ETV Bharat / state

ಕೈಗಾರಿಕೆ ಬೆಳೆದು ರಫ್ತಿನಲ್ಲೂ ಕರ್ನಾಟಕ ನಂಬರ್ ಒನ್ ಆಗಬೇಕು: ಸಿದ್ದರಾಮಯ್ಯ ಆಶಯ

ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದ ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​​ನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಉದ್ದಿಮೆದಾರರಿಗೆ ರಾಜ್ಯ ಶ್ರೇಷ್ಠ ರಫ್ತು ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.

Awarded State Best Export Award to entrepreneurs.
ಸಿಎಂ ಸಿದ್ದರಾಮಯ್ಯ ಉದ್ದಿಮೆದಾರರಿಗೆ ರಾಜ್ಯ ಶ್ರೇಷ್ಠ ರಫ್ತು ಪ್ರಶಸ್ತಿ ಪ್ರದಾನ ಮಾಡಿದರು.
author img

By

Published : Jul 22, 2023, 4:24 PM IST

Updated : Jul 22, 2023, 9:26 PM IST

ಬೆಂಗಳೂರು: ಮಹಾರಾಷ್ಟ್ರ ಮತ್ತು ತಮಿಳುನಾಡು ಒಂದು ಮತ್ತು 2ನೇ ಸ್ಥಾನದಲ್ಲಿವೆ. ಕರ್ನಾಟಕ ರಫ್ತಿನಲ್ಲಿ ನಂಬರ್ ಒನ್ ಸ್ಥಾನಕ್ಕೆ ಏರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಶಯ ವ್ಯಕ್ತಪಡಿಸಿದರು. ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ಇಂದು ಆಯೋಜಿಸಿದ್ದ ಸಮಾರಂಭದಲ್ಲಿ ರಾಜ್ಯ ಶ್ರೇಷ್ಠ ರಫ್ತು ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು. ಕರ್ನಾಟಕ ರಫ್ತು ಮಾಡುವುದರಲ್ಲಿ ಮೊದಲಿನಿಂದಲೂ ಮುಂಚೂಣಿಯಲ್ಲಿದೆ. ಕೈಗಾರಿಕೆಗಳು ಅಭಿವೃದ್ಧಿಯಾಗಲು ಕೌಶಲ್ಯ ತರಬೇತಿಯುಳ್ಳ ಕಾರ್ಮಿಕರಿದ್ದರೆ ಮಾತ್ರ ಕೈಗಾರಿಕೆ ಬೆಳವಣಿಗೆಗೆ ಅನುಕೂಲವಾಗುತ್ತದೆ ಎಂಬ ಉದ್ದೇಶದಿಂದ ಕೌಶಲ್ಯಾಭಿವೃದ್ಧಿ ಇಲಾಖೆ ಪ್ರಾರಂಭಿಸಲಾಯಿತು. ಈಗ ಅದಕ್ಕೆ ಶಕ್ತಿ ತುಂಬುವ ಕೆಲಸ ಮಾಡಲಾಗುವುದು ಎಂದು ಅವರು ಅಭಯ ನೀಡಿದರು.

ಕರ್ನಾಟಕದ ಕೈಗಾರಿಕೆ ನೀತಿ ಹೆಚ್ಚು ಪ್ರಗತಿಪರ:ಹೊಸ ಕೈಗಾರಿಕೆ ನೀತಿಯನ್ನು ಸರ್ಕಾರ ಘೋಷಣೆ ಮಾಡಿದಾಗ ಕೈಗಾರಿಕೋದ್ಯಮಿಗಳು ನೀತಿ ಬೆಂಬಲಿಸಿ ಅದನ್ನು ಸ್ವಾಗತಿಸಿದರು. ಈಗಲೂ ಎಲ್ಲರೊಂದಿಗೆ ಚರ್ಚೆ ಮಾಡಿ ರಫ್ತು ಬೆಳವಣಿಗೆಗೆ ಪೂರಕವಾದಂಥ ಕೈಗಾರಿಕಾ ನೀತಿಯನ್ನು ರೂಪಿಸಲು ಕ್ರಮ ವಹಿಸಲಾಗುವುದು ಎಂದರು. ಎಂ.ಬಿ.ಪಾಟೀಲ್ ಅವರು ಕೈಗಾರಿಕೆ ಇಲಾಖೆ ನೇತೃತ್ವವನ್ನು ವಹಿಸಿದ್ದು, ಕರ್ನಾಟಕದಲ್ಲಿ ಕೈಗಾರಿಕೆ ಬೆಳವಣಿಗೆ ಆಗಬೇಕು ಎನ್ನುವ ಆಶಯವನ್ನು ಹೊಂದಿದ್ದು, ಕರ್ನಾಟಕ ಸರ್ಕಾರ ಎಲ್ಲ ರೀತಿಯ ಬೆಂಬಲವನ್ನು ಉದ್ಯಮಿಗಳಿಗೆ ನೀಡಲಿದೆ ಎಂದು ಭರವಸೆ ನೀಡಿದರು.

ಕೈಗಾರಿಕೆ ಬೆಳೆದರೆ ನಿರುದ್ಯೋಗ ಸಮಸ್ಯೆ ನಿವಾರಣೆಯಾಗಿ ದೇಶದ ಆರ್ಥಿಕತೆ ಬೆಳೆಯಲು ನೆರವಾಗಲಿದೆ. ಜಿಡಿಪಿ ಬೆಳೆದರೆ ರಾಜ್ಯ ಬೆಳೆಯಲು ಸಾಧ್ಯವಾಗಲಿದೆ. ರಾಷ್ಟ್ರದ ಜಿಡಿಪಿಗೆ ದೊಡ್ಡ ಕೊಡುಗೆ ರಾಜ್ಯದಿಂದ ಕೇಂದ್ರಕ್ಕೆ ಕೊಡಲು ಸಾಧ್ಯವಾಗುತ್ತದೆ. ಇವೆಲ್ಲ ಒಂದಕ್ಕೊಂದು ಸಂಬಂಧ ಹೊಂದಿದೆ. ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ ಹೂಡಿಕೆಗಳು ಬರುತ್ತಿವೆ ಎಂದು ಹೇಳಿದರು.

ಹೂಡಿಕೆಗಳು ಬಂದಲ್ಲಿ ಕೈಗಾರಿಕೆಗಳು ಬಂದು ನಿರುದ್ಯೋಗ ನಿವಾರಣೆಯಾಗುತ್ತದೆ. ಕರ್ನಾಟಕದ ಲ್ಲಿ ಉತ್ತಮ ಕಾನೂನು ಸುವ್ಯವಸ್ಥೆ ಕಲ್ಪಿಸಲಾಗುವುದು. ಮಾರುಕಟ್ಟೆಯಲ್ಲಿ ಬೇಡಿಕೆಯಲ್ಲಿರುವ ಉದ್ಯೋಗಿಗಳನ್ನು ಸೃಷ್ಟಿ ಮಾಡುವ ಕೆಲಸವನ್ನು ಸರ್ಕಾರ ಮಾಡುತ್ತದೆ. ಶ್ರೇಷ್ಠ ರಫ್ತು ಮಾಡಿ ರಾಜ್ಯಕ್ಕೆ ಕೀರ್ತಿ ತಂದಿರುವ ರಫ್ತುದಾರರನ್ನು ಈ ವೇಳೆ ಶ್ಲಾಘಿಸಿದರು.

ನಿರುದ್ಯೋಗ ಸಮಸ್ಯೆ ನಿವಾರಣೆಗೆ ಕ್ರಮ:ಸರ್ಕಾರ 5 ಗ್ಯಾರಂಟಿಗಳನ್ನು ಘೋಷಿಸಿ ಜಾರಿಗೊಳಿಸುತ್ತಿದೆ. ಯುವನಿಧಿಯಡಿ 2022-23ರಲ್ಲಿ ಪದವೀಧರರಾಗಿ ನಿರುದ್ಯೋಗಿಗಳಾಗಿರುವರಿಗೆ ಮೂರು ಸಾವಿರ ರೂ ನಿರುದ್ಯೋಗ ಭತ್ಯೆ ನೀಡಲಾಗುವುದು. ಡಿಪ್ಲೊಮಾ ಹೊಂದಿದವರಿಗೂ 1500 ರೂ ಭತ್ಯೆಯನ್ನು ನೀಡಲಾಗುವುದು. ಬಹುತೇಕ ಡಿಸೆಂಬರ್ ತಿಂಗಳಿನಲ್ಲಿ ಪ್ರಾರಂಭವಾಗಲಿದೆ. ಕೌಶಲ್ಯ ಇಲಾಖೆಯಿಂದ ಕೈಗಾರಿಕೆಗಳಿಗೆ ಅಗತ್ಯವಿರುವ ಉದ್ಯೋಗಿಗಳನ್ನು ತಯಾರು ಮಾಡುವ ಸಲುವಾಗಿ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಮಾರುಕಟ್ಟೆಗೆ ತಕ್ಕಂತೆ ಉದ್ಯೋಗಿಗಳನ್ನು ತಯಾರು ಮಾಡಿದರೆ, ನಿರುದ್ಯೋಗ ಸಮಸ್ಯೆ ಬಗೆಹರಿಯಲಿದೆ ಎಂದು ಹೇಳಿದರು.

ಕೈಗಾರಿಕೆ ಆರಂಭಿಸಲು ಪ್ರೋತ್ಸಾಹದಾಯಕ ವಾತಾವರಣ: ಇಂದು 68 ಉದ್ದಿಮೆಗಳಿಗೆ ಶ್ರೇಷ್ಠ ರಫ್ತು ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗಿದೆ. ರಫ್ತಿನಲ್ಲಿ ಸಾಧನೆ ಮಾಡಿರುವ ಉದ್ದಿಮೆಗಳಿಗೆ 1992-93 ರಿಂದ ಶ್ರೇಷ್ಠ ರಫ್ತು ಪ್ರಶಸ್ತಿಗಳನ್ನು ನೀಡುವ ಪರಿಪಾಠ ಪ್ರಾರಂಭಿಸಲಾಗಿದೆ. ರಾಜ್ಯ ಹಾಗೂ ಜಿಲ್ಲಾ ಮಟ್ಟದ ಉದ್ದಿಮೆಗಳನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ವಿಜೇತರು ಇತರ ಉದ್ದಿಮೆದಾರರಿಗೆ ಮಾದರಿ ಹಾಗೂ ಸ್ಪೂರ್ತಿಯಾಗಿದ್ದಾರೆ. ರಾಜ್ಯದಲ್ಲಿ ಉದ್ದಿಮೆಗಳ ಪ್ರಾರಂಭಕ್ಕೆ ಹಾಗೂ ಕೈಗಾರಿಕೆಗಳಿಗೆ ಪ್ರೋತ್ಸಾಹದಾಯಕ ವಾತಾವರಣ ಇದೆ. ಕರ್ನಾಟಕದಲ್ಲಿ ಸುಮಾರು 80ರ ದಶಕದಲ್ಲಿ ಕೈಗಾರಿಕಾ ನೀತಿ ರೂಪಿಸುವತ್ತ ಹೆಜ್ಜೆ ಇಡಲಾಗಿತ್ತು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಕೈಗಾರಿಕಾ ಸಚಿವ ಎಂ ಬಿ ಪಾಟೀಲ್, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂಓದಿ:ಹಾಲಿನ ಬೆಲೆ ಲೀಟರಿಗೆ 3 ರೂಪಾಯಿ ಹೆಚ್ಚಿಸಿ ಶ್ರಮಜೀವಿಗಳ ಕಿಸೆಗೆ ಕನ್ನ.. ಕಾಂಗ್ರೆಸ್ಸಿಗರು ಜನರ ತಲೆಯ ಮೇಲೆ ಫ್ಲವರ್ ಪಾಟ್ ಇಡುತ್ತಿದ್ದಾರೆ: ಕುಮಾರಸ್ವಾಮಿ ಕಿಡಿ

Last Updated : Jul 22, 2023, 9:26 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.