗಿ ನ್ಯಾಯಾಲಯದ ವಿಚಾರಣೆ ಸಂದರ್ಭದಲ್ಲಿ ಬಿಚ್ಚಿಟ್ಟಿತು.

ಕೆಪಿಟಿಸಿಎಲ್​ನಲ್ಲಿ ಎಕ್ಸಿಕ್ಯೂಟಿವ್‌ ಇಂಜಿನಿಯರ್‌ ಆಗಿ ಕೆಲಸ ಮಾಡುತ್ತಿದ್ದ ಕೆ.ಆರ್‌.ಕುಮಾರ್‌ ನಾಯ್ಕ್ ವಿರುದ್ಧ ಎಸಿಬಿ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣವನ್ನು ಮಾ.16ರಂದು ದಾಖಲಿಸಿತ್ತು. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಪ್ರಕರಣಗಳಲ್ಲಿ ಮೊದಲು ಮೂಲ ವರದಿ ಅಥವಾ ಸೋರ್ಸ್‌ ರಿಪೋರ್ಟ್‌ ಸಿದ್ಧಪಡಿಸಬೇಕು. ನಂತರ ಅದನ್ನು ಆಧರಿಸಿ ಎಫ್‌ಐಆರ್‌ ದಾಖಲಿಸಬೇಕು. ಆದರೆ ಇಲ್ಲಿ ಎಸಿಬಿ ಸಮರ್ಪಕ ಮೂಲ ವರದಿ ತಯಾರಿಸದೇ ಎಫ್‌ಐಆರ್‌ ದಾಖಲಿಸಿತ್ತು.

ಒಂದೇ ದಿನ ಅಂದರೆ 2022ರ ಮಾರ್ಚ್​​ 16ರಂದೇ ಮೂಲ ವರದಿ ಸಿದ್ಧಪಡಿಸಿ, ಅದೇ ದಿನ 24 ಗಂಟೆಗಳಲ್ಲಿ ಎಫ್‌ಐಆರ್‌ ದಾಖಲಿಸಿತ್ತು. ಎಸಿಬಿಯ ಈ ಕ್ರಮ ಕಾನೂನು ಬಾಹಿರವೆಂದು ಕುಮಾರ್‌ ನಾಯ್ಕ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ವಾದ ವಿವಾದದ ನಂತರ ಹೈಕೋರ್ಟ್ ಕುಮಾರ್‌ ನಾಯ್ಕ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣವನ್ನು ರದ್ದುಪಡಿಸಿ ಆದೇಶಿಸಿದೆ.

ಇದನ್ನೂ ಓದಿ: ಅರ್ಪಿತಾ ಮುಖರ್ಜಿ ನಿವಾಸದಲ್ಲಿ ಮತ್ತೆ ₹15 ಕೋಟಿ ನಗದು ಪತ್ತೆ.. ಮುಂದುವರಿದ ಎಣಿಕೆ ಕಾರ್ಯ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.