ETV Bharat / state

ರಸ್ತೆ ಸಂಪರ್ಕದಲ್ಲಿ ಕರ್ನಾಟಕ ಮಾದರಿ: ಬಿಹಾರ ಸಚಿವ ನಿತಿನ್ ನಬಿನ್ ಪ್ರಶಂಸೆ - ವಿಶ್ವಬ್ಯಾಂಕ್

ಇಂದು ಲೋಕೋಪಯೋಗಿ ಸಚಿವ ಸಿಸಿ ಪಾಟೀಲ್ ಅವರನ್ನು ಸಚಿವ ನಿತಿನ್ ನಬಿನ್​​ ಭೇಟಿಯಾಗಿದ್ದರು. ಈ ವೇಳೆ ಕರ್ನಾಟಕದಲ್ಲಿ ಕೈಗೊಳ್ಳುತ್ತಿರುವ ಹೆದ್ದಾರಿ ಮತ್ತು ರಸ್ತೆ ನಿರ್ಮಾಣ ಯೋಜನೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

Minister Nitin Nabin, CC Patil
ಸಚಿವ ನಿತಿನ್ ನಬಿನ್ , ಸಿಸಿ ಪಾಟೀಲ್​
author img

By

Published : Aug 27, 2021, 5:55 PM IST

ಬೆಂಗಳೂರು: ಕರ್ನಾಟಕ ವಿವಿಧ ಕ್ಷೇತ್ರಗಳಲ್ಲಿ ಸಾಧಿಸಿರುವ ಅಭಿವೃದ್ಧಿಗೆ ಇಲ್ಲಿಯ ಸುಸಜ್ಜಿತ ಹೆದ್ದಾರಿಗಳು ಮತ್ತು ಹೆಚ್ಚಿನ ಮೂಲ ಸೌಲಭ್ಯಗಳು ಕಾರಣ ಎಂದು ಬಿಹಾರ ರಸ್ತೆ ನಿರ್ಮಾಣ ಇಲಾಖೆ ಸಚಿವ ನಿತಿನ್ ನಬಿನ್ ಪ್ರಶಂಸಿಸಿದ್ದಾರೆ.

ವಿಕಾಸಸೌಧದಲ್ಲಿ ಇಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಅವರನ್ನು ಸಚಿವ ನಿತಿನ್ ನಬಿನ್​​ ಭೇಟಿಯಾಗಿದ್ದರು. ಈ ವೇಳೆ, ಕರ್ನಾಟಕದಲ್ಲಿ ಕೈಗೊಳ್ಳುತ್ತಿರುವ ಹೆದ್ದಾರಿ ಮತ್ತು ರಸ್ತೆ ನಿರ್ಮಾಣ ಯೋಜನೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

Minister Nitin Nabin, CC Patil
ಸಚಿವ ನಿತಿನ್ ನಬಿನ್ , ಸಿಸಿ ಪಾಟೀಲ್​

ಕರ್ನಾಟಕದಲ್ಲಿ ಮೂಲೆ ಮೂಲೆಗಳಿಗೂ ಅಳವಡಿಸಿರುವ ರಸ್ತೆ ಸಂಪರ್ಕವು ಇಡೀ ದೇಶದಲ್ಲೇ ಮಾದರಿಯಾಗಿದೆ. ರಾಜ್ಯ ಸಂಪರ್ಕ ಕ್ರಾಂತಿಯಲ್ಲಿ ಕೈಗೊಳ್ಳಲಾಗಿರುವ ಈ ಉತ್ತಮ ಸಾಧನೆಗಳ ಅಂಶಗಳನ್ನು ಬಿಹಾರವು ಭವಿಷ್ಯದಲ್ಲಿ ಅಳವಡಿಸಿಕೊಳ್ಳಲು ಪ್ರಯತ್ನಿಸಲಿದೆ ಎಂದು ಹೇಳಿದರು.

ಕರ್ನಾಟಕದಲ್ಲಿರುವ ರಾಷ್ಟ್ರೀಯ, ರಾಜ್ಯ ಹೆದ್ದಾರಿ ಮತ್ತು ಇತರ ರಸ್ತೆಗಳ ನಿರ್ವಹಣೆಯ ಕುರಿತು ಸಚಿವರು ಹೆದ್ದಾರಿ ಮತ್ತು ರಸ್ತೆಗಳ ನಿರ್ಮಾಣದಲ್ಲಿ ಅಳವಡಿಸಿಕೊಳ್ಳಲಾಗುತ್ತಿರುವ ಆಧುನಿಕ ತಂತ್ರಜ್ಞಾನಗಳ ಮಹತ್ವವನ್ನು ಬಿಹಾರದ ಸಚಿವರಿಗೆ ಮನವರಿಕೆ ಮಾಡಿಕೊಟ್ಟರು.

ಕರ್ನಾಟಕದಲ್ಲಿ ಕೃಷಿ, ಕೈಗಾರಿಕೆ ಮತ್ತು ಸೇವಾ ಕ್ಷೇತ್ರಗಳಿಗೆ ಹೆಚ್ಚಿನ ಅನುಕೂಲವಾಗುವಂತೆ ರಸ್ತೆಗಳ ಸಂಪರ್ಕ ಜಾಲವನ್ನು ಅಭಿವೃದ್ಧಿಪಡಿಸಲಾಗಿದೆ. ರಸ್ತೆಗಳ ನಿರ್ವಹಣೆಯಲ್ಲಿ ವಾಹನಗಳ ಸುರಕ್ಷತೆಗೂ ಆದ್ಯತೆ ನೀಡಲಾಗಿದೆ ಎಂದು ಪಾಟೀಲ್ ವಿವರಿಸಿದರು.

ವಿಶ್ವಬ್ಯಾಂಕ್ ಮತ್ತು ಕೇಂದ್ರ ಸರ್ಕಾರಗಳ ಸಹಯೋಗದಲ್ಲಿ ರಾಜ್ಯ ಸರ್ಕಾರ ಕೈಗೊಂಡಿರುವ ರಸ್ತೆ ನಿರ್ಮಾಣ ಮತ್ತು ಅಭಿವೃದ್ಧಿ ಯೋಜನೆಗಳ ಬಗ್ಗೆ, ರಸ್ತೆ ಮತ್ತು ಹೆದ್ದಾರಿಗಳ ಸಂಪರ್ಕಜಾಲದ ನಿರ್ಮಾಣ ಮತ್ತು ನಿರ್ವಹಣೆಯ ಬಗ್ಗೆ ಬಿಹಾರದ ಸಚಿವರಿಗೆ ಇಲಾಖೆ ಕಾರ್ಯದರ್ಶಿ ಕೃಷ್ಣ ರೆಡ್ಡಿ ಪ್ರಾತ್ಯಕ್ಷಿಕೆಯ ಮೂಲಕ ಮಾಹಿತಿ ನೀಡಿದರು.

ಈ ವೇಳೆ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ ಮುಖ್ಯ ಯೋಜನಾಧಿಕಾರಿ ಗುರುಪ್ರಸಾದ್, ರಾಷ್ಟ್ರೀಯ ಹೆದ್ದಾರಿ ಮುಖ್ಯ ಇಂಜಿನಿಯರ್ ಗೋವಿಂದರಾಜು ಸೇರಿದಂತೆ ಉಭಯ ರಾಜ್ಯಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಓದಿ: "5Kg ಅಕ್ಕಿ ಸಾಕು" ಎಂಬ ಹೇಳಿಕೆ ಸಮರ್ಥಿಸಿಕೊಂಡ ಸಚಿವ ಕತ್ತಿ: ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲೇ ವಾಗ್ದಾಳಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.