ETV Bharat / state

‌ಶತಕ ದಾಟಿದ ಬ್ಲ್ಯಾಕ್ ಫಂಗಸ್ ಮೃತರ ಸಂಖ್ಯೆ; ರಾಜ್ಯದಲ್ಲಿ 1,784 ಪ್ರಕರಣ

ರಾಜ್ಯದಲ್ಲೂ ಸಹ ಕಪ್ಪು ಶಿಲೀಂದ್ರ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇಲ್ಲಿವರೆಗೆ ಒಟ್ಟು 1,784 ಜನರಿಗೆ ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡಿದೆ. ಒಟ್ಟು 111 ಜನ ಸಾವನ್ನಪ್ಪಿದ್ದಾರೆ ಹಾಗೂ 62 ಮಂದಿ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್​ ಮಾಹಿತಿ ನೀಡಿದ್ದಾರೆ.

black
black
author img

By

Published : Jun 5, 2021, 6:04 PM IST

ಬೆಂಗಳೂರು: ರಾಜ್ಯದಲ್ಲಿ ಈವರೆಗೆ 1,784 ಮಂದಿಗೆ ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡಿದೆ. ಇದರಲ್ಲಿ 62 ಮಂದಿ ಗುಣಮುಖರಾಗಿದ್ದಾರೆ. ಬರೋಬ್ಬರಿ 111 ಮಂದಿ ಸಾವಿಗೀಡಾಗಿದ್ದಾರೆ.

ಈ ಸಂಬಂಧ ಮಾಹಿತಿ ನೀಡಿರುವ ಸಚಿವ ಸುಧಾಕರ್, ಕಪ್ಪು ಶಿಲೀಂಧ್ರ ಸೋಂಕಿನ ಎಲ್ಲ ಜಿಲ್ಲಾವಾರು ಮಾಹಿತಿ ತರಿಸಿಕೊಳ್ಳಲಾಗಿದೆ. ರಾಜ್ಯಾದ್ಯಂತ ಈವರೆಗೆ 1,784 ಪ್ರಕರಣ ಕಂಡು ಬಂದಿವೆ. ಇದರಲ್ಲಿ 1,564 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಒಬ್ಬ ಸೋಂಕಿತನಿಗೆ ಕನಿಷ್ಠ 2-3 ವಾರ ಚಿಕಿತ್ಸೆ ಬೇಕಾಗುತ್ತದೆ. ಸಂಪೂರ್ಣ ಗುಣಮುಖರಾಗಲು 5-6 ವಾರ ಚಿಕಿತ್ಸೆ ನೀಡಬೇಕಾಗುತ್ತದೆ ಎಂದು ತಿಳಿಸಿದರು.

ಕಪ್ಪು ಶಿಲೀಂಧ್ರ ಸೋಂಕಿಗೆ ಅಂಪೊಟೆರಿಸಿನ್ - ಬಿ ಔಷಧ ವಯಲ್​ ಬೇಕಾಗುತ್ತದೆ. ಕೇಂದ್ರ ಸರ್ಕಾರವು 9,750 ವೈಯಲ್​​ಗಳನ್ನು ರಾಜ್ಯಕ್ಕೆ ಹಂಚಿಕೆ ಮಾಡಿದೆ. ಇದರಲ್ಲಿ 8,860 ವಯಲ್ ನಿನ್ನೆ ಬಂದಿದೆ. ಒಟ್ಟು 18,650 ವಯಲ್ ರಾಜ್ಯಕ್ಕೆ ದೊರೆತಿದೆ. ಸರ್ಕಾರಿ ಆಸ್ಪತ್ರೆಗಳಿಗೆ 8,860 ವಯಲ್ ಬಳಸಲಾಗಿದ್ದು, ಖಾಸಗಿ ಆಸ್ಪತ್ರೆಗಳು ಸೇರಿ ಬೇರೆ ಕಡೆಗಳಿಗೆ 9,740 ವಯಲ್ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

70 - 75 ಲಕ್ಷ ಜನರಿಗೆ ಈ ತಿಂಗಳೇ ಲಸಿಕೆ :

ಕೋವಿಡ್ ಲಸಿಕೆಯ 58 ಲಕ್ಷ ಡೋಸ್​ಗಳನ್ನು ನೀಡಲಾಗುವುದು. 70-75 ಲಕ್ಷ ಜನರಿಗೆ ಇದೇ ತಿಂಗಳಲ್ಲಿ ಲಸಿಕೆ ಹಾಕಲಾಗುವುದು. ರಾಜ್ಯದಲ್ಲಿ ಈವರೆಗೆ ಒಂದೂವರೆ ಕೋಟಿ ಜನರಿಗೆ ಲಸಿಕೆ ನೀಡಲಾಗಿದೆ. ಜೂನ್ ಅಂತ್ಯಕ್ಕೆ ರಾಜ್ಯದ 2.25 ಕೋಟಿ ಜನರಿಗೆ ಲಸಿಕೆ ನೀಡಲಾಗುವುದು. ಆದಷ್ಟು ಶೀಘ್ರದಲ್ಲೇ ಎಲ್ಲರಿಗೂ ಲಸಿಕೆ ದೊರೆಯಲಿದೆ ಎಂದರು.

ಆಯುಷ್ಮಾನ್ ಭಾರತ್ ಅಡಿ ಚಿಕಿತ್ಸೆಗೆ ಚರ್ಚೆ:

ಮಧ್ಯಮ ವರ್ಗದವರು, ಬಡವರ್ಗದವರು ಸರ್ಕಾರಿ ಆಸ್ಪತ್ರೆಗೆ ಬರುತ್ತಿದ್ದು, ಎಲ್ಲರಿಗೂ ಕಪ್ಪು ಶಿಲೀಂಧ್ರಕ್ಕೆ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಮುಖ್ಯಮಂತ್ರಿಗಳು ಹಿಂದೆಯೇ ಸಂಪೂರ್ಣ ಉಚಿತ ಚಿಕಿತ್ಸೆ ನೀಡುತ್ತೇವೆ ಎಂದು ಘೋಷಿಸಿದ್ದಾರೆ. ಒಬ್ಬರಿಗೆ 2-3 ಲಕ್ಷ ರೂ. ಖರ್ಚಾಗಲಿದ್ದು, ಸರ್ಕಾರವೇ ಭರಿಸುತ್ತಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಬ್ಲ್ಯಾಕ್ ಫಂಗಸ್ ಚಿಕಿತ್ಸೆ ಉಚಿತವಾಗಿ ನೀಡಲು ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕದಡಿ ಚಿಕಿತ್ಸೆ ನೀಡಬೇಕೆಂದು ಸಲಹೆ ಬಂದಿದೆ. ಈ ಕುರಿತು ಮಾತುಕತೆ ನಡೆಸಲಾಗುವುದು ಎಂದರು.

ಆಸ್ಪತ್ರೆಗಳಲ್ಲಿ ಪೋಸ್ಟ್ ಕೋವಿಡ್ ಕೇಂದ್ರ ರೂಪಿಸಲಾಗಿದೆ. ಕೋವಿಡ್ ನಿಂದ ಗುಣಮುಖರಾದವರಿಗೆ ಬೇರೆ ಸೋಂಕಿನ ಲಕ್ಷಣ ಕಂಡುಬಂದಾಗ, ಅದಕ್ಕೆ ಬೇಕಾದ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಲಾಗಿದೆ. ಈ ಚಿಕಿತ್ಸೆಯ ಕುರಿತು ವೈದ್ಯರಿಗೂ ತರಬೇತಿ ನೀಡಲಾಗುತ್ತಿದೆ. ಗುಣಮುಖರಾದ ಎಲ್ಲರಿಗೂ ಅಡ್ಡ ಪರಿಣಾಮ ಬರುವುದಿಲ್ಲ. ದೀರ್ಘ ಕಾಲ ಐಸಿಯುನಲ್ಲಿರುವವರು, ಹೆಚ್ಚು ಸ್ಟೀರಾಯಿಡ್ ಪಡೆದವರಲ್ಲಿ ಕೆಲವರಿಗೆ ಮಾತ್ರ ದುಷ್ಪರಿಣಾಮವಾಗುತ್ತಿದೆ. ಅದಕ್ಕೆ ಚಿಕಿತ್ಸೆ ನೀಡಲು ಬೇಕಾದ ಸಿದ್ಧತೆ ಮಾಡಲಾಗಿದೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.