ಬೆಂಗಳೂರು: ರಾಜ್ಯದ ವಿವಿಧೆಡೆ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. 20 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಮುಂದಿನ 48 ಗಂಟೆಗಳಿಗೆ ಕರಾವಳಿಯ ಉತ್ತರ ಕನ್ನಡ, ಉಡುಪಿ. ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಅಲ್ಲಿಯೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮೀನುಗಾರರಿಗೆ ಎಚ್ಚರಿಕೆ: ಕರಾವಳಿ ತೀರದಲ್ಲಿ ಬಿರುಗಾಳಿಯ ವೇಗವು ಪ್ರತಿ ಗಂಟೆಗೆ 45ರಿಂದ 55 ಕಿ.ಮೀ. ಇರುವ ಸಾಧ್ಯತೆ ಇದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದೆ.
ಬೆಂಗಳೂರಲ್ಲೂ ಮಳೆ: ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದೆ. ಗುಡುಗಿನಿಂದ ಕೂಡಿದ ಮಳೆಯಾಗಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ 28 ಮತ್ತು 19 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ: ದಾವಣಗೆರೆಯಲ್ಲಿ ನಿರಂತರ ಮಳೆ: ಮನೆ, ತೋಟಕ್ಕೆ ನುಗ್ಗಿದ ಹಳ್ಳದ ನೀರು, ಜನಜೀವನ ಅಸ್ತವ್ಯಸ್ತ