ಬೆಂಗಳೂರು: ರಾಜ್ಯ ಸರ್ಕಾರ ಮರಾಠ ಅಭಿವೃದ್ಧಿ ನಿಗಮ ರಚಿಸಿರುವುದನ್ನು ಹಿಂಪಡೆಯುವಂತೆ ರಾಜ್ಯದ ನಾನಾ ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆ ನೀಡಿದ್ದು, ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣ, ಕೆ.ಆರ್ ಪುರದ ಬಿಬಿಎಂಪಿ ಕಚೇರಿ ಮುಂಭಾಗದಲ್ಲಿ ಪಂಜಿನ ಮೆರವಣಿಗೆ ನಡೆಸಿ ಬಂದ್ಗೆ ಬೆಂಬಲಿಸುವಂತೆ ಮನವಿ ಮಾಡಿದ್ದಾರೆ.
ಕೆ.ಆರ್ ಪುರ ಬಿಬಿಎಂಪಿ ಕಚೇರಿ ಮುಂಭಾಗ ಪಂಜಿನ ಮೆರವಣಿಗೆ ನಡೆಸಿ, ಕೆಲಕಾಲ ರಸ್ತೆ ತಡೆ ನಡೆಸಿದ್ರು. ರಾಜ್ಯ ಸರ್ಕಾರ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಧಿಕ್ಕಾರ ಕೂಗಿ ಅಕ್ರೋಶ ವ್ಯಕ್ತಪಡಿಸಿದರು.
ಇದೇ ವೇಳೆ ಮಾತನಾಡಿದ ಕರವೇ ಪ್ರವೀಣ್ ಶೆಟ್ಟಿ, ನಮ್ಮ ಹೋರಾಟ ಮರಾಠ ಅಭಿವೃದ್ಧಿ ಪ್ರಾಧಿಕಾರ ಹಿಂಪಡೆಯುವರೆಗೂ ಮುಂದುವರೆಯುತ್ತದೆ. ರಾಜ್ಯ ಸರ್ಕಾರ ವೋಟ್ ಬ್ಯಾಂಕ್ ರಾಜಕರಣ ಮಾಡುವುದಕ್ಕೆ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುತ್ತಿದೆ. ಮಹಾರಾಷ್ಟ್ರ ಉಪಮುಖ್ಯಮಂತ್ರಿ ಕನ್ನಡಿಗರ ವಿರೋದವಾಗಿ ಮಾತನಾಡುತ್ತಾರೆ , ಬೆಳಗಾವಿ ಎಂಇಎಸ್ ಸಂಘಟನೆ ಕನ್ನಡಿಗರನ್ನು ವಿರೋಧಿಸುತ್ತದೆ ಆದರೆ ನಮ್ಮ ಸರ್ಕಾರಕ್ಕೆ ಮರಾಠಿಗರ ಮೇಲೆ ಏಕೆ ಇಷ್ಟು ಕಾಳಜಿ ಎಂದು ಪ್ರಶ್ನಿಸಿದರು.
ದೇಶದ ಬೇರೆ ರಾಜ್ಯಗಳಲ್ಲಿ ಕನ್ನಡಿಗರು ವಾಸಿಸುತ್ತಿದ್ದಾರೆ ನಮ್ಮ ಕನ್ನಡಿಗರಿಗೆ ಯಾವ ರಾಜ್ಯದಲ್ಲೂ ಪ್ರಾಧಿಕಾರ ನೀಡಿಲ್ಲ. ಆದರೆ ಕರ್ನಾಟಕದಲ್ಲಿ ಮಾತ್ರ ಯಾಕೆ? ಎಂದರು ಪ್ರಶ್ನಿಸಿದರು. ಸರ್ಕಾರದ ವಿರುದ್ಧ ತಿವ್ರ ಹೋರಾಟ ಮಾಡುವ ಮೂಲಕ ಉಪವಾಸ ಸತ್ಯಾಗ್ರಹ ಆರಂಭಿಸುತ್ತೇವೆ ಎಂದು ಸರ್ಕರಕ್ಕೆ ಎಚ್ಚರಿಕೆ ನೀಡಿದ್ದಾರೆ.