ಬೆಂಗಳೂರು: ಕರ್ನಾಟಕದಲ್ಲಿನ ಉದ್ಯೋಗಗಳಲ್ಲಿ ಕನ್ನಡಿಗರಿಗೇ ಮೊದಲ ಆದ್ಯತೆ ನೀಡಬೇಕೆಂದು ಅಗ್ರಹಿಸಿ ಕನ್ನಡಪರ ಸಂಘಟನೆಗಳು ಅಹೋರಾತ್ರಿ ಉಪವಾಸ ಸತ್ಯಾಗ್ರಹ ನಡೆಸುತ್ತಿವೆ.
ಈ ಹೋರಾಟಕ್ಕೆ ಹಲವಾರು ಸಂಘಟನೆಗಳು ಹಾಗೂ ಕನ್ನಡ ಚಿತ್ರೋದ್ಯಮ ಬೆಂಬಲ ಸೂಚಿಸಿವೆ. ನಟ ದುನಿಯಾ ವಿಜಯ್ ಸಹ ಈ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ.
ಕರ್ನಾಟಕದಲ್ಲಿ ಕನ್ನಡಿಗರಿಗೇ ಮೊದಲು ಉದ್ಯೋಗ ಸಿಗಬೇಕು. ಕನ್ನಡಿಗರಿಗೆ ದುಡಿಯುವ ಹಂಬಲ ಇದೆ. ಆದ್ರೆ, ಅವಕಾಶಗಳ ಕೊರತೆ ಹೆಚ್ಚಾಗಿದೆ. ಖಾಸಗಿ ವಲಯಗಳಲ್ಲಿ ಹೊರ ರಾಜ್ಯದವರ ಹಾವಳಿ ಹೆಚ್ಚಾಗಿದ್ದು, ಕನ್ನಡಿಗರಿಗೆ ಮೇಲೆ ದೌರ್ಜನ್ಯ ಮಾಡುತ್ತಿದ್ದಾರೆ ಎಂದು ವಿಜಯ್ ಆರೋಪಿಸಿದರು.
ಅಲ್ಲದೆ ಕರ್ನಾಟಕದಲ್ಲಿ ಹೆಣ್ಣು ಮಕ್ಕಳು ಸಹ ಉತ್ತಮ ವಿದ್ಯಾಭ್ಯಾಸ ಪಡೆಯುತ್ತಿದ್ದು, ಅವರಿಗೂ ಉದ್ಯೋಗದ ಕೊರತೆ ಕಾಡುತ್ತಿದೆ. ಅಲ್ಲದೆ ನಮ್ಮ ರಾಜ್ಯದಲ್ಲಿ ನಮ್ಮವರಿಗೇ ಉದ್ಯೋಗ ಕೊಡುವುದರಿಂದ ಶೇ.70 ರಷ್ಟು ಬಡತನ ನಿರ್ಮೂಲನೆಗೆ ಸಹಾಯವಾಗುತ್ತದೆ ಎಂದು ದುನಿಯಾ ವಿಜಯ್ ಅಭಿಪ್ರಾಯಪಟ್ಟರು.