ETV Bharat / state

ಎಚ್ಚೆತ್ತ ರಾಜ್ಯ ಸರ್ಕಾರ : ಕರ್ನಾಟಕ ಧಾರ್ಮಿಕ ಕಟ್ಟಡಗಳ (ಸಂರಕ್ಷಣೆ ) ವಿಧೇಯಕ ಮಂಡನೆ

ರಾಜ್ಯ ಸರ್ಕಾರ ನಿಯಮಾವಳಿ ರೂಪಿಸಿದ ಬಳಿಕ ಯಾವುದೇ ಧಾರ್ಮಿಕ ಕಟ್ಟಡಗಳನ್ನು ಹೊಸದಾಗಿಯೂ ನಿರ್ಮಿಸಲು ಅವಕಾಶ ಇಲ್ಲ. ಸರ್ಕಾರಕ್ಕೆ ಸೇರಿದ ಜಾಗದಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಮುಂದೆ ಧಾರ್ಮಿಕ ಕಟ್ಟಡಗಳ ನಿರ್ಮಾಣಕ್ಕೆ ಅವಕಾಶ ಇರುವುದಿಲ್ಲ ಎಂದು ವಿಧೇಯಕದಲ್ಲಿ ಪ್ರಸ್ತಾಪಿಸಲಾಗಿದೆ..

assembly
ವಿಧಾನಸಭೆ
author img

By

Published : Sep 20, 2021, 9:17 PM IST

ಬೆಂಗಳೂರು : ರಾಜ್ಯದಲ್ಲಿ ಧಾರ್ಮಿಕ ಕೇಂದ್ರಗಳ ತೆರವು ತಡೆಗಟ್ಟುವ ಕರ್ನಾಟಕ ಧಾರ್ಮಿಕ ಕಟ್ಟಡಗಳ (ಸಂರಕ್ಷಣೆ ) ವಿಧೇಯಕವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನಸಭೆಯಲ್ಲಿ ಇಂದು ಮಂಡಿಸಿದರು.

ಮೈಸೂರು ಜಿಲ್ಲೆಯ ನಂಜನಗೂಡು ದೇವಾಲಯ ತೆರವಿನ ಹಿನ್ನೆಲೆ ಕರ್ನಾಟಕದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇ‌ಂದು ಬೆಳಗ್ಗೆ ಸಚಿವ ಸಂಪುಟ ಸಭೆಯಲ್ಲಿ ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವು ಮಾಡದಿರಲು‌ ಸರ್ಕಾರ ನಿರ್ಣಯ ಮಾಡಿತ್ತು. ಎಲ್ಲಾ ಧರ್ಮಗಳ ಪ್ರಾರ್ಥನಾ ಮಂದಿರಗಳ ರಕ್ಷಣೆ ಬಗ್ಗೆ ವಿಧೇಯಕದಲ್ಲಿ ಪ್ರಸ್ತಾಪಿಸಲಾಗಿದೆ.

ಧಾರ್ಮಿಕ ಕೇಂದ್ರಗಳ ತೆರವಿನಿಂದ ತಪ್ಪಿಸಿಕೊಳ್ಳಲು ರಾಜ್ಯ ಸರ್ಕಾರ ಯೋಜನೆ ರೂಪಿಸಲಾಗಿದೆ. ವಿಧೇಯಕದ ಮೂಲಕ ಹೊಸ ನಿಯಮಾವಳಿ ರೂಪಿಸಲು ಸರ್ಕಾರ ನಿರ್ಧಾರ ಮಾಡಿದೆ. ನ್ಯಾಯಾಲಯದ ತೀರ್ಪು ಇದ್ದರೂ ಸರ್ಕಾರದ ನಿಯಮಗಳಿಗೆ ಒಳಪಟ್ಟಂತೆ ಇದ್ದರೆ ಆ ಧಾರ್ಮಿಕ ಸಂಸ್ಥೆಗಳನ್ನು ತೆರವು ಮಾಡುವಂತಿಲ್ಲ.

ಸರ್ಕಾರದ ನಿಯಮಾವಳಿಯಿಂದ ಹೊರಗೆ ಇದ್ದರೆ ಆ ಧಾರ್ಮಿಕ‌ ಸಂಸ್ಥೆಗಳ ಕಟ್ಟಡಗಳನ್ನ ಮಾತ್ರ ತೆರವು ಮಾಡಲಾಗುತ್ತದೆ. ಈ ವಿಧೇಯಕದ ಬಗ್ಗೆ ಸದನದಲ್ಲಿ ಚರ್ಚೆಗೆ ಬರಲಿದೆ. ಮಸೂದೆ ಅಂಗೀಕಾರಗೊಂಡ ಬಳಿಕ ವಾರದೊಳಗೆ ಹೊಸ ನಿಯಮಾವಳಿಗಳನ್ನು ತರುವ ಸಾಧ್ಯತೆ ಇದೆ.

ರಾಜ್ಯ ಸರ್ಕಾರ ನಿಯಮಾವಳಿ ರೂಪಿಸಿದ ಬಳಿಕ ಯಾವುದೇ ಧಾರ್ಮಿಕ ಕಟ್ಟಡಗಳನ್ನು ಹೊಸದಾಗಿಯೂ ನಿರ್ಮಿಸಲು ಅವಕಾಶ ಇಲ್ಲ. ಸರ್ಕಾರಕ್ಕೆ ಸೇರಿದ ಜಾಗದಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಮುಂದೆ ಧಾರ್ಮಿಕ ಕಟ್ಟಡಗಳ ನಿರ್ಮಾಣಕ್ಕೆ ಅವಕಾಶ ಇರುವುದಿಲ್ಲ ಎಂದು ವಿಧೇಯಕದಲ್ಲಿ ಪ್ರಸ್ತಾಪಿಸಲಾಗಿದೆ.

ಇನ್ನೂ ಎರಡು ವಿಧೇಯಕ ಮಂಡನೆ : 2021ನೇ ಸಾಲಿನ ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ತಿದ್ದುಪಡಿ) ವಿಧೇಯಕವನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರು ವಿಧಾನಸಭೆಯಲ್ಲಿ ಮಂಡಿಸಿದರು. ಅದೇ ರೀತಿ 2021ನೇ ಸಾಲಿನ ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ತಿದ್ದುಪಡಿ) ವಿಧೇಯಕವನ್ನು ಮಂಡಿಸಿದರು.

ವಿಧೇಯಕಗಳ ಅಂಗೀಕಾರ : ಕಂದಾಯ ಸಚಿವ ಆರ್. ಅಶೋಕ್​ ಅವರು ಮಂಡಿಸಿದ 2021ನೇ ಸಾಲಿನ ಕರ್ನಾಟಕ ಸ್ಟಾಂಪ್ (ತಿದ್ದುಪಡಿ) ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ದೊರೆಯಿತು. ಮುದ್ರಾಂಕ ಶುಲ್ಕ ಕಡಿತಕ್ಕೆ ತಿದ್ದುಪಡಿ ವಿಧೇಯಕ ಮಂಡಿಸಿದ್ದು, ಶೇ.5ರಷ್ಟು ಇರುವ ಮುದ್ರಾಂಕ ಶುಲ್ಕ ಶೇ.3ಕ್ಕೆ ಇಳಿಕೆಯಾಗಲಿದೆ. 45 ಲಕ್ಷಕ್ಕಿಂತ ಕಡಿಮೆ ಬೆಲೆ ಬಾಳುವ ಮನೆ ರಿಜಿಸ್ಟ್ರೇಷನ್​ಗೆ ಇನ್ಮುಂದೆ ಶೇ.3ರಷ್ಟು ಮಾತ್ರ ಮುದ್ರಾಂಕ ಶುಲ್ಕ ಕಟ್ಟಬೇಕಾಗುತ್ತದೆ. ಈ ಮೊದಲು ಶೇ.5ರಷ್ಟು ಮುದ್ರಾಂಕ ಶುಲ್ಕ ಇತ್ತು.

ಈ ವೇಳೆ ಮಾತನಾಡಿದ ಜೆಡಿಎಸ್ ಶಾಸಕ ಸಾ ರಾ ಮಹೇಶ್, ನಿವೇಶನಗಳಿಗೂ ಮುದ್ರಾಂಕ ಶುಲ್ಕ ಕಡಿಮೆ ಮಾಡಿ ಎಂದು ಮನವಿ ಮಾಡಿದರು. ಕೇವಲ ಮನೆಗಳಿಗೆ ಮಾತ್ರವಾದರೆ ಬಡವರಿಗೆ ಎಲ್ಲಿ ಸಹಾಯವಾಗಲಿದೆ. ಬೆಂಗಳೂರಿನ ನಾಗರಿಕರಿಗೆ ಮಾತ್ರ ಇದು ಸಹಾಯವಾಗುತ್ತದೆ. ರಾಜ್ಯದ ಇತರೆ ನಗರಗಳಲ್ಲಿ ಯಾವ ಸಹಾಯ ಆಗುತ್ತದೆ ಎಂದು ಪ್ರಶ್ನಿಸಿದರು.

ನಂತರ ಕಾಂಗ್ರೆಸ್ ಸದಸ್ಯ ಡಿ ಕೆ ಶಿವಕುಮಾರ್ ಮಾತನಾಡಿ, ಕೇವಲ ಬಿಲ್ಡರ್​​​​ಗಳಿಗೆ ಮಾತ್ರ ಸಹಾಯ ಮಾಡಲು ಈ ವಿಧೇಯಕ ತಂದಿದ್ದೀರಾ, ನಿಜವಾಗಲೂ ಬಡವರಿಗೆ ಸಹಾಯ ಮಾಡುವುದಾದರೆ ನಿವೇಶನಗಳಿಗೂ ರಿಯಾಯಿತಿ ನೀಡಿ ಎಂದರು. ಅದೇ ವೇಳೆ ಶೇ.3ರ ಬದಲು ಶೇ.1ರಷ್ಟು ಮುದ್ರಾಂಕ ಶುಲ್ಕ ಮಾಡಿ ಎಂದು ಮಾಜಿ ಸ್ಪೀಕರ್ ರಮೇಶ್‌ಕುಮಾರ್ ಸಲಹೆ ಮಾಡಿದರು.

ಅದೇ ರೀತಿ 2021ನೇ ಸಾಲಿನ ಕರ್ನಾಟಕ ಸೌಹಾರ್ದ ಸಹಕಾರಿ( ತಿದ್ದುಪಡಿ )ವಿಧೇಯಕಕ್ಕೂ ಅಂಗೀಕಾರ ದೊರೆಯಿತು. ಸೌಹಾರ್ದ ಸಹಕಾರ ಹಾಗೂ ಮಹಾಮಂಡಲಗಳಲ್ಲಿ ಕಾರ್ಯ ನಿರ್ವಹಿಸುವ ನೌಕರರು ಚುನಾವಣೆಗೆ ನಿಲ್ಲುವ ಆಗಿಲ್ಲ.

ಇದನ್ನೂ ಓದಿ: ಬೆಂಗಳೂರು ಆತ್ಮಹತ್ಯೆಯ ಡೆತ್‌ನೋಟ್‌: ಅಪ್ಪನ ರಾಸಲೀಲೆ, ದೌರ್ಜನ್ಯಗಳನ್ನು ಇಂಚಿಂಚೂ ವಿವರಿಸಿದ ಮಕ್ಕಳು!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.