ಬೆಂಗಳೂರು: ಸರ್ಕಾರಿ ಜಮೀನುಗಳಲ್ಲಿ ಅನಧಿಕೃತವಾಗಿ ಸಾಗುವಳಿ ಮಾಡುತ್ತಿರುವುದನ್ನು ಸಕ್ರಮಗೊಳಿಸುವ ನಿಟ್ಟಿನಲ್ಲಿ ನಮೂನೆ - 57ರಲ್ಲಿ ಸ್ವೀಕರಿಸಿದ ಅರ್ಜಿಗಳನ್ನು ತಂತ್ರಾಂಶದಲ್ಲಿ ಅಪ್ಲೋಡ್ ಮಾಡುವಂತೆ ಕಂದಾಯ ಇಲಾಖೆ ಅಧಿಸೂಚನೆ ಹೊರಡಿಸಿದೆ.
ಈ ಸಂಬಂಧ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿರುವ ಇಲಾಖೆಯು ಈ ಹಿಂದೆ ಮಾರ್ಚ್ 17, 2018 ರಿಂದ ಮಾರ್ಚ್ 16, 2019ರ ವರೆಗೆ ಅರ್ಜಿಗಳನ್ನು ಸ್ವೀಕರಿಸಲು ಕಾಲಾವಕಾಶ ನೀಡಿತ್ತು.
ಆ ಅವಧಿಯಲ್ಲಿ ಸ್ವೀಕರಿಸಿದ ಅರ್ಜಿಗಳನ್ನು ಅಂದು ಸಾರ್ವತ್ರಿಕ ಲೋಕಸಭಾ ಚುನಾವಣೆ ಘೋಷಣೆಯಾದ ಪ್ರಯುಕ್ತ ತಂತ್ರಾಂಶದಲ್ಲಿ ಅಪ್ಲೋಡ್ ಮಾಡಲು ಸಾಧ್ಯವಾಗಿರಲಿಲ್ಲ.
ಈ ಕಾರಣಕ್ಕೆ ಸದ್ಯ ಬಾಕಿ ಇರುವ ನಮೂನೆ 57ರ ಅರ್ಜಿಗಳ ಜಿಲ್ಲಾವಾರು ಮಾಹಿತಿಯನ್ನು ಜಿಲ್ಲಾಧಿಕಾರಿಗಳಿಗೆ ನೀಡಲಾಗಿದ್ದು, ಸದರಿ ಅರ್ಜಿಗಳನ್ನು ಮಾತ್ರ ಅಪ್ಲೋಡ್ ಮಾಡಲು ಮೇ1 ರಿಂದ ಜುಲೈ 31ರ ವರೆಗೆ ಕಾಲಾವಕಾಶವನ್ನು ನೀಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.