ETV Bharat / state

ದ್ವಿತೀಯ ಪಿಯುಸಿ ವಾಣಿಜ್ಯ ಶಾಸ್ತ್ರ ಪರೀಕ್ಷೆಗೆ 24,305 ವಿದ್ಯಾರ್ಥಿಗಳು ಗೈರು

ಸೋಮವಾರ ನಡೆದ ದ್ವಿತೀಯ ಪಿಯುಸಿ ವಾಣಿಜ್ಯ ಶಾಸ್ತ್ರ ಪರೀಕ್ಷೆಗೆ 3,95,582 ವಿದ್ಯಾರ್ಥಿಗಳು ಹಾಜರಾಗಿದ್ದರು. ಒಟ್ಟು 24,305 ವಿದ್ಯಾರ್ಥಿಗಳು ಗೈರಾಗಿದ್ದರು. ಶೇ.94.21ರಷ್ಟು ಹಾಜರಾತಿ ಇತ್ತು ಎಂದು ಶಿಕ್ಷಣ ಇಲಾಖೆ ಪ್ರಕಟಣೆ ತಿಳಿಸಿದೆ.

author img

By

Published : Mar 14, 2023, 7:17 AM IST

representative image
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಮಾರ್ಚ್ 9 ರಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಿವೆ. ನಿನ್ನೆ(ಸೋಮವಾರ) ವಾಣಿಜ್ಯ ಶಾಸ್ತ್ರ ಪರೀಕ್ಷೆ ನಡೆದಿದ್ದು ಒಟ್ಟು 24,305 ವಿದ್ಯಾರ್ಥಿಗಳು ಗೈರಾಗಿದ್ದಾರೆ. ರಾಜ್ಯಾದ್ಯಂತ ಮಾ.29 ರ ವರೆಗೆ ಪರೀಕ್ಷೆ ನಡೆಯಲಿದೆ. ಒಟ್ಟು 32 ಜಿಲ್ಲೆಗಳಿಂದ ಒಟ್ಟು 4,19,887 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ವಾಣಿಜ್ಯ ಶಾಸ್ತ್ರ ಪರೀಕ್ಷೆಗೆ 3,95,582 ವಿದ್ಯಾರ್ಥಿಗಳು ಹಾಜರಾಗಿದ್ದರು. ಒಟ್ಟು 24,305 ವಿದ್ಯಾರ್ಥಿಗಳು ಗೈರಾಗಿದ್ದು ಶೇ.94.21ರಷ್ಟು ಹಾಜರಾತಿ ಇತ್ತು ಎಂದು ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.

ಬಹುತೇಕ ಜಿಲ್ಲೆಗಳಲ್ಲಿ ಶೇ. 90ಕ್ಕಿಂತಲೂ ಹೆಚ್ಚಿನ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಬೀದರ್​​ನಲ್ಲಿ ಮಾತ್ರ ಶೇ. 87ರಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಶೈಕ್ಷಣಿಕ ಪ್ರಗತಿ ಜಿಲ್ಲೆಯಾದ ಉಡುಪಿ, ಚಿಕ್ಕಮಗಳೂರಿನಲ್ಲಿ ಶೇ.98 ರಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಅಹಿತಕರ ಘಟನೆ ನಡೆದ ಬಗ್ಗೆ ವರದಿ ಆಗಿಲ್ಲ. ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಅತ್ಯಂತ ಶಾಂತಿಯುತವಾಗಿ ನಡೆದಿದೆ.

Karnataka 2nd PUC exam 2023
ಶಿಕ್ಷಣ ಇಲಾಖೆ ಪ್ರಕಟಣೆ ಪ್ರತಿ

ಮೊದಲ ದಿನ 23,771 ವಿದ್ಯಾರ್ಥಿಗಳು ಗೈರು: ಮೊದಲ ದಿನ ಒಟ್ಟು 23,771 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದರು. ಒಟ್ಟು 32 ಜಿಲ್ಲೆಗಳಿಂದ 5,33,797 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಪ್ರಥಮ ಭಾಷೆ ಪರೀಕ್ಷೆಗೆ ಮಾ.9ರಂದು ಒಟ್ಟು 5,10,026 ವಿದ್ಯಾರ್ಥಿಗಳು ಹಾಜರಾಗಿದ್ದರು. ಒಟ್ಟು 23,771 ವಿದ್ಯಾರ್ಥಿಗಳು ಗೈರಾಗಿದ್ದು, ಶೇ.95.55ರಷ್ಟು ಹಾಜರಾತಿ ಇತ್ತು ಎಂದು ಇಲಾಖೆ ತಿಳಿಸಿತ್ತು.

ಇದನ್ನೂ ಓದಿ: ದ್ವಿತೀಯ ಪಿಯುಸಿ ಪರೀಕ್ಷೆ: ಮೊದಲ ದಿನ 23,771 ವಿದ್ಯಾರ್ಥಿಗಳು ಗೈರು.. ಇಬ್ಬರು ಡಿಬಾರ್

ವಿದ್ಯಾರ್ಥಿಗಳಿಗೆ ಹೂವು ನೀಡಿ ಸ್ವಾಗತಿಸಿದ ಸಚಿವ: 2023ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಪ್ರಾರಂಭವಾದ ದಿನ ತುಮಕೂರು ಜಿಲ್ಲೆಯ ತಿಪಟೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿಗಳಿಗೆ ಅವರು ಗುಲಾಬಿ ಹೂಗಳನ್ನು ನೀಡಿ ಸ್ವಾಗತಿಸಿದ್ದರು. ಧೈರ್ಯವಾಗಿ ಪರೀಕ್ಷೆ ಎದುರಿಸುವಂತೆ ಪರೀಕ್ಷಾರ್ಥಿಗಳಿಗೆ ಹೇಳಿದ್ದರು.

"ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಅಡಿಯಲ್ಲಿ ನಡೆಸಲಾಗುತ್ತಿದೆ. ಮಾ.9ರಿಂದ 29 ರ ವರೆಗೆ ಎಕ್ಸಾಂ ನಡೆಯಲಿದೆ. ರಾಜ್ಯಾದ್ಯಂತ 1,109 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದೆ. ಕಲಾ ವಿಭಾಗದಲ್ಲಿ 2,34,815, ವಾಣಿಜ್ಯ ವಿಭಾಗದಲ್ಲಿ 2,47,269 ಹಾಗೂ ವಿಜ್ಞಾನ ವಿಭಾಗದಲ್ಲಿ 2,44,129 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಒಟ್ಟು 5,716 ಕಾಲೇಜುಗಳಿಂದ 7.27 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ" ಎಂದು ಶಿಕ್ಷಣ ಸಚಿವರು ಮಾಹಿತಿ ನೀಡಿದ್ದರು.

ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಅತ್ಯಂತ ಶಾಂತಿಯುತವಾಗಿ ನಡೆಯುತ್ತಿದೆ. ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಮುಂದಾದ ಮಲ್ಲೇಶ್ವರ ಕಾಲೇಜಿನ ವಿದ್ಯಾರ್ಥಿನಿಯನ್ನು ಹೊರತುಪಡಿಸಿದರೆ ಬೇರೆ ಎಲ್ಲಿಯೂ ಹಿಜಾಬ್ ವಿಚಾರವಾಗಿ ಗೊಂದಲ ಸೃಷ್ಟಿ ಆಗಿಲ್ಲ. ಮಲ್ಲೇಶ್ವರ ಖಾಸಗಿ ಕಾಲೇಜಿನಲ್ಲಿಯೂ ಸಹ ಪ್ರಾಂಶುಪಾಲರು ವಿದ್ಯಾರ್ಥಿನಿ ಮನವೊಲಿಸಿ ಹಿಜಾಬ್​ ತೆಗೆದಿಟ್ಟು ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟಿದ್ದಾರೆ. ಉಳಿದಂತೆ ಎಲ್ಲಿಯೂ ಪರೀಕ್ಷೆಗೆ ತೊಡಕು ಎದುರಾಗಲಿಲ್ಲ.

ಇದನ್ನೂ ಓದಿ: ಪಿಯು ವಿದ್ಯಾರ್ಥಿಗಳಿಗೆ ಗುಲಾಬಿ ಹೂವು ನೀಡಿ ಸ್ವಾಗತಿಸಿದ ಶಿಕ್ಷಣ ಸಚಿವ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.