ಬೆಂಗಳೂರು: ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಗಮ ನಿಯಮಿತದ ವತಿಯಿಂದ 3 ಕೋಟಿ ರೂ.ಗಳ ದೇಣಿಗೆಯ ಚೆಕ್ ಅನ್ನು ಸಿಎಂ ಬೊಮ್ಮಾಯಿ ಅವರಿಗೆ ಹಸ್ತಾಂತರಿಸಲಾಯಿತು.
ರೇಸ್ ಕೋರ್ಸ್ ರಸ್ತೆಯಲ್ಲಿರುವ ಸಿಎಂ ಸರ್ಕಾರಿ ನಿವಾಸಕ್ಕೆ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಗಮದ ಅಧ್ಯಕ್ಷ ಮಾಡಾಳು ವಿರೂಪಾಕ್ಷಪ್ಪ ಭೇಟಿ ನೀಡಿ ಸಿಎಂ ಬೊಮ್ಮಾಯಿಯವರ ಜೊತೆ ಕೆಲಕಾಲ ಮಾತುಕತೆ ನಡೆಸಿದರು.
ನಂತರ ನಿಗಮದ ವತಿಯಿಂದ 3 ಕೋಟಿ ರೂ.ಗಳ ಚೆಕ್ ಅನ್ನು ಸಿಎಂ ನಿಧಿಗೆ ಸಲ್ಲಿಕೆ ಮಾಡಿದರು. ಈ ವೇಳೆ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಗೃಹ ಸಚಿವ ಆರಗ ಜ್ಞಾನೇಂದ್ರ,ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.
ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ