ETV Bharat / state

ರಾಜ್ಯದಲ್ಲಿ ಪ್ರತಿದಿನ 20 ಸಾವಿರ ಕೊರೊನಾ  ಪರೀಕ್ಷೆ ನಡೆಸಲು ನಿರ್ಧಾರ: ಸಚಿವ ಸುಧಾಕರ್​​

author img

By

Published : Jun 16, 2020, 6:07 PM IST

ಕಳೆದ ಎರಡು ವಾರಗಳಲ್ಲಿ ಕೊರೊನಾ ಪಾಸಿಟಿವ್​​​ ಪ್ರಕರಣಗಳ ಸಂಖ್ಯೆ ದ್ವಿಗುಣ ಆಗಿದ್ದು, ಹೊರ ರಾಜ್ಯಗಳಲ್ಲಿ ಕೊರೊನಾ ನಿಯಂತ್ರಣ ಹೇಗೆ ಮಾಡ್ತಿದಾರೆ ಎಂಬ ಬಗ್ಗೆ ಪರಿಶೀಲನೆ ಮಾಡುತ್ತಿದ್ದೇವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಹೇಳಿದರು.

Minister K Sudhakar
ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಸುದ್ದಿಗೋಷ್ಠಿ

ಬೆಂಗಳೂರು: ಕೊರೊನಾ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಪ್ರತಿದಿನ 15ರಿಂದ 20 ಸಾವಿರವರೆಗೆ ಟೆಸ್ಟ್ ಮಾಡಲು ನಿರ್ಧರಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ತಿಳಿಸಿದ್ದಾರೆ.

ಕೋವಿಡ್-19​ ವಿರುದ್ಧ ಹೋರಾಟ ಹಾಗೂ ಮುಂದಿನ ರೂಪುರೇಷೆ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.

ಕಳೆದ ಎರಡು ವಾರಗಳಲ್ಲಿ ಕೊರೊನಾ ಪಾಸಿಟಿವ್​ ಪ್ರಕರಣಗಳ ಸಂಖ್ಯೆ ದ್ವಿಗುಣ ಆಗಿದ್ದು, ಹೊರ ರಾಜ್ಯಗಳಲ್ಲಿ ಕೊರೊನಾ ನಿಯಂತ್ರಣ ಹೇಗೆ ಮಾಡುತ್ತಿದ್ದಾರೆ ಎಂಬ ಬಗ್ಗೆ ಪರಿಶೀಲನೆ ಮಾಡುತ್ತಿದ್ದೇವೆ ಎಂದರು.

ಖಾಸಗಿ ಆಸ್ಪತ್ರೆಗಳು ಕೊರೊನಾ ಚಿಕಿತ್ಸೆಗೆ ಸರ್ಕಾರದ ಜೊತೆ ಪಾಲುದಾರಿಕೆ ತೆಗೆದುಕೊಳ್ಳಬೇಕು. ಸರ್ಕಾರದ ವತಿಯಿಂದ ಚಿಕಿತ್ಸಾ ದರ ನಿಗದಿ ಮಾಡುತ್ತೇವೆ. ಖಾಸಗಿ ಆಸ್ಪತ್ರೆಗಳಲ್ಲಿ ಟೆಸ್ಟ್ ಮಾಡಿಸಿದವರಿಗೆ ಪಾಸಿಟಿವ್ ಬಂದರೆ ವಿಕ್ಟೋರಿಯಾಗೆ ಕಳಿಸಲಾಗಿದ್ದು, ಖಾಸಗಿ ಆಸ್ಪತ್ರೆಗಳಲ್ಲಿ ವ್ಯವಸ್ಥೆ ಇದ್ದಾಗ ಅಲ್ಲೇ ಅವರನ್ನು ದಾಖಲು ಮಾಡಿಕೊಳ್ಳಬೇಕು ಎಂದರು.

ರೋಗದ ಲಕ್ಷಣ ಇಲ್ಲದೇ ಇರುವ ಪಾಸಿಟಿವ್ ಪ್ರಕರಣಗಳು ಕಂಡು ಬಂದರೆ ಕೋವಿಡ್ ಕೇರ್ ಸೆಂಟರ್​​​​​ಗೆ ದಾಖಲು ಮಾಡಿ ನಿಗಾ ಇಡುವುದು. ವೆಂಟಿಲೇಟರ್ಸ್, ಐಸಿಯು ಬೆಡ್ ಲಭ್ಯತೆ ಆಧಾರದ ಮೇಲೆ ರೋಗಿಗಳನ್ನು ದಾಖಲು ಮಾಡಲಾಗುತ್ತದೆ. ಇದನ್ನು ಒಂದು ಆ್ಯಪ್ ಮೂಲಕ ನಿಭಾಯಿಸಲಾಗುವುದು ಎಂದರು.

ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್

ಸಾಮೂಹಿಕ ಪರೀಕ್ಷೆ

ಹೊರ ರಾಜ್ಯದಿಂದ ಬಂದವರ ಮೇಲೆ ವಿಶೇಷ ನಿಗಾ ವಹಿಸಲಾಗುತ್ತದೆ. ಆಹಾರ, ಕೊರಿಯರ್, ಡೆಲಿವರಿ ಬಾಯ್ಸ್ ಸೇರಿದಂತೆ ಎಲ್ಲರಿಗೂ ಟೆಸ್ಟ್ ಮಾಡಲು ನಿರ್ಧಾರ ಮಾಡಲಾಗಿದೆ ಎಂದರು.

ಸಮುದಾಯಕ್ಕೆ ಸೋಂಕು ಹರಡಿದೆಯಾ ಎಂಬುದನ್ನು ತಿಳಿಯಲು ತ್ವರಿತ ರ್ಯಾಂಡಮ್ ಟೆಸ್ಟ್​​​​ಗೆ ನಿರ್ಧರಿಸಲಾಗಿದ್ದು, ಬೀದಿಬದಿ ವ್ಯಾಪಾರಿಗಳು, ಮಾಲ್​​​​ಗಳ ಸಿಬ್ಬಂದಿ, ಪೌರಕಾರ್ಮಿಕರು ಸೇರಿದಂತೆ ಸಾಮೂಹಿಕ ಟೆಸ್ಟ್​​​​ಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ತಜ್ಞರ ಸಮಿತಿ ರಚನೆ

ಸರ್ಕಾರದ 41 ಹಾಗೂ ಖಾಸಗಿಯ 29 ಲ್ಯಾಬ್ ಬಳಕೆ ಮಾಡಲಾಗುತ್ತದೆ. ಪ್ರತಿ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್-19 ಚಿಕಿತ್ಸೆಗೆ ಪ್ರತ್ಯೇಕ ವಾರ್ಡ್ ನಿಗದಿ ಮಾಡಲಾಗುವುದು. ಆಸ್ಪತ್ರೆಗಳ ಬೆಡ್ ಆಧಾರದ ಮೇಲೆ ಕೋವಿಡ್ ವಾರ್ಡ್ ನಿಗದಿ ಮಾಡಲಾಗುತ್ತದೆ. ಆಸ್ಪತ್ರೆಗಳ ಬೆಡ್ ಪ್ರಮಾಣ ಸೇರಿದಂತೆ ಖಾಸಗಿ ಆಸ್ಪತ್ರೆಗಳ ಸ್ಥಿತಿಗತಿ ತಿಳಿಯಲು ಮೂವರು ತಜ್ಞರನ್ನೊಳಗೊಂಡ ಸಮಿತಿ ರಚನೆ ಮಾಡಲಾಗಿದೆ ಎಂದರು.

ಬೆಂಗಳೂರಿನ ಸಿಸಿ ಕೇಂದ್ರಗಳಲ್ಲಿ ಜೂನ್ ಅಂತ್ಯದ ವೇಳೆಗೆ 25 ಸಾವಿರ ಬೆಡ್ ವ್ಯವಸ್ಥೆ ಮಾಡಲಾಗುತ್ತಿದೆ. ಖಾಸಗಿ ವೈದ್ಯಕೀಯ ಕಾಲೇಜ್, ಸ್ಟೇಡಿಯಂ, ಹೋಟೆಲ್ ಸೇರಿದಂತೆ ಹಲವು ಕಡೆ ಸಿಸಿ ಕೇಂದ್ರಗಳನ್ನು ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಾಪನೆ ಮಾಡಲಾಗಿದೆ. ತಜ್ಞರ ಸಲಹೆ, ದೇಶ ಹಾಗೂ ವಿದೇಶದಲ್ಲಿ ಆಗಿರುವ ಬೆಳವಣಿಗೆ ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದೆ ಎಂದರು.

ಲಾಕ್​​​​​ಡೌನ್ ಸಂಪೂರ್ಣ ಪರಿಹಾರ ಅಲ್ಲ. ಹಾಗಾಗಿ ಜೀವನವೂ ಮುಖ್ಯ. ಕೊರೊನಾ ನಿಯಂತ್ರಣವೂ ಮುಖ್ಯವಾಗಿದೆ. ಎಲ್ಲವೂ ಸಹಜ ಸ್ಥಿತಿಗೆ ಬಂದಿದ್ದು, ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದೆ. ಆಟೋ, ಬಸ್, ಕ್ಯಾಬ್ ಎಲ್ಲವೂ ಓಡಾಡ್ತಿವೆ. ಮೆಟ್ರೋ ರೈಲು ಓಡಾಟಕ್ಕೆ ಕೂಡಾ ಗ್ರೀನ್ ಸಿಗ್ನಲ್ ನೀಡುವ ಸುಳಿವನ್ನು ಸಚಿವರು ನೀಡಿದರು.

ವಿಕಾಸಸೌಧದಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿರುವುದು ನಿಜ. ಈ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತೇನೆ ಎಂದರು. ವಿಧಾನಸೌಧ ಹಾಗೂ ವಿಕಾಸಸೌಧದಲ್ಲಿ ಸ್ಯಾನಿಟೈಸರ್, ಥರ್ಮಲ್ ಟೆಸ್ಟ್ ಸೇರಿದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಪೂರ್ಣ ಅನ್​​​ಲಾಕ್​​​​ಗೆ ಸರ್ಕಾರ ಒಲವು..?

ಒಂದೆಡೆ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಮತ್ತೊಂದೆಡೆ ಪೂರ್ಣ ಅನ್​​​ಲಾಕ್​​​ಗೆ ಸರ್ಕಾರ ಒಲವು ತೋರಿಸಿದೆ. ಮೆಟ್ರೋ ರೈಲು ಸಂಚಾರಕ್ಕೆ ಅನುಮತಿ ನೀಡಲು ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಿದೆ ಎಂದು ಹೇಳಲಾಗುತ್ತಿದ್ದು, ಜುಲೈ 1ರಿಂದ ಮೆಟ್ರೋ ರೈಲು ಸಂಚಾರಕ್ಕೆ ಗ್ರೀನ್ ಸಿಗ್ನಲ್ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.