ಬೆಂಗಳೂರು: ನಿನ್ನೆ ಒಂದೇ ದಿನ ಕರ್ನಾಟಕದಲ್ಲಿ 29.50 ಲಕ್ಷ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿರುವ ಅವರು, ರಾಜ್ಯದಲ್ಲಿ 30 ಲಕ್ಷ ಲಸಿಕೆ ನೀಡುವ ಗುರಿ ಹಮ್ಮಿಕೊಂಡಿದ್ದೆವು. 29.50 ಲಕ್ಷ ಲಸಿಕೆ ನೀಡಿ ದಾಖಲೆ ಬರೆದಿದ್ದೇವೆ ಎಂದು ಮಾಹಿತಿ ನೀಡಿದರು.
ನಿನ್ನೆ ಒಂದೇ ದಿನ ಭಾರತದಲ್ಲಿ 2.50 ಕೋಟಿ ಲಸಿಕೆ ನೀಡಲಾಗಿದೆ. ಇಡೀ ವಿಶ್ವದಲ್ಲಿ ಈ ಮಟ್ಟದಲ್ಲಿ ಲಸಿಕೆ ಎಲ್ಲಿಯೂ ಕೊಟ್ಟಿರಲಿಲ್ಲ. ಕೋವಿಡ್ ಲಿಸಿಕಾ ಅಭಿಯಾನದಲ್ಲಿ ಭಾರತ ಮಹತ್ವದ ಸಾಧನೆ ಮಾಡಿದೆ ಎಂದಿದ್ದಾರೆ.
ಇಂದು ಸಂಜೆಯೊಳಗೆ ಇಲಾಖೆಯ ವೆಬ್ ಸೈಟ್ನಲ್ಲಿ ಮಾಹಿತಿಯನ್ನ ಅಪ್ಲೋಡ್ ಮಾಡಲಾಗುವುದು. ಇಡೀ ಭಾರತದಲ್ಲಿ ಕರ್ನಾಟಕ ರಾಜ್ಯ ಅತೀ ಹೆಚ್ಚು ಲಸಿಕೆ ನೀಡಿದ ರಾಜ್ಯವಾಗಿದೆ. ನಂತರದ ಸ್ಥಾನದಲ್ಲಿ ಗುಜರಾತ್, ಮಧ್ಯಪ್ರದೇಶ, ಬಿಹಾರ ಇವೆ. 14 ಜಿಲ್ಲೆಗಳಲ್ಲಿ ಟಾರ್ಗೆರ್ಟ್ಗಿಂತ ಹೆಚ್ಚು ಲಸಿಕೆ ನೀಡಲಾಗಿದೆ. ಇಡೀ ಭಾರತದಲ್ಲಿ ಕರ್ನಾಟಕದ ಎರಡು ಜಿಲ್ಲೆಗಳಲ್ಲಿ ಅತೀ ಹೆಚ್ಚು ಲಸಿಕೆ ನೀಡಲಾಗಿದೆ.
ಮೊದಲು ಬಿಬಿಎಂಪಿ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಲಿಸಿಕೆ ನೀಡಲಾಗಿದೆ. ನಂತರ ಬೆಳಗಾವಿ ಜಿಲ್ಲೆಯಲ್ಲಿಯೂ ಹೆಚ್ಚು ಲಸಿಕೆ ನೀಡಲಾಗಿದೆ. ಅಲ್ಲದೆ ಲಸಿಕೆ ಪಡೆಯುವುದರಲ್ಲಿ ಮಹಿಳೆಯರು ಮುಂದಿದ್ದು, ರಾಜ್ಯದಲ್ಲಿ ಈವರೆಗೆ 5 ಕೋಟಿ ಲಸಿಕೆ ಗುರಿ ತಲುಪಿದ್ದೇವೆ ಎಂದು ಸಚಿವರು ವಿವರಿಸಿದ್ದಾರೆ.
ಇದನ್ನೂ ಓದಿ: ಕೋರ್ ಕಮಿಟಿ ಸಭೆಯಲ್ಲಿ ಪಕ್ಷ ಬಲವರ್ಧನೆ ಬಗ್ಗೆ ಚರ್ಚೆ: ಮಾಜಿ ಸಿಎಂ ಬಿಎಸ್ವೈ